BREAKING NEWS | ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಆಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

Date:

ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು ಮಹಾರಾಷ್ಟ್ರದ ಮೊದಲ ಮಹಿಳಾ ಡಿಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕಂದಾಯ ಸಚಿವ ಚಂದ್ರಶೇಖರ್ ಬವಾಂಕುಲೆ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಛಗನ್ ಭುಜಬಲ್ ಮತ್ತು ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಉಪ ಮುಖ್ಯಮಂತ್ರಿ ಹುದ್ದೆ

ಸುನೇತ್ರಾ ಅವರು ರಾಜ್ಯಸಭಾ ಸದಸ್ಯೆಯಾಗಿದ್ದು ಅವರನ್ನು ಉಪಮುಖ್ಯಮಂತ್ರಿ ಹುದ್ದೆಗೆ ಪಕ್ಷದ ನಾಯಕರು ಪ್ರಸ್ತಾಪಿಸಿದ್ದಾರೆ. ಅಜಿತ್ ಪವಾರ್ ಅವರು ಹೊಂದಿದ್ದ ರಾಜ್ಯ ಅಬಕಾರಿ, ಕ್ರೀಡಾ ಸಚಿವಾಲಯ ಹುದ್ದೆಯನ್ನು ನೀಡುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಇನ್ನು ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಸುನೇತ್ರಾ, “ಅಜಿತ್ ಅಕಾಲಿಕ ನಿಧನವು ನನಗೆ ಬೆಟ್ಟದಷ್ಟು ನೋವುಂಟು ಮಾಡಿದೆ. ಅವರು ಕಲಿಸಿದ ಕರ್ತವ್ಯ ಪ್ರಜ್ಞೆ ಮತ್ತು ಬದ್ಧತೆಯೇ ಈ ಕಷ್ಟದ ಸಮಯದಲ್ಲೂ ನಾನು ಮುನ್ನಡೆಯಲು ಶಕ್ತಿ ನೀಡಿದೆ. ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಜವಾಬ್ದಾರಿಯನ್ನು ಸ್ವೀಕರಿಸುತ್ತಿರುವುದು ಹೆಮ್ಮೆಯ ಜೊತೆಗೆ ನನಗಿರುವ ದೊಡ್ಡ ಕರ್ತವ್ಯದ ಅರಿವನ್ನೂ ಮೂಡಿಸಿದೆ” ಎಂದು ಹೇಳಿದ್ದಾರೆ.

“ರೈತರು, ಕಾರ್ಮಿಕರು, ಮಹಿಳೆಯರು, ಯುವಕರು ಮತ್ತು ವಂಚಿತ ವರ್ಗಗಳ ಕಲ್ಯಾಣಕ್ಕಾಗಿ ಬದುಕು ಸವೆಸುವ ಮಂತ್ರವನ್ನು ಅಜಿತ್ ಅವರು ನನಗೆ ತಿಳಿಸಿದ್ದಾರೆ. ಸಮಾನತೆಯ ಮತ್ತು ಅಭಿವೃದ್ಧಿ ಹೊಂದಿದ ಮಹಾರಾಷ್ಟ್ರ ನಿರ್ಮಾಣದ ಅವರ ಕನಸನ್ನು ಸಾಕಾರಗೊಳಿಸಲು ನಾನು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ.

ಸುನೇತ್ರಾ ಪವಾರ್ ಯಾರು?

ಬಾರಾಮತಿ ಬಳಿ ನಡೆದ ದುರಂತ ವಿಮಾನ ಅಪಘಾತದಲ್ಲಿ ನಿಧನರಾದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಸಕ್ರಿಯ ರಾಜಕಾರಣಿ. ರಾಜ್ಯಸಭೆಯಲ್ಲಿ ಸಂಸತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸದಸ್ಯರಾಗಿದ್ದಾರೆ. ಸುನೇತ್ರಾ ಅವರ ತಂದೆ ಬಾಜಿರಾವ್ ಪಾಟೀಲ್ ಮಹಾರಾಷ್ಟ್ರದ ಹಿರಿಯ ರಾಜಕೀಯ ನಾಯಕರಾಗಿದ್ದಾರೆ. ಸುನೇತ್ರಾ ಸಕ್ರಿಯವಾಗಿ ರಾಜಕೀಯದಲ್ಲಿ ತೊಡಗಿಕೊಂಡಿರುವ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...