ಪಂಜಾಬ್‌ನಲ್ಲಿ ನವೆಂಬರ್ 13ರಂದು ವಿಧಾನಸಭಾ ಉಪಚುನಾವಣೆ ನಡೆಯಲಿದೆ. ಈ ನಡುವೆ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಹಿರಿಯ ನಾಯಕ ಮತ್ತು ಮಾಜಿ ಸಚಿವ ಸೋಹನ್ ಸಿಂಗ್ ತಾಂಡಲ್ ಹೋಶಿಯಾರ್‌ಪುರದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಬಿಜೆಪಿ ಪಂಜಾಬ್ ಉಸ್ತುವಾರಿ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಾಜಿ ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರು ಸೋಹನ್ ತಾಂಡಲ್ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.
ಸೋಹನ್ ತಾಂಡಲ್ ಅವರು ಚಬ್ಬೇವಾಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕ್ಷೇತ್ರಕ್ಕೆ ಇನ್ನೂ ಕೂಡಾ ಬಿಜೆಪಿ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ.
ಇದನ್ನು ಓದಿದ್ದೀರಾ? ವಿಧಾನ ಪರಿಷತ್ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು
2024ರ ಲೋಕಸಭಾ ಚುನಾವಣೆಯಲ್ಲಿ ಹೋಶಿಯಾರ್‌ಪುರ ಸಂಸದೀಯ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಸ್‌ಎಡಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಸೋಹನ್ ತಾಂಡಲ್ ಸೋಲು ಕಂಡಿದ್ದರು.
ಎಸ್‌ಎಡಿ ಕೋರ್ ಕಮಿಟಿ ಸದಸ್ಯರಾಗಿದ್ದ ತಾಂಡಲ್ ಅವರು 2012ರ ವಿಧಾನಸಭಾ ಚುನಾವಣೆಯಲ್ಲಿ ಚಬ್ಬೇವಾಲ್ ಕ್ಷೇತ್ರದಲ್ಲಿ ಗೆದ್ದರು. 2017 ಮತ್ತು 2022ರಲ್ಲಿ ಮರು ಆಯ್ಕೆಯಾಗುವ ಅವರ ಪ್ರಯತ್ನ ವಿಫಲವಾಗಿದೆ. ತಾಂಡಲ್ ಪಂಜಾಬ್‌ನ ಅಕಾಲಿ ಸರ್ಕಾರದಲ್ಲಿ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿದ್ದರು.
ನವೆಂಬರ್ 13ರಂದು ಪಂಜಾಬ್‌ನಲ್ಲಿ ವಿಧಾನಸಭೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಹಾಗಾಗಿ ನಾಳೆಯೊಳಗೆ ಸೋಹನ್ ತಾಂಡಲ್ ಚಬ್ಬೇವಾಲ್ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಖಚಿತ ನಿರ್ಧಾರವಾಗಲಿದೆ.
