ಅಮೃತಸರ | ಅಕಾಲಿದಳ ನಾಯಕ ಹರ್ಜಿಂದರ್ ಸಿಂಗ್‌ಗೆ ಗುಂಡಿಕ್ಕಿ ಹತ್ಯೆ

Date:

ಪಂಜಾಬ್‌ನ ಅಮೃತಸರದಲ್ಲಿ ಭಾನುವಾರ ಅಪರಿಚಿತ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್‌ಎಡಿ) ನಾಯಕ ಹರ್ಜಿಂದರ್ ಸಿಂಗ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಹರ್ಜಿಂದರ್ ಸಿಂಗ್ ಅವರು ಜಿಲ್ಲೆಯ ಜಂಡಿಯಾಲ ಗುರುವಿನ ಕೌನ್ಸಿಲರ್ ಆಗಿದ್ದಾರೆ.

- Advertisement -

ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆರೋಪಿಗಳು ಹರ್ಜಿಂದರ್ ಅವರ ನಿವಾಸದ ಮೇಲೆ ಈ ಹಿಂದೆ ಗುಂಡು ಹಾರಿಸಿ ಬೆದರಿಕೆ ಹಾಕಿದ್ದರು ಎಂದು ಅವರ ಸಹೋದರ ಮತ್ತು ಸೋದರ ಮಾವ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಶಿರೋಮಣಿ ಅಕಾಲಿದಳ ನಾಯಕ ಸುಖ್‌ಬೀರ್ ಸಿಂಗ್ ಬಾದಲ್ ಮೇಲೆ ಗುಂಡಿನ ದಾಳಿ

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿರುವ ಪಂಜಾಬ್ ಪೊಲೀಸ್ ಎಡಿಸಿಪಿ ಹರ್ಪಾಲ್ ಸಿಂಗ್ ರಾಂಧವ, “ಹರ್ಜಿಂದರ್ ಸಿಂಗ್ ಅವರು ಅಮೃತಸರದ ಛೆಹರ್ತಾದಲ್ಲಿ ಒಂದು ಸಮಾರಂಭದಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ, ಮೂರರಿಂದ ನಾಲ್ಕು ಮಂದಿ ಬೈಕ್‌ನಲ್ಲಿ ಬಂದು ಗುಂಡು ಹಾರಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮಾರ್ಗಮಧ್ಯೆ ಅವರು ಮೃತಪಟ್ಟರು” ಎಂದು ತಿಳಿಸಿದ್ದಾರೆ.

ಇನ್ನು ಈ ಹತ್ಯೆಯನ್ನು ಹಿರಿಯ ಎಸ್‌ಎಡಿ ನಾಯಕ ವಿಕ್ರಮ್ ಸಿಂಗ್ ಮಜಿಥಿಯಾ ಖಂಡಿಸಿದ್ದಾರೆ. ಆಮ್ ಆದ್ಮಿ ಪಕ್ಷ(ಎಎಪಿ) ನೇತೃತ್ವದ ರಾಜ್ಯ ಸರ್ಕಾರದಡಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಟೀಕಿಸಿದರು. ಹಾಗೆಯೇ ಕೆಲವು ದಿನಗಳ ಹಿಂದೆ ಕೌನ್ಸಿಲರ್ ಮನೆಯ ಮೇಲೆ ಗುಂಡಿನ ದಾಳಿ ನಡೆದ ವಿಡಿಯೋ ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಮೇಲೆ ವಾಗ್ದಾಳಿ ನಡೆಸಿರುವ ಎಸ್‌ಎಡಿ ನಾಯಕ, “ಭಗವಂತ್ ಮಾನ್ ಅವರೇ ನಿದ್ದೆಯಿಂದ ಎಚ್ಚೆತ್ತು ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಿ. ಇಂದು ಕೌನ್ಸಿಲರ್ ಸಾವಿಗೆ ನೀವೆಲ್ಲರೂ ಜವಾಬ್ದಾರರು” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...