ಕೃಷಿ ಮೇಳಗಳು ಜಾತ್ರೆಯಾಗದೇ ಕೃಷಿ ಕ್ಷೇತ್ರದ ಅಭಿವೃದ್ಧಿ ಹೆಚ್ಚಿಸಲಿ: ಸಿಎಂ ಸಿದ್ದರಾಮಯ್ಯ

Date:

Advertisements
  • ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸಬೇಕು
  • ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು: ಸಿದ್ದರಾಮಯ್ಯ

ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯಬೇಕು. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಆಯೋಜಿಸಲಾಗಿದ್ದ ಕೃಷಿಮೇಳ- 2023ಅನ್ನು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದು, ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ” ಎಂದರು

“ಒಣ ಬೇಸಾಯ ಮಾಡುವ ರೈತರ ಬಗ್ಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾದ ತಕ್ಷಣದ ಬೆಳೆಗಳನ್ನು ಮಾಡಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿ ವಹಿಸಿ, ಸಂಶೋಧನೆ ಮಾಡಬೇಕು” ಎಂದು‌ ಮುಖ್ಯಮಂತ್ರಿಗಳು ತಿಳಿಸಿದರು.

Advertisements

ಪ್ರಯೋಗಾಲಯದ ಸಂಶೋಧನೆ ರೈತರ ಭೂಮಿಗೆ ತಲುಪಬೇಕು

“ಲ್ಯಾಬ್ ಟು ಲ್ಯಾಂಡ್ ಅಂದರೆ ಪ್ರಯೋಗಾಲಯದ ಸಂಶೋಧನೆಗಳು ರೈತರ ಭೂಮಿಗೆ ತಲುಪಬೇಕು. ಅಂದಾಗ ಮಾತ್ರ ವಿಜ್ಞಾನಿಗಳ ಸಂಶೋಧನೆಗಳು ಫಲಪ್ರದವಾಗುತ್ತದೆ. ರೈತರಿಗೆ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರ
ಕೃಷಿ ಭಾಗ್ಯ, ಕೃಷಿ ಯಂತ್ರಧಾರೆ ಯೊಜನೆಗಳ ಮರುಜಾರಿ ಘೋಷಿಸಲಾಗಿದೆ. ರಾಜ್ಯದಲ್ಲಿ ಸಣ್ಣ ರೈತರು ಹೆಚ್ಚಿಗೆ ಇರುವದರಿಂದ ಉನ್ನತ ತಾಂತ್ರಿಕತೆ ಇರುವ ಕಟಾವು ಯಂತ್ರಗಳನ್ನು ರೈತರಿಗೆ ನೀಡಲು ಕ್ರಮ ವಹಿಸಲಾಗಿದೆ” ಎಂದು ಹೇಳಿದರು.

ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ

“ಕೋರಮಂಗಲ ಚಲ್ಲಘಟ್ಟ(ಕೆಸಿ) ವ್ಯಾಲಿ ಮೂಲಕ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಹೆಚ್ಚಳಕ್ಕೆ, ನೀರಾವರಿಗೆ ಅನಕೂಲ ಮಾಡಲಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ರಾಜ್ಯ ಸರಕಾರ ಈ ವರ್ಷದಿಂದ ರೈತರಿಗೆ ರೂ. 5 ಲಕ್ಷದವರೆಗೆ ಶೂನ್ಯ ಬಡ್ಡಿ ಸಾಲ ಮತ್ತು ರೂ.15 ಲಕ್ಷದವರೆಗೆ ಕೇವಲ ಶೇ. 3 ರಷ್ಟು ಬಡ್ಡಿ ನಿಗದಿಗೊಳಿಸಿ, ಕ್ರಮಕೈಗೊಳ್ಳಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ನಿರ್ನಾಮ ಮಾಡಲು ಜೆಡಿಎಸ್ ಜೊತೆಗೆ ಮೈತ್ರಿ: ಕೆ ಎಸ್‌ ಈಶ್ವರಪ್ಪ

ಬೆಣ್ಣಿಹಳ್ಳ ಯೋಜನೆ: ಶೀಘ್ರ ಜಾರಿ

“ಬೆಣ್ಣಿಹಳ್ಳ ಯೋಜನೆಯನ್ನು ಡಿಪಿಆರ್ ಮಾಡಿಸಿ, ಶೀಘ್ರವಾಗಿ ಜಾರಿಗೊಳಿಸಲಾಗುವುದು. ಧಾರವಾಡ ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ರೈತರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಕ್ರಮ ವಹಿಸಲಾಗುವುದು” ಎಂದು ಹೇಳಿದರು.

ಯಾರಿಗೂ ಭಯಬೇಡ

“ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿಗೆ ಹಣದ ಕೊರತೆ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ. ಸರಕಾರದ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರೆಯಲಿವೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ. ಮುಂದಿನ ವರ್ಷದಿಂದ ಪ್ರತಿವರ್ಷ ಪಂಚ ಗ್ಯಾರಂಟಿಗಳ ಜಾರಿಗೆ ಸುಮಾರು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯ ಹಣ ಹೊಂದಿಸಲು ಸರಕಾರ ಸಶಕ್ತವಾಗಿದೆ. ಯಾರಿಗೂ ಭಯಬೇಡ. ಪಂಚ ಗ್ಯಾರಂಟಿಗಳ ವೆಚ್ಚ ಸೇರಿ ಮುಂದಿನ ವರ್ಷದ ಬಜೆಟ್ ಸುಮಾರು 380 ಲಕ್ಷ ಕೋಟಿಗಳಾಗುವ ಅಂದಾಜಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೃಷಿ ಸಚಿವ ಹಾಗೂ ಕೃಷಿವಿವಿ ಸಮ ಕುಲಾಧಿಪತಿ ಎನ್. ಚಲುವರಾಯಸ್ವಾಮಿ ಅವರು ಕೃಷಿ ವಿವಿಯ ವಿಶೇಷ ಪ್ರಕಟಣೆಗಳನ್ನು ವೇದಿಕೆಯಲ್ಲಿ ಬಿಡುಗಡೆ ಮಾಡಿದರು. ಶ್ರೇಷ್ಠ ಕೃಷಿ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆಯರಿಗೆ, ಪ್ರಗತಿಪರ ರೈತರಿಗೆ ಮುಖ್ಯಮಂತ್ರಿಗಳು ಪ್ರಶಸ್ತಿ ವಿತರಿಸಿ, ಗೌರವಿಸಿದರು.

ಕೃಷಿ ಸಚಿವ ಎನ್. ಚಲುರಾಯಸ್ವಾಮಿ, ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್, ವಿಧಾನ ಪರಿಷತ್ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X