“ಆಯುಷ್ಮಾನ್ ಆರೋಗ್ಯ ಕರ್ನಾಟಕದಡಿ ಅನುದಾನ ನೀಡುವ ಉದ್ದೇಶವೇ ಸರ್ಕಾರಿ ಆಸ್ಪತ್ರೆಗಳನ್ನ ಸದೃಢಗೊಳಿಸುವುದಾಗಿದೆ” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಬಾಗಲಕೋಟೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಒದಗಿಸುವ ಆರೋಗ್ಯ ಸೇವೆಗಳಿಗೂ ಸರ್ಕಾರ ಅನುದಾನ ನೀಡುತ್ತಿದೆ. ಸರ್ಕಾರಿ ಆಸ್ಪತ್ರೆಗಳು ಉತ್ತಮ ಚಿಕಿತ್ಸೆ ನೀಡುವ ಮೂಲಕ ಈ ಅನುದಾನವನ್ನ ಹೆಚ್ಚಿನ ರೀತಿಯಲ್ಲಿ ಸೃಜಿಸಿಕೊಳ್ಳುವ ಮೂಲಕ ತಮಗೆ ಸಿಗುವ ಅನುದಾನದಲ್ಲೇ ಆಸ್ಪತ್ರೆ ನಡೆಸಬಹುದು” ಎಂದು ಅಭಿಪ್ರಾಯಪಟ್ಟರು.
AB – ark ಅನುದಾನದಿಂದ ಸ್ವಂತ ಬಲದಲ್ಲಿಯೇ ಸರ್ಕಾರಿ ಆಸ್ಪತ್ರೆಗಳು ಕಾರ್ಯನಿರ್ವಹಿಸುವತ್ತ ಹೆಚ್ಚಿನ ಗಮನ ಹರಿಸಬೇಕು. ಅನುದಾನವನ್ನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವಲ್ಲಿ ತಾಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮುಂದಾಗಬೇಕು ಎಂದು ಸೂಚಿಸಿದರು.
ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಅನುದಾನ ನೀಡುವ ರೀತಿಯಲ್ಲಿ ಸರ್ಕಾರಿ ಆಸ್ಪತ್ರೆಗಳಿಗು ಅನುದಾನ ನೀಡುತ್ತಿದ್ದೇವೆ. ನೀವು ಉತ್ತಮ ಚಿಕಿತ್ಸೆ ನೀಡಿದರೆ ಖಾಸಗಿ ಆಸ್ಪತ್ರೆಯ ರೀತಿಯಲ್ಲಿಯೇ ಸರ್ಕಾರಿ ಆಸ್ಪತ್ರೆಗಳು ಸ್ವಂತ ಬಲದಲ್ಲಿ ಆರೋಗ್ಯ ಸೇವೆ ಒದಗಿಸಬಹುದು. ಹಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಂದು ಸಿಜರಿನ್ ಮಾಡುತ್ತಿವೆ. ಸರ್ಜರಿಗಳನ್ನ ನಡೆಸುತ್ತಿವೆ. ಇದು ಇತರ ಸರ್ಕಾರಿ ಆಸ್ಪತ್ರೆಗಳಿಗೆ ಮಾದರಿಯಾಗಬೇಕು ಎಂದರು.
ಸರ್ಕಾರಿ ಆಸ್ಪತ್ರೆಗಳಿಗೆ ನಾವು abark ಅನುದಾನ ನೀಡವುದೇ ನಿಮ್ಮ ಸ್ವಂತ ಬಲದಲ್ಲಿ ಆಸ್ಪತ್ರೆ ನಡೆಸುವಂತಾಗಲಿ ಎಂಬ ಉದ್ದೇಶದಿಂದ. ಇಲ್ಲವಾದರೆ ಸರ್ಕಾರಿ ಆಸ್ಪತ್ರೆಗಳಿಗೆ ನಾವು ಏಕೆ ಆಯುಷ್ಮಾನ್ ಯೋಜನೆಯಡಿ ಹಣ ನೀಡಬೇಕು. ಸರ್ಕಾರಿ ಆಸ್ಪತ್ರೆಗಳು abark ಅನುದಾನವನ್ನ ಸಮರ್ಪಕವಾಗಿ ಬಳಸದಿದ್ದರೆ ಸದನ್ನ ಇಲಾಖೆ ತನ್ನ ಬಳಿಯೇ ಇಟ್ಟುಕೊಳ್ಳಬೇಕಾಗುತ್ತದೆ ಎಂದು ಎಚ್ವರಿಕೆ ನೀಡಿದರು.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಬಗ್ಗೆ ಪ್ರಗತಿಪರಿಶೀಲನಾ ಸಭೆಯಲ್ಲಿ ಹೆಚ್ಚಿನ ಚರ್ಚೆ ನಡೆಸಬೇಕು. ಗುಣಮಟ್ಟದ ಆರೋಗ್ಯ ಸೇವೆ ಜನರಿಗೆ ತಲುಪುವಂತಾಗಬೇಕು ಎಂದು ಸಚಿವರು ಸೂಚನೆ ನೀಡಿದರು.
ಬಾಗಲಕೊಟೆಯಲ್ಲಿ ಭ್ರೂಣ ಹತ್ಯೆ ವಿಚಾರವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಅವರು ಖಡಕ್ ಎಚ್ವರಿಕೆ ನೀಡಿದರು.
ಇದನ್ನು ಓದಿದ್ದೀರಾ? ರಾಜ್ಯ ಹಿಂದುಳಿದ ವರ್ಗಗಳ ಆಯೋಗ: ನೂತನ ಅಧ್ಯಕ್ಷರ ನೇಮಕ ಆದೇಶ ವಾಪಸ್ ಪಡೆದ ಸರ್ಕಾರ
ಜಿಲ್ಲಾ ಮಟ್ಟದಲ್ಲಿ ಅಧಿಕಾರಿಗಳು ಏನು ಮಾಡುತ್ತಿದ್ದಾರೆ. ಸ್ಕ್ಯಾನಿಂಗ್ ಸೆಂಟರ್‌ಗಳನ್ನ ಪರಿಶೀಲನೆ ನಡೆಸಬೇಕು. ರಾಜ್ಯಮಟ್ಟದ ಅಧಿಕಾರಿಗಳಿಗೆ ಭ್ರೂಣ ಹತ್ಯೆ ಬಗ್ಗೆ ಮಾಹಿತಿ ಸಿಗುತ್ತದೆ. ಜಿಲ್ಲಾ ಮಟ್ಟದಲ್ಲಿ ಏಕೆ ಕ್ರಮ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತರಾಟೆಗೆ ತೆಗೆದುಕೊಂಡರು.