ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ

Date:

ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ ಮಾಡಲು ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ತಿಳಿಸಿದ್ದಾರೆ.

- Advertisement -

ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಲ್‌ಗೆ 5,650 ರೂ. ಗಳಂತೆ ಖರೀದಿ ಮಾಡಲಾಗುವುದು. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೇಂದ್ರ ಸರ್ಕಾರ ನಾಫೆಡ್‌ ಮತ್ತು ಎನ್‌ಸಿಸಿಎಫ್‌ ಸಂಸ್ಥೆಗಳನ್ನು ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳಿ ಮತ್ತು ಕಲಬುರಗಿಯ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿಯನ್ನು ಖರೀದಿ ಸಂಸ್ಥೆಗಳನ್ನಾಗಿ ನೇಮಕ ಮಾಡಿ ಕಡಲೆಕಾಳು ಖರೀದಿ ಮಾಡಬೇಕಾದ ಜಿಲ್ಲೆಗಳನ್ನು ಹಂಚಿಕೆ ಮಾಡಲಾಗಿದೆ. ರೈತರು ತಮ್ಮ ಸಮೀಪದ ಟಿ.ಎ.ಪಿ.ಸಿ.ಎಂ.ಎಸ್‌, ಎಫ್‌.ಪಿ.ಒ ಹಾಗೂ ಪಿ.ಎ.ಸಿ.ಎಸ್‌. ಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು.

ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಬಾಗಲಕೋಟೆ, ದಾವಣಗೆರೆ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ಅವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...