ಆಳಂದ ಮತಗಳವು | ಕಲಬುರಗಿಯಲ್ಲಿ ಬೃಹತ್ ರ್‍ಯಾಲಿ ನಡೆಸಲು ರಾಹುಲ್‌ ಗಾಂಧಿಗೆ ಶಾಸಕ ಬಿ.ಆರ್ ಪಾಟೀಲ್ ಆಹ್ವಾನ

Date:

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ಕ್ಷೇತ್ರದಲ್ಲಿ ಸುಮಾರು 6,000 ಮತಗಳನ್ನು ಅಳಿಸಿ ಹಾಕುವ ಯತ್ನ ನಡೆದಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಆರೋಪಕ್ಕೆ ಸಂಬಂಧಿಸಿದ ಪುರಾವೆಗಳು ಮತ್ತು ದಾಖಲೆಗಳನ್ನು ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದ್ದಾರೆ. ಇದೀಗ, ಕಲಬುರಗಿಯಲ್ಲಿ ‘ಮತಗಳವು’ (ವೋಟ್‌ ಚೋರಿ) ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ಮುಂದಾಗಿದೆ.  ರ್‍ಯಾಲಿಗೆ ಆಹ್ವಾನಿಸಿ ರಾಹುಲ್‌ ಗಾಂಧಿಗೆ ಆಳಂದ ಶಾಸಕ, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಉಪಾಧ್ಯಕ್ಷ ಬಿ.ಆರ್‍‌ ಪಾಟೀಲ್ ಪತ್ರ ಬರೆದಿದ್ದಾರೆ.

- Advertisement -

ಸೆಪ್ಟೆಂಬರ್ 18ರಂದು ಸುದ್ದಿಗೋಷ್ಠಿ ನಡೆಸಿದ್ದ ರಾಹುಲ್‌ ಗಾಂಧಿ, “ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 5,994 ಮತಗಳನ್ನು ಅಳಿಸಿ ಹಾಕಲು ಯತ್ನಗಳು ನಡೆದಿವೆ. ಮತದಾರ ಪಟ್ಟಿಯಲ್ಲಿರುವ ಯಾರದ್ದೋ ಹೆಸರನ್ನು ಅಳಿಸಿ ಹಾಕುವಂತೆ ಇನ್ಯಾರದ್ದೋ ಹೆಸರಿನಲ್ಲಿ ಮತ್ಯಾರೋ ಅರ್ಜಿ ಸಲ್ಲಿಸಿದ್ದಾರೆ. ಇದೇ ರೀತಿ ಸಾವಿರಾರು ಮತದಾರರ ಹೆಸರುಗಳನ್ನು ಅಳಿಸಿ ಹಾಕುವ ಹುನ್ನಾರ ನಡೆದಿದೆ” ಎಂದು ಆರೋಪಿಸಿದ್ದರು. ಆಳಂದದಲ್ಲಿ ಮತಗಳವು ನಡೆದಿರುವುದನ್ನು ಚುನಾವಣಾ ಆಯೋಗ ಕೂಡ ಒಪ್ಪಿಕೊಂಡಿದೆ. ಪ್ರಕರಣದ ತನಿಖೆ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಆಳಂದದಲ್ಲಿ ನಡೆದಿರುವ ಮತಗಳವು ವಿರುದ್ಧ ಕಲಬುರಗಿಯಲ್ಲಿ ನವೆಂಬರ್‍ ಅಥವಾ ಡಿಸೆಂಬರ್‍‌ನಲ್ಲಿ ಬೃಹತ್ ಪ್ರತಿಭಟನಾ ರ್‍ಯಾಲಿ ನಡೆಸಲು ಕಾಂಗ್ರೆಸ್‌ ನಿರ್‍ಧರಿಸಿದೆ. ಅದಕ್ಕಾಗಿ, ಕಾಂಗ್ರೆಸ್‌ ನಾಯಕರ ಸಮಯ ಕೇಳಿ ಬಿ.ಆರ್ ಪಾಟೀಲ್ ಪತ್ರ ಬರೆದಿದ್ದಾರೆ.

ರಾಹುಲ್‌ ಗಾಂಧಿಗೆ ಪತ್ರದಲ್ಲಿ; “ಮತಗಳವು ಕುರಿತು ರಾಷ್ಟ್ರದ ಮುಂದೆ ಇರಿಸಲಾದ ಐತಿಹಾಸಿಕ ಪವರ್ ಪಾಯಿಂಟ್ ಪ್ರಸ್ತುತಿಗಾಗಿ ನಾನು ನಿಮಗೆ ನನ್ನ ಹೃತ್ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಇದು ಇಡೀ ದೇಶದ ಗಮನ ಸೆಳೆದಿದೆ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಬಗ್ಗೆ ಉತ್ತಮ ಚರ್ಚೆಗೆ ನಾಂದಿ ಹಾಡಿದೆ. ನೀವು ಎತ್ತಿದ ತಾರ್ಕಿಕ ಪ್ರಶ್ನೆಗಳಿಗೆ ಉತ್ತರಿಸಲು ಆಯೋಗಕ್ಕೆ ಸಾಧ್ಯವಾಗಿಲ್ಲ. ಅದು ಯಾವುದೇ ಮನವರಿಕೆಯಾಗುವ ಉತ್ತರ ನೀಡಲಾಗದೆ ನೆಲಕಚ್ಚಿದೆ. ಮತಗಳವು ಕುರಿತ ನಿಮ್ಮ ಟೀಕೆಯನ್ನು ಪತ್ರಿಕೆಗಳು ಗಂಭೀರವಾಗಿ ಪರಿಗಣಿಸಿವೆ. ಚುನಾವಣಾ ಆಯೋಗವನ್ನು ಪ್ರಶ್ನಿಸಿವೆ. ಚುನಾವಣಾ ಆಯೋಗವು ಬೆನ್ನುಮೂಳೆಯಿಲ್ಲದ ಸಾಂವಿಧಾನಿಕ ಸಂಸ್ಥೆಯಾಗಿ ಮಾರ್‍ಪಟ್ಟಿದ್ದು, ಕೇಂದ್ರ ಗೃಹ ಸಚಿವರ ಸೇವಕನೆಂತೆ ಕೆಲಸ ಮಾಡುತ್ತಿದೆ” ಎಂದು ಪಾಟೀಲ್ ಹೇಳಿದ್ದಾರೆ.

“ಬಿಜೆಪಿಗೆ ಮುಕ್ತ ಮತ್ತು ನ್ಯಾಯಯುತ ರೀತಿಯಲ್ಲಿ ಚುನಾವಣೆಗಳನ್ನು ಗೆಲ್ಲಲು ಸಾಧ್ಯವಿಲ್ಲ. ಆ ಕಾರಣಕ್ಕಾಗಿ, ಮತದಾರರ ಪಟ್ಟಿಯಿಂದ ನಿಜವಾದ ಮತದಾರರನ್ನು ತೆಗೆದುಹಾಕುವ ದುಷ್ಕೃತ್ಯಗಳಲ್ಲಿ ತೊಡಗಿದೆ. ಆಳಂದ ಮತಗಳವು ಪ್ರಕರಣ ಸಂಬಂಧ ಕರ್ನಾಟಕದ ಜನರು, ವಿಶೇಷವಾಗಿ ನನ್ನ ಆಳಂದ ಕ್ಷೇತ್ರ ಮತ್ತು ಕಲಬುರಗಿ ಜಿಲ್ಲೆಯ ನಾಗರಿಕರು ಚುನಾವಣಾ ಆಯೋಗ ಮತ್ತು ಬಿಜೆಪಿಯ ಧೋರಣೆಗಳನ್ನು ಬಯಲು ಮಾಡಲು ಬೃಹತ್ ರ್‍ಯಾಲಿ ನಡೆಸಲು ಸಿದ್ದರಾಗಿದ್ದಾರೆ. ನವೆಂಬರ್ ಅಥವಾ ಡಿಸೆಂಬರ್‍‌ನಲ್ಲಿ ನಿಮ್ಮ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್‍ಜುನ ಖರ್‍ಗೆ ಅವರ ಅನುಕೂಲಕರ ದಿನಾಂಕವನ್ನು ತಿಳಿಸಿದರೆ, ರ್‍ಯಾಲಿಗೆ ಸಿದ್ದತೆಗಳು ನಡೆಯಲಿವೆ” ಎಂದು ಕೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಮತಗಳವು | ಪ್ರತಿಕ್ರಿಯಿಸುವ ಭರದಲ್ಲಿ ಬೆತ್ತಲಾದ ಚುನಾವಣಾ ಆಯುಕ್ತ

2023ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಆಳಂದ ಕ್ಷೇತ್ರದಲ್ಲಿ 5,994 ಮತದಾರರನ್ನು ಹೆಸರನ್ನು ಅಳಿಸಿ ಹಾಕಲು ಯತ್ನಗಳು ನಡೆದಿದ್ದವು. ಆ ಪೈಕಿ, ಆಳಂದದ ಒಂದು ಬೂತ್‌ನ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಸಹೋದರನ ಹೆಸರನ್ನೇ ಮತಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆದಿತ್ತು. ಆದ್ದರಿಂದಲೇ, ಮತ ಕಳ್ಳತನ ಪ್ರಕರಣವು ಆಗಲೇ ಬೆಳಕಿಗೆ ಬಂದಿತ್ತು.

ಆ ಬಿಎಲ್‌ಒ ಸಹೋದರ ಬಿ.ಆರ್ ಪಾಟೀಲ್ ಅವರ ನಿಕಟವರ್ತಿಯಾಗಿದ್ದ ಕಾರಣ, ಮತ ಕಳ್ಳತನದ ವಿಚಾರ ಬಿ.ಆರ್ ಪಾಟೀಲ್ ಅವರಿಗೆ ಗೊತ್ತಾಯಿತು. ಬಳಿಕ, ಅವರು ಚುನಾವಣಾ ಆಯೋಗಕ್ಕೆ ದೂರು ನೀಡಿದರು. ಅವರ ದೂರು ಆಧರಿಸಿ, ಪರಿಶೀಲನೆ ನಡೆಸುವಂತೆ ಕರ್ನಾಟಕ ಚುನಾವಣಾ ಆಯೋಗವು ಸ್ಥಳೀಯ ಚುನಾವಣಾ ಅಧಿಕಾರಿಗೆ (ಜಿಲ್ಲಾಧಿಕಾರಿ) ಸೂಚಿಸಿತು. ಸ್ಥಳೀಯ ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಬರೋಬ್ಬರಿ 5,994 ಮತಗಳನ್ನು ಅಳಿಸಿಹಾಕಲು ನಕಲಿ ಅರ್ಜಿಗಳು ಸಲ್ಲಿಕೆಯಾಗಿರುವುದು ಬೆಳಕಿಗೆ ಬಂದಿತು. ಬಳಿಕ, ಕಲಬುರಗಿ ಸಹಾಯಕ ಆಯುಕ್ತೆ ಮಮತಾ ದೇವಿ ಅವರು 2023ರ ಫೆಬ್ರವರಿ 21ರಂದು ಆಳಂದ ಪೊಲೀಸರಿಗೆ ದೂರು ನೀಡಿದರು. ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ಅನ್ನೂ ದಾಖಲಿಸಿದರು.

ಈ 5,994 ಮತದಾರರಲ್ಲಿ ಬಹುತೇಕರು ಕಾಂಗ್ರೆಸ್‌ಗೆ ಮತ ಚಲಾಯಿಸುವ ದಲಿತರು, ಬಡವರು, ಅಲ್ಪಸಂಖ್ಯಾತರು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಅಲ್ಲದೆ, ಮತ ಕಳ್ಳತನ ಪ್ರಕರಣವನ್ನು ಕರ್ನಾಟಕ ಸಿಐಡಿ ತನಿಖೆ ನಡೆಸುತ್ತಿದೆ. ಆದರೆ, ಅರ್ಜಿ ಸಲ್ಲಿಸಿದ್ದ ಆರೋಪಿಗಳನ್ನು ಪತ್ತೆ ಮಾಡಲು ಅಗತ್ಯವಿರುವ ‘ಅರ್ಜಿ ಸಲ್ಲಿಸಿದವರ ಐಪಿ ಅಡ್ರೆಸ್‌’ಗಳನ್ನು ನೀಡುವಂತೆ ಕೇಳಿ 18 ತಿಂಗಳಲ್ಲಿ 18 ಬಾರಿ ಚುನಾವಣಾ ಆಯೋಗಕ್ಕೆ ಸಿಐಡಿ ಪತ್ರ ಬರೆದಿದೆ, ಪ್ರಶ್ನಿಸಿದೆ. ಆದರೆ, ಚುನಾವಣಾ ಆಯೋಗವು ಈವರೆಗೆ ಸಿಐಡಿ ಪತ್ರಕ್ಕೆ ಸ್ಪಂದಿಸಿಲ್ಲ. ಅರ್ಜಿ ಸಲ್ಲಿಸಿದವರ ಮಾಹಿತಿಯನ್ನು ಸಿಐಡಿಗೆ ಒದಗಿಸಿಲ್ಲ.

ಈ ಕಾರಣಕ್ಕಾಗಿಯೇ, ಮತ ಕಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲು ಯತ್ನಿಸಿದ ಕೊಲೆಗಾರರನ್ನು ಚುನಾವಣಾ ಆಯುಕ್ತರು ರಕ್ಷಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...