ಮಹಾರಾಷ್ಟ್ರ | ಪಕ್ಷದ ಹೆಸರು, ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಅಜಿತ್‌ ಪವಾರ್ ಮನವಿ

Date:

Advertisements

ಮಹಾರಾಷ್ಟ್ರ ಎನ್‌ಸಿಪಿಯಲ್ಲಿ ನಡೆಯುತ್ತಿರುವ ಬಣ ಜಗಳ ಚುನಾವಣಾ ಆಯೋಗದ ಮೆಟ್ಟಿಲೇರಿದ್ದು, ಅಜಿತ್‌ ಪವಾರ್‌ ನೇತೃತ್ವದ 40ಕ್ಕೂ ಹೆಚ್ಚು ಶಾಸಕರ ಗುಂಪು ಪಕ್ಷದ ಹೆಸರು ಮತ್ತು ಚಿಹ್ನೆಗಾಗಿ ಅಫಿಡವಿಟ್‌ಗಳೊಂದಿಗೆ ಮನವಿ ಸಲ್ಲಿಸಿದ್ದಾರೆ.

ಏತನ್ಮಧ್ಯೆ, ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರದ್ ಪವಾರ್ ಬಣ ಕೂಡ ಹೆಸರು ಮತ್ತು ಚಿಹ್ನೆಯನ್ನು ನೀಡುವಂತೆ ಚುನಾವಣಾ ಪ್ರಾಧಿಕಾರಕ್ಕೆ ಕೇವಿಯಟ್ ಸಲ್ಲಿಸಿದೆ.

ಚುನಾವಣಾ ಆಯೋಗವು ಮುಂಬರುವ ದಿನಗಳಲ್ಲಿ ಅರ್ಜಿಗಳನ್ನು ಪ್ರಕ್ರಿಯೆಗೊಳಿಸಲು ಮತ್ತು ತನ್ನ ಮುಂದೆ ಸಲ್ಲಿಸಿದ ಆಯಾ ದಾಖಲೆಗಳನ್ನು ಎರಡೂ ಕಡೆಯಯವರನ್ನು ಕೇಳುವ ಸಾಧ್ಯತೆಯಿದೆ.

Advertisements

ಅಜಿತ್‌ ಪವಾರ್‌ ಅವರನ್ನು ಬೆಂಬಲಿಸಿ 40ಕ್ಕೂ ಹೆಚ್ಚು ಶಾಸಕರು ಮತ್ತು ಸಂಸದರ ಗುಂಪು ಅಫಿಡವಿಟ್‌ಗಳನ್ನು ಸಲ್ಲಿಸಿದೆ. ತಮ್ಮ ಚಿಕ್ಕಪ್ಪ ಶರದ್ ಪವಾರ್‌ಗಿಂತ ಹೆಚ್ಚಿನ ಶಾಸಕರನ್ನು ತಾವು ಹೊಂದಿದ್ದು, ತಮಗೆ ಪಕ್ಷದ ಹೆಸರು ಮತ್ತು ಚಿಹ್ನೆ ನೀಡುವಂತೆ ಅಜಿತ್ ಪವಾರ್ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದಾರೆ.

ಇದಕ್ಕೂ ಮುನ್ನ ಎರಡು ಬಣಗಳಾದ ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಮುಂಬೈನಲ್ಲಿ ತಮ್ಮ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿದರು. 

ಅಜಿತ್ ಪವಾರ್ ಅವರು ಕರೆದಿದ್ದ ಪಕ್ಷದ ಸಭೆಯಲ್ಲಿ 53 ಎನ್‌ಸಿಪಿ ಶಾಸಕರ ಪೈಕಿ 31 ಮಂದಿ ಹಾಜರಿದ್ದರು. ಆದರೆ ಶರದ್ ಪವಾರ್ ಕರೆದಿದ್ದ ಸಭೆಯಲ್ಲಿ ಕೇವಲ 10 ಶಾಸಕರಿದ್ದರು ಎಂದು ಹೇಳಲಾಗಿದೆ. ಪಕ್ಷದ ಮೇಲೆ ತಮ್ಮ ಹಿಡಿತ ಸಾಧಿಸಲು ಎರಡು ಬಣಗಳು ನಿರ್ಣಾಯಕ ಹೇಳಿಕೆಗಳನ್ನು ನೀಡಿದ ನಂತರ ಸಭೆಗಳು ನಡೆದವು.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ | ಎನ್‌ಸಿಪಿಯಿಂದ ಮೂವರ ಉಚ್ಚಾಟನೆ; 9 ಶಾಸಕರು, ಇಬ್ಬರು ಸಂಸದರ ಅನರ್ಹತೆಗೆ ನಿರ್ಣಯ

1999 ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿ, ಭಾನುವಾರ ಅಜಿತ್ ಪವಾರ್ ಅವರೊಂದಿಗೆ ವಿಭಜನೆಗೆ ಸಾಕ್ಷಿಯಾಯಿತು. 40 ಕ್ಕೂ ಹೆಚ್ಚು ಶಾಸಕರ ಬೆಂಬಲವನ್ನು ಹೇಳಿಕೊಂಡು ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಸೇರಿತು.

ಭಾನುವಾರ ನಡೆದ ಅನಿರೀಕ್ಷಿತ ಸಂಪುಟ ವಿಸ್ತರಣೆಯಲ್ಲಿ ಅಜಿತ್ ಪವಾರ್ ಸೇರಿದಂತೆ ಒಂಬತ್ತು ಎನ್‌ಸಿಪಿ ಶಾಸಕರು ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಯಸ್ಸು 83 ಆಗಿದೆ, ನಿವೃತ್ತರಾಗಿ: ಅಜಿತ್‌ ಪವಾರ್

ಶರದ್‌ ಪವಾರ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅಜಿತ್‌ ಪವಾರ್‌, ”ನಿಮಗೆ ಈಗಾಗಲೇ 83 ವರ್ಷ ವಯಸ್ಸಾಗಿದೆ. ಬಿಜೆಪಿಯಲ್ಲಿ ನಾಯಕರು 75ನೇ ವಯಸ್ಸಿನಲ್ಲಿ ನಿವೃತ್ತಿ ಹೊಂದುತ್ತಾರೆ. ಕೆಲವೇ ಸಮಯದಲ್ಲಿ ಶತಾಯುಷಿಯಾಗುತ್ತೀರಿ. ಪ್ರತಿಯೊಬ್ಬರಿಗೂ ಅವರದೆ ಆದ ಇನ್ನಿಂಗ್ಸ್‌ ಇರುತ್ತದೆ. ಆಡಳಿತದ ವಯಸ್ಸು 25 ರಿಂದ 75. ನೀವು ನಿವೃತ್ತರಾಗಿ ನಮಗೆಲ್ಲ ಆಶೀರ್ವಾದ ನೀಡಿ. ನಾವು ನಿಮ್ಮನ್ನು ದೀರ್ಘಕಾಲ ಬದುಕಬೇಕೆಂದು ಪ್ರಾರ್ಥಿಸುತ್ತೇವೆ” ಎಂದು ತಿಳಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಶರದ್‌ ಪವಾರ್‌ ಪುತ್ರಿ ಹಾಗೂ ಎನ್‌ಸಿಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ, ಅಮಿತಾಭ್ ಬಚ್ಚನ್, ರತನ್‌ ಟಾಟಾ ಮುಂತಾದ ಹಿರಿಯರು 80 ವರ್ಷ ದಾಟಿದವರು. ಅವರೆಲ್ಲರೂ ತಮ್ಮ ವೃತ್ತಿಯನ್ನು ಮುನ್ನಡೆಸುತ್ತಿಲ್ಲವೆ. ನಾವು ದೇಶದ ಅತ್ಯಂತ ಭ್ರಷ್ಟ ಪಕ್ಷ ಬಿಜೆಪಿಯ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಜನರು ಮುಂದಿನ ದಿನಗಳಲ್ಲಿ ಎಲ್ಲವನ್ನು ನಿರ್ಧರಿಸಲಿದ್ದಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X