ಪ್ರದೀಪ್ ಈಶ್ವರ್‌ಗೆ ಸಚಿವ ಸ್ಥಾನ ನೀಡುವಂತೆ ಅಹಿಂದ ಸಮುದಾಯಗಳ ಒತ್ತಾಯ

Date:

Advertisements

ಬಲಿಜ ಸಮುದಾಯದ ಏಕೈಕ ಶಾಸಕ ಪ್ರದೀಪ್ ಈಶ್ವರ್‌ಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಬಲಿಜ ಹಾಗೂ ಅಹಿಂದ ಸಮುದಾಯಗಳ ಮುಖಂಡರು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಂಚಾಲಕ ಸು.ಧಾ. ವೆಂಕಟೇಶ್, “ಕಾಂಗ್ರೆಸ್ ಈಗಾಗಲೇ ಅಹಿಂದ ವರ್ಗಗಳ ಮುಖಂಡರಿಗೆ ಸಚಿವ ಸ್ಥಾನ ನೀಡಿದೆ. ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಹಿಂದ ವರ್ಗದ ಶಾಸಕರಿಗೆ ಸಚಿವ ಸ್ಥಾನ ದೊರೆತಿಲ್ಲ. ಅಲ್ಲದೆ, ಬಲಿಜ ಸಮುದಾಯಕ್ಕೆ ಸೇರಿದ ಏಕೈಕ ಶಾಸಕ ಪ್ರದೀಪ್ ಈಶ್ವರ್ ಅವರನ್ನು ಸಚಿವರನ್ನಾಗಿ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಎಲ್ಲ ವರ್ಗಗಳಿಗೂ ನೀಡುತ್ತಿದೆ. ಈ ದಿಕ್ಕಿನಲ್ಲಿ ಜಿಲ್ಲೆಯ ಅಹಿಂದ ವರ್ಗಗಳಿಗೂ ನ್ಯಾಯ ಕೊಡಬೇಕು. ಪ್ರದೀಪ್ ಈಶ್ವರ್ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಅವರ ಅವಧಿಯಲ್ಲಿ ಚಿಕ್ಕಬಳ್ಳಾಪುರದಲ್ಲಿ ಉತ್ತಮ ಕಾರ್ಯಗಳು ಆಗುತ್ತಿವೆ” ಎಂದಿದ್ದಾರೆ.

Advertisements

WhatsApp Image 2024 06 24 at 7.28.39 PM

ಜಿಲ್ಲಾ ಹಿಂದುಳಿದ ಜಾತಿ ಮತ್ತು ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ಮುನೇಗೌಡ ಮಾತನಾಡಿ, “ಕಾಂಗ್ರೆಸ್‌ ಸಾಮಾಜಿಕ ನ್ಯಾಯ ಎತ್ತಿಹಿಡಿಯುತ್ತಿದೆ. ಈಗ ಯಾವ ಸಮುದಾಯಗಳಿಗೆ ಸ್ಥಾನ ನೀಡಿಲ್ಲವೊ ಆ ಸಮುದಾಯಗಳಿಗೆ ಸಚಿವ ಸಂಪುಟ ಪುನರ್ ರಚನೆ ಸಮಯದಲ್ಲಿ ಅವಕಾಶ ಮಾಡಿಕೊಡಬೇಕು” ಎಂದು ಕೋರಿದರು.

“ಅಹಿಂದ ವರ್ಗಗಳಿಗೆ ಅವಕಾಶ ನೀಡಿದರೆ ಅಭಿವೃದ್ಧಿ ಸಾಧ್ಯ. ಹಿಂದುಳಿದ ವರ್ಗಗಳಿಗೆ ಸಿಗುವ ಸೌಲಭ್ಯಗಳು ಈ ಹಿಂದಿನ ಸರ್ಕಾರಗಳಲ್ಲಿ ವಾಪಸ್ ಹೋಗಿವೆ. ಈ ಸಮುದಾಯಗಳನ್ನು ತಲುಪಿಲ್ಲ. ಆದ್ದರಿಂದ ಆ ಸಮುದಾಯಗಳವರೇ ಸಚಿವರಾದರೆ ಅಭಿವೃದ್ಧಿಗೆ ಅನುಕೂಲವಾಗಲಿದೆ” ಎಂದಿದ್ದಾರೆ.

“ಲೋಕಸಭಾ ಚುನಾವಣೆ ಸಮಯದಲ್ಲಿ ಯಾವ ರೀತಿಯಲ್ಲಿ ಅಹಿಂದ ಸಮುದಾಯಗಳಿಗೆ ವಂಚನೆ ಆಗಿದೆ ಎನ್ನುವುದು ಗೊತ್ತು. ಅಹಿಂದ ಸಮುದಾಯಗಳನ್ನು ಬೆಳೆಸುವ ವ್ಯಕ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಕಾಂಗ್ರೆಸ್‌ನ ರಾಜ್ಯ ಮುಖಂಡರಲ್ಲಿ ಮನವಿ ಮಾಡುತ್ತೇವೆ” ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕುರುಬರ ಸಂಘದ ಮುಖಂಡ ನರೇಂದ್ರ ಬಾಬು, ಬಿ.ಎಲ್.ಶ್ರೀನಿವಾಸ್, ಕ್ರೈಸ್ತ ಸಮುದಾಯದ ಮುಖಂಡ ಹೆನ್ರಿ ಪ್ರಸನ್ನ ಕುಮಾರ್, ಬಲಿಜ ಸಮುದಾಯದ ನಾಯಕನಹಳ್ಳಿ ನಾರಾಯಣ ಸ್ವಾಮಿ, ಎಸ್.ಪಿ.ಶ್ರೀನಿವಾಸ್, ಕುಪೇಂದ್ರ, ಎಸ್.ಎಂ.ರಫೀಕ್ ಮತ್ತಿತರರು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X