ಪಂಜಾಬ್ ಮಾದಕವಸ್ತು ಬಿಕ್ಕಟ್ಟಿಗೆ ಅಕಾಲಿದಳ, ಬಿಜೆಪಿ ಮತ್ತು ಕಾಂಗ್ರೆಸ್ ಕಾರಣ: ಎಎಪಿ ಆರೋಪ

Date:

ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಈ ಹಿಂದಿನ ಅಕಾಲಿದಳ-ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಈ ಹಿಂದಿನ ಸರ್ಕಾರಗಳ ನಿರ್ಲಕ್ಷ್ಯವೇ ಪಂಜಾಬ್‌ನ ಮಾದಕವಸ್ತು ಬಿಕ್ಕಟ್ಟಿಗೆ ಕಾರಣವಾಗಿದೆ ಎಂದು ಆರೋಪಿಸಿದೆ.

- Advertisement -

ಎಎಪಿ ವಕ್ತಾರ ಮತ್ತು ಸಂಸತ್ ಸದಸ್ಯ ಮಲ್ವಿಂದರ್ ಸಿಂಗ್ ಕಾಂಗ್ ಈ ಬಗ್ಗೆ ಹೇಳಿಕೆ ನೀಡಿದ್ದು, “2007ರಿಂದ ಅಕಾಲಿ ದಳ-ಬಿಜೆಪಿ ಸರ್ಕಾರವು ಮಾದಕವಸ್ತು ವ್ಯಾಪಾರವನ್ನು ಸಾಂಸ್ಥೀಕರಣಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಹಲವು ಉನ್ನತ ನಾಯಕರು ಕಳ್ಳಸಾಗಣೆದಾರರನ್ನು ರಕ್ಷಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಇದನ್ನು ಓದಿದ್ದೀರಾ? 32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಪಂಜಾಬ್ ಕಾಂಗ್ರೆಸ್ ನಾಯಕ ಬಾಜ್ವಾ

“ಅವರು (ಬಿಜೆಪಿ-ಅಕಾಲಿದಳ, ಕಾಂಗ್ರೆಸ್) ಪಂಜಾಬ್‌ನ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬದಲು, ಮಾದಕವಸ್ತು ವ್ಯಾಪಾರವನ್ನು ಸುಗಮಗೊಳಿಸಿದರು. ಇಡೀ ಪೀಳಿಗೆಯನ್ನು ವ್ಯಸನಕ್ಕೆ ತಳ್ಳಿದರು” ಎಂದು ಕಾಂಗ್ ಆರೋಪಿಸಿದ್ದಾರೆ.

ಹಾಗೆಯೇ ಕಾಂಗ್ರೆಸ್ ಸರ್ಕಾರವನ್ನು ಅದರಲ್ಲೂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಸರ್ಕಾರವನ್ನು ಟೀಕಿಸಿದ ಎಎಪಿ ನಾಯಕ, “ಈ ಸಮಸ್ಯೆಯನ್ನು ಪರಿಹರಿಸಲು ಕಾಂಗ್ರೆಸ್ ಸರ್ಕಾರ ವಿಫಲವಾಯಿತು” ಎಂದರು.

“ನಾಲ್ಕು ತಿಂಗಳೊಳಗೆ ಮಾದಕವಸ್ತು ಪಿಡುಗನ್ನು ಕೊನೆಗೊಳಿಸುವುದಾಗಿ ಕ್ಯಾಪ್ಟನ್ ಅಮರಿಂದರ್ ಪ್ರತಿಜ್ಞೆ ಮಾಡಿದರು. ಆದರೆ ಅವರ ಸರ್ಕಾರ ವಿಫಲವಾಗಿದ್ದು ಮಾತ್ರವಲ್ಲದೆ ಮಾದಕವಸ್ತು ಬಿಕ್ಕಟ್ಟು ಹೆಚ್ಚಾಗಲು ಕೊಡುಗೆ ನೀಡಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಪಂಜಾಬ್ | ಭೀಕರ ಬಸ್ ಅಪಘಾತ; ಐವರ ದಾರುಣ ಸಾವು

“ಪ್ರಸ್ತುತ ಎಎಪಿ ಸರ್ಕಾರ ಮಾದಕವಸ್ತು ಕಳ್ಳಸಾಗಣೆ ಬಗ್ಗೆ ಯಾವುದೇ ಸಹಿಷ್ಣುತೆಯನ್ನು ಹೊಂದಿಲ್ಲ. ನಮ್ಮ ಸರ್ಕಾರ ಮಾದಕ ವಸ್ತುಗಳ ಕಿಂಗ್‌ಪಿನ್‌ಗಳನ್ನು ಬಂಧಿಸುವುದಲ್ಲದೆ, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ, ಅವರ ಸಾಮ್ರಾಜ್ಯಗಳನ್ನೇ ಕೆಡವಿದೆ. ಮಾನ್ ಸರ್ಕಾರವು ಪಂಜಾಬ್‌ನಿಂದ ಮಾದಕ ವಸ್ತುಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಬದ್ಧವಾಗಿದೆ” ಎಂದು ಭರವಸೆ ನೀಡಿದರು.

ಪಂಜಾಬ್‌ನಲ್ಲಿ ಮಾದಕವಸ್ತು ಪಿಡುಗು ಅಧಿಕವಾಗಿದೆ. ಸದ್ಯ ಪಂಜಾಬ್ ಸರ್ಕಾರವು ರಾಜ್ಯದಲ್ಲಿ ಮಾದಕ ದ್ರವ್ಯ ದುರುಪಯೋಗದ ವಿರುದ್ಧ ಕಠಿಣ ಕ್ರಮವನ್ನು ಘೋಷಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಂದೇ ಕುಟುಂಬದ ಐವರು ಶವವಾಗಿ ಪತ್ತೆ; ವಿಷಾಹಾರ ಸೇವಿಸಿದ ಶಂಕೆ

ಒಂದೇ ಕುಟುಂಬದ ಐವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ದಾರುಣ ಘಟನೆ ಉತ್ತರ...

‘ಮಹಿಳೆಯರನ್ನು ಗೌರವಿಸುವ ಯುವಜನತೆಯ ಮುಂದೆ ಬಿಜೆಪಿಯ ನಿಜಬಣ್ಣ ಬಯಲಾಗಿದೆ’: ಪ್ರಕಾಶ್ ರಾಜ್

ದೇಶದ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಯುವಜನತೆಯನ್ನು ಶ್ಲಾಘಿಸಿರುವ ನಟ...

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...