ಎಐಸಿಸಿ ಅಧ್ಯಕ್ಷರ ಕುಟುಂಬಕ್ಕೂ, ಸಚಿವರಿಗೂ ರಾಜ್ಯಪಾಲರಿಂದ ಎದುರಾಗಲಿದೆಯಾ ಸಂಕಷ್ಟ?

Date:

Advertisements

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಿಂದ ಕಂಟಕ ಎದುರಾದಂತೆ ಎಐಸಿಸಿ ಅಧ್ಯಕ್ಷರಿಗೂ, ಸಚಿವರಿಗೂ ಸಮಸ್ಯೆ ಎದುರಾಗಲಿದೆಯಾ ಎಂಬ ಅನುಮಾನ ಮೂಡಿದೆ.

ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರು ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ.

ಖರ್ಗೆ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿದ್ದ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಷ ಮಾಹಿತಿಯೊಂದಿಗೆ ಅಭಿಪ್ರಾಯ ನೀಡುವಂತೆ ಸೂಚನೆ ನೀಡಿದ್ದಾರೆ.

Advertisements

ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಅಭಿಪ್ರಾಯದಲ್ಲಿ ತಜ್ಞರು, ತರಾತುರಿಯಲ್ಲಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅರ್ಜಿ ಸಲ್ಲಿಕೆಯಾದ ಎರಡೇ ದಿನಗಳಲ್ಲಿ ಭೂ ಹಂಚಿಕೆ ಪ್ರಕ್ರಿಯೆ ಮಾಡಿರುವುದರಿಂದ ಪ್ರಶ್ನೆ ಮೂಡಿದೆ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು-ಕಾಶ್ಮೀರದಲ್ಲಿ ಮೋದಿ-ಶಾ ವಿರುದ್ಧ ಪ್ರತಿಪಕ್ಷಗಳು ಒಂದಾಗುವವೇ?

ಇಬ್ಬರು ಸಚಿವರಿಗೆ ಕಂಟಕ

ರಾಜ್ಯಪಾಲರು ತಜ್ಞರ ಅಭಿಪ್ರಾಯ ಪರಿಶೀಲಿಸಿ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎಂ ಬಿ ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ.

ಒಂದು ವೇಳೆ ಪ್ರಿಯಾಂಕ್ ಖರ್ಗೆ ಹಾಗೂ ಎಂ ಬಿ ಪಾಟೀಲ್ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶಿಸಿದಲ್ಲಿ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಣ ಸಂಘರ್ಷ ತಾರಕಕ್ಕೇರಲಿದೆ.

ಈಗಾಗಲೇ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ವಿವಿಗಳಿಗೆ ಕುಲಪತಿ ನೇಮಕ ವಿಚಾರದಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದೀಗ ಮತ್ತೊಂದು ಸುತ್ತಿನ ಕದನಕ್ಕೆ ಅಖಾಡ ಸಿದ್ಧವಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Scam ಗೆ ಇನ್ನೊಂದು ಹೆಸರೇ ಕಾಂಗ್ರೆಸ್, ಅದಕ್ಕಾಗಿ ರಾಜ್ಯಪಾಲರನ್ನು ಹೆದರಿಸಲು ಹೊರಟರು, ರಾಜ್ಯಪಾಲಾರೆ ಎಲ್ಲಾ ಕಳ್ಳರನ್ನು ಒಳಗೆ ತಳ್ಳುವಂತೆ ಮಾಡಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X