ಹೆಚ್ ​ಡಿ ರೇವಣ್ಣ-ಸಿದ್ದರಾಮಯ್ಯ ನಡುವೆ ಒಪ್ಪಂದ, ಪ್ರಜ್ವಲ್​​ ಪರಾರಿ: ಪ್ರಲ್ಹಾದ್ ಜೋಶಿ ಆರೋಪ

Date:

ಜೆಡಿಎಸ್ ಶಾಸಕ ಹೆಚ್ ​ಡಿ ರೇವಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಪ್ರಜ್ವಲ್​​ ರೇವಣ್ಣರನ್ನು ಓಡಿ ಹೋಗಲು ಸರ್ಕಾರ ಬಿಟ್ಟಿದ್ದೇಕೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನಿಸಿದರು.

- Advertisement -

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, “ಆರೋಪ ಕೇಳಿಬಂದಕೂಡಲೇ ಯಾಕೆ ಪ್ರಜ್ವಲ್ ವಿರುದ್ಧ ರಾಜ್ಯ ಸರ್ಕಾರ ಎಫ್​ಐಆರ್ ದಾಖಲಿಸಲಿಲ್ಲ? ರಾಜ್ಯದ ಪೊಲೀಸರು ಪ್ರಜ್ವಲ್​ರನ್ನು ಬಂಧಿಸಬೇಕಿತ್ತು ಅಲ್ವಾ?” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಇಲ್ಲಿ ದೂರು ದಾಖಲಾದರೆ ಕೇಂದ್ರ ಸರ್ಕಾರಕ್ಕೆ ಏನಾದರೂ ಕನಸು ಬೀಳುತ್ತದೆಯೇ? ಪ್ರಜ್ವಲ್ ಓಡಿಹೋಗಲು ಕೇಂದ್ರ ಸರ್ಕಾರದ ವಿಳಂಬ ನೀತಿ ಕಾರಣ ಎಂಬುದು ಕಾಂಗ್ರೆಸ್​​ನ ರಾಜಕೀಯ ಹೇಳಿಕೆ ಅಷ್ಟೇ” ಎಂದು ತಿರುಗೇಟು ನೀಡಿದರು.

“ರಾಜ್ಯ ಸರ್ಕಾರ ಕೂಡಲೇ ಎಫ್​ಐಆರ್​ ದಾಖಲಿಸಬೇಕಿತ್ತು. ಎಫ್​ಐಆರ್ ದಾಖಲಿಸುವ ಮೊದಲೇ ಯಾಕೆ ಆರೋಪಿಯನ್ನು ಬಂಧಿಸಲಿಲ್ಲ? ನಾವು ಪ್ರಜ್ವಲ್​ರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ನಮಗೆ ಪರಿಣಾಮವಾಗಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಈಗ ‘ಡಿಟೆನ್ಷನ್ ಸ್ಟೇಟ್’ – ಪ್ರತಿಭಟನಾಕಾರರ ಬಂಧನಕ್ಕೆ ಸಂಸದ ಸಂಜಯ್ ರಾವತ್ ಆಕ್ರೋಶ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳು, ಮಹಿಳೆಯರ ಮೇಲೆ ಹಲ್ಲೆ ಮಾಡಿದ ಹಿಂದೂ ರಕ್ಷಾ ದಳದ ನಾಲ್ವರ ಬಂಧನ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...