₹210 ಕೋಟಿ ವೆಚ್ಚದಲ್ಲಿ ವಾಹನ ಬಿಡಿಭಾಗ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Date:

Advertisements

ತುಮಕೂರಿನ ಬಳಿ ಇರುವ ಜಪಾನ್‌ ಕೈಗಾರಿಕಾ ಟೌನ್‌ಶಿಪ್‌ನಲ್ಲಿ ₹210 ಕೋಟಿ ವೆಚ್ಚದಲ್ಲಿ ವಾಹನ ಬಿಡಿಭಾಗಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸುವ ಒಪ್ಪಂದಕ್ಕೆ ಕೈಗಾರಿಕಾ ಸಲಕರಣೆಗಳನ್ನು ತಯಾರಿಸುವ ಜಪಾನಿನ ಅವೊಯಮಾ ಸೈಸಕುಷೊ ಕಂಪನಿಯು ಸಹಿ ಹಾಕಿದೆ.

ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಅವೊಯಮಾ ಸೈಸಕುಷೊ ಕಂಪನಿಯ ಅಧ್ಯಕ್ಷ ಯುಕಿಯೋಷಿ ಅವೊಯಮಾ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ಟೊಯೊಟಾ ಕಂಪನಿಯ ವಾಹನ ಬಿಡಿಭಾಗಗಳನ್ನು ತಯಾರಿಸುವ ಅವೊಯಮಾ, ತುಮಕೂರಿನ ಜಪಾನ್‌ ಕೈಗಾರಿಕಾ ಟೌನ್‌ಶಿಪ್‌ನಲ್ಲಿ ಈ ಘಟಕ ಸ್ಥಾಪಿಸಲು 20 ಎಕರೆ ಭೂಮಿಯನ್ನು ಗುರುತಿಸಿದೆ.

Advertisements

ರಾಜ್ಯದ ನಿಯೋಗವು ವಾಹನ ತಯಾರಿಕಾ ಬಹುರಾಷ್ಟ್ರೀಯ ಕಂಪನಿ ಟೊಯೊಟೊದ ಮುಖ್ಯಸ್ಥರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಕಂಪನಿಯ ಪ್ರಾಜೆಕ್ಟ್‌ ಜನರಲ್‌ ಮ್ಯಾನೇಜರ್‌ ಟಕಾವೊ ಐಬಾ, ಟೊಯೊಟಾ ಕಿರ್ಲೋಸ್ಕರ್‌ ಮೋಟರ್‌ನ ಹಿರಿಯ ಉಪಾಧ್ಯಕ್ಷ ಸುದೀಪ್‌ ಎಸ್‌. ದಳವಿ ಅವರು ಸಮಾಲೋಚನೆಯಲ್ಲಿ ಭಾಗಿಯಾಗಿದ್ದರು.

ರಾಜ್ಯದಲ್ಲಿನ ಟೊಯೊಟಾದ ಭವಿಷ್ಯದ ಹೂಡಿಕೆ ಅವಕಾಶಗಳ ಬಗ್ಗೆ ಚರ್ಚೆ ನಡೆಸಲಾಯಿತು. ಜಾಗತಿಕ ಹೂಡಿಕೆದಾರರಿಗೆ ಅನುಕೂಲಕರ ವಾತಾವರಣ ಸೃಷ್ಟಿಸಲು ಮತ್ತು ರಾಜ್ಯದ ಕೈಗಾರಿಕಾ ಸಾಮರ್ಥ್ಯಗಳನ್ನು ಹೆಚ್ಚಿಸುವ ರಾಜ್ಯ ಸರ್ಕಾರದ ಬದ್ಧತೆಯನ್ನು ಸಚಿವರು ಸಭೆಯಲ್ಲಿ ಪುನರುಚ್ಚರಿಸಿದರು. ಟೊಯೊಟಾ ಮತ್ತು ಅವೊಯಮಾ ಕಂಪನಿಗಳ ಜೊತೆಗಿನ ಸಮಾಲೋಚನೆಗಳು ಉದ್ಯಮ ಸ್ನೇಹಿ ಸೌಲಭ್ಯಗಳನ್ನು ಒದಗಿಸುವ ರಾಜ್ಯದ ಬದ್ಧತೆಗೆ ನಿದರ್ಶನಗಳಾಗಿವೆ.

ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಹೊಸ ಶುದ್ಧ ಇಂಧನ ಸಂಚಾರ ನೀತಿ ಹಾಗೂ ಗೌರಿಬಿದನೂರು, ಧಾರವಾಡದಲ್ಲಿ ವಾಹನ ತಯಾರಿಕಾ ಉದ್ಯಮದ ನೆರವಿಗಾಗಿ ಎರಡು ದೊಡ್ಡ ಕೈಗಾರಿಕಾ ಸಮೂಹಗಳನ್ನು ಸ್ಥಾಪಿಸಲಾಗುತ್ತಿರುವುದನ್ನು ನಿಯೋಗವು ಟೊಯೊಟಾದ ಮುಖ್ಯಸ್ಥರ ಗಮನಕ್ಕೆ ತಂದಿತು. ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಲು ಟೊಯೊಟಾಕ್ಕೆ ಅಗತ್ಯ ಇರುವ ಎಲ್ಲ ಬಗೆಯ ನೆರವನ್ನು ರಾಜ್ಯ ಸರ್ಕಾರದಿಂದ ಒದಗಿಸಲಾಗುವುದು ಎಂದು ಸಚಿವ ಪಾಟೀಲ ಅವರು ಭರವಸೆ ನೀಡಿದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X