ಪಂಜಾಬ್ ಉಪಚುನಾವಣೆ | ಶಿರೋಮಣಿ ಅಕಾಲಿದಳ ನಾಯಕ ಸೋಹನ್ ತಾಂಡಲ್ ಬಿಜೆಪಿ ಸೇರ್ಪಡೆ

Date:

ಪಂಜಾಬ್‌ನಲ್ಲಿ ನವೆಂಬರ್ 13ರಂದು ವಿಧಾನಸಭಾ ಉಪಚುನಾವಣೆ ನಡೆಯಲಿದೆ. ಈ ನಡುವೆ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಹಿರಿಯ ನಾಯಕ ಮತ್ತು ಮಾಜಿ ಸಚಿವ ಸೋಹನ್ ಸಿಂಗ್ ತಾಂಡಲ್ ಹೋಶಿಯಾರ್‌ಪುರದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

- Advertisement -

ಬಿಜೆಪಿ ಪಂಜಾಬ್ ಉಸ್ತುವಾರಿ ಮತ್ತು ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಾಜಿ ಕೇಂದ್ರ ಸಚಿವ ಸೋಮ್ ಪ್ರಕಾಶ್ ಅವರು ಸೋಹನ್ ತಾಂಡಲ್ ಅವರನ್ನು ಬಿಜೆಪಿಗೆ ಸ್ವಾಗತಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸೋಹನ್ ತಾಂಡಲ್ ಅವರು ಚಬ್ಬೇವಾಲ್ (ಎಸ್‌ಸಿ) ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಈ ಕ್ಷೇತ್ರಕ್ಕೆ ಇನ್ನೂ ಕೂಡಾ ಬಿಜೆಪಿ ತನ್ನ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ.

ಇದನ್ನು ಓದಿದ್ದೀರಾ? ವಿಧಾನ ಪರಿಷತ್ ಉಪಚುನಾವಣೆ | ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು

2024ರ ಲೋಕಸಭಾ ಚುನಾವಣೆಯಲ್ಲಿ ಹೋಶಿಯಾರ್‌ಪುರ ಸಂಸದೀಯ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಎಸ್‌ಎಡಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಸೋಹನ್ ತಾಂಡಲ್ ಸೋಲು ಕಂಡಿದ್ದರು.

ಎಸ್‌ಎಡಿ ಕೋರ್ ಕಮಿಟಿ ಸದಸ್ಯರಾಗಿದ್ದ ತಾಂಡಲ್ ಅವರು 2012ರ ವಿಧಾನಸಭಾ ಚುನಾವಣೆಯಲ್ಲಿ ಚಬ್ಬೇವಾಲ್‌ ಕ್ಷೇತ್ರದಲ್ಲಿ ಗೆದ್ದರು. 2017 ಮತ್ತು 2022ರಲ್ಲಿ ಮರು ಆಯ್ಕೆಯಾಗುವ ಅವರ ಪ್ರಯತ್ನ ವಿಫಲವಾಗಿದೆ. ತಾಂಡಲ್ ಪಂಜಾಬ್‌ನ ಅಕಾಲಿ ಸರ್ಕಾರದಲ್ಲಿ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವರಾಗಿದ್ದರು.

ನವೆಂಬರ್ 13ರಂದು ಪಂಜಾಬ್‌ನಲ್ಲಿ ವಿಧಾನಸಭೆ ಉಪಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಹಾಗಾಗಿ ನಾಳೆಯೊಳಗೆ ಸೋಹನ್ ತಾಂಡಲ್ ಚಬ್ಬೇವಾಲ್ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಖಚಿತ ನಿರ್ಧಾರವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...