ಬಿಹಾರ ಮತದಾರರ ಅಧಿಕಾರ ಯಾತ್ರೆ: ರಾಹುಲ್, ತೇಜಸ್ವಿ ಜೊತೆ ಸೇರಿದ ಅಖಿಲೇಶ್ ಯಾದವ್‌

Date:

ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶನಿವಾರ ಬಿಹಾರದ ಸರನ್ ಜಿಲ್ಲೆಯಲ್ಲಿ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಭಾಗಿಯಾಗಿದ್ದಾರೆ. ಅಖಿಲೇಶ್ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಬಿಹಾರದ ವಿಪಕ್ಷ ನಾಯಕ ತೇಜಸ್ವಿ ಯಾದವ್ ಜೊತೆ ಸೇರಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಹಿರಿಯ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, “ದೇಶದ ಪ್ರಜಾಪ್ರಭುತ್ವವನ್ನು ನಾಶಮಾಡಲು ಪ್ರಯತ್ನ ನಡೆಸುತ್ತಿರುವ ಬಿಜೆಪಿ ವಿರುದ್ಧದ ಹೋರಾಟದಲ್ಲಿ ಯಾದವ್ ದೃಢವಾದ ಮಿತ್ರ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಬಿಹಾರದಲ್ಲಿ ರಾಹುಲ್‌ ಗಾಂಧಿ ‘ಮತದಾರರ ಅಧಿಕಾರ ಯಾತ್ರೆ’

“ಇಂದು ಬೆಳಿಗ್ಗೆ, ಯುಪಿಯ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಸರನ್‌ನಲ್ಲಿ ‘ಮತದಾರ ಅಧಿಕಾರ ಯಾತ್ರೆ’ಯಲ್ಲಿ ಜೊತೆಯಾದರು. ಪ್ರಜಾಪ್ರಭುತ್ವವನ್ನು ರಕ್ಷಿಸುವ ಈ ಐತಿಹಾಸಿಕ ಆಂದೋಲನಕ್ಕೆ ಅವರನ್ನು ಸ್ವಾಗತಿಸಲಾಯಿತು. ಬಿಜೆಪಿ ನಮ್ಮ ಪ್ರಜಾಪ್ರಭುತ್ವವನ್ನು ನಾಶಮಾಡುವುದರ ವಿರುದ್ಧದ ನಮ್ಮ ಹೋರಾಟದಲ್ಲಿ ಅವರು ದೃಢ ಮಿತ್ರರಾಗಿದ್ದಾರೆ. ಯುಪಿ ಮತ್ತು ದೇಶಾದ್ಯಂತ ಬಡವರು ಮತ್ತು ಹಿಂದುಳಿದವರಿಗೆ ಬಲವಾದ ಧ್ವನಿಯಾಗಿದ್ದಾರೆ” ಎಂದು ವೇಣುಗೋಪಾಲ್ ಪೋಸ್ಟ್ ಮಾಡಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕಿ ತೇಜಸ್ವಿ ಯಾದವ್ ಅವರನ್ನು ಯಾದವ್ ಭೇಟಿಯಾದ ಛಾಯಾಚಿತ್ರಗಳನ್ನೂ ಹಂಚಿಕೊಂಡಿದ್ದಾರೆ. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅವರ ಪುತ್ರಿ ರೋಹಿಣಿ ಆಚಾರ್ಯ ಕೂಡ ಹಾಜರಿದ್ದರು. ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಆಚಾರ್ಯ ಅವರು ಸರನ್‌ನಿಂದ ಸ್ಪರ್ಧಿಸಿ, ಆ ಸ್ಥಾನವನ್ನು ಗೆಲ್ಲುವಲ್ಲಿ ವಿಫಲರಾಗಿದ್ದರು.

ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಆಗಸ್ಟ್ 17ರಂದು ರೋಹ್ತಾಸ್ ಜಿಲ್ಲೆಯ ಸಸಾರಾಮ್‌ನಿಂದ ಕಾಂಗ್ರೆಸ್‌ ‘ಮತದಾರ ಅಧಿಕಾರ ಯಾತ್ರೆ’ಯನ್ನು ಆರಂಭಿಸಿದ್ದಾರೆ. ಈ ಯಾತ್ರೆಗೆ ಇಂಡಿಯಾ ಒಕ್ಕೂಟವೂ ಬೆಂಬಲ ನೀಡಿದೆ. ಸೆಪ್ಟೆಂಬರ್ 1ರಂದು ಪಟನಾದಲ್ಲಿ ಯಾತ್ರೆ ಮುಕ್ತಾಯಗೊಳ್ಳಲಿದೆ.

ಯಾತ್ರೆಯು ಇಲ್ಲಿಯವರೆಗೆ ಗಯಾಜಿ, ನವಾಡ, ಶೇಖ್‌ಪುರ, ಲಖಿಸರೈ, ಮುಂಗೇರ್, ಕಟಿಹಾರ್, ದರ್ಭಂಗಾ, ಮಧುಬನಿ, ಸೀತಾಮರ್ಹಿ, ಮುಜಫರ್‌ಪುರ, ಪೂರ್ಣಿಯಾ, ಪಶ್ಚಿಮ ಚಂಪಾರಣ್, ಗೋಪಾಲ್‌ಗಂಜ್, ಪೂರ್ವ ಚಂಪಾರಣ್ ಮತ್ತು ಸಿವಾನ್ ಜಿಲ್ಲೆಗಳನ್ನು ದಾಟಿ ಸಾಗಿದೆ. ಇನ್ನು ಭೋಜ್‌ಪುರ ಮತ್ತು ಪಟನಾ ಮೂಲಕ ಸಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...