ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ: ಸಂತ್ರಸ್ತ ಮುಸ್ಲಿಂ ವಿದ್ಯಾರ್ಥಿನಿ ಆಲಿಯಾ

Date:

ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ ಎಂದು ಹಿಜಾಬ್ ವಿವಾದದ ಸಂದರ್ಭದಲ್ಲಿ ಹಿಜಾಬ್‌ಗಾಗಿ ಹೋರಾಡಿ ಸಂಚಲನ ಸೃಷ್ಟಿಸಿದ್ದ ಮುಸ್ಲಿಂ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹೇಳಿದ್ದಾರೆ.

- Advertisement -

ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ. ಈ ವಿಚಾರವು ಸದ್ಯ ರಾಜಕೀಯ ಸಂಚಲನ ಮೂಡಿಸಿದೆ. ಬ್ರಾಹ್ಮಣ ಸಮಾಜದ ಸಂಘಟನೆಗಳು ಅಲ್ಲಲ್ಲಿ ಪ್ರತಿಭಟನೆ ನಡೆಸುತ್ತಿದೆ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಅಂದು ನಮ್ಮನ್ನು ಹೊರದಬ್ಬಿದ್ರಿ, ಇಂದು ಬಿಜೆಪಿ ನಿಮ್ಮನ್ನು ಹೊರದಬ್ಬಿದೆ; ರಘುಪತಿ ಭಟ್‌ಗೆ ಹಿಜಾಬ್ ಸಂತ್ರಸ್ತ ವಿದ್ಯಾರ್ಥಿನಿ ಟಾಂಗ್

ಈ ಎಲ್ಲಾ ಬೆಳವಣಿಗೆ ನಡುವೆ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಜನಿವಾರ ವಿವಾದ ಮತ್ತು ಹಿಜಾಬ್ ವಿವಾದ ಎರಡನ್ನೂ ಉಲ್ಲೇಖಿಸಿದ್ದಾರೆ.

“ಜನಿವಾರ ಹಾಕಿದ ಕಾರಣಕ್ಕೆ ಪರೀಕ್ಷೆ ಬಹಿಷ್ಕರಿಸಲ್ಪಟ್ಟ ಬ್ರಾಹ್ಮಣನ ನೋವು ಮತ್ತು ಹಿಜಾಬ್ ಕಾರಣ ಪರೀಕ್ಷೆ ಬಹಿಷ್ಕಾರಕ್ಕೊಳಗಾದ ಮುಸ್ಲಿಂ ಹೆಣ್ಮಕ್ಕಳ ನೋವು ಒಂದೇ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಮತ್ಯಾಕೆ ತಾರತಮ್ಯ, ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ. ಇಲ್ಲಿ ಜನಿವಾರವನ್ನು ತಡೆದ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡುತ್ತಾರೆ. ಹಿಜಾಬಿಗಳಿಗೆ ಕಾಲೇಜು ಗೇಟ್ ಬಂದ್ ಮಾಡಿದ ಅಧಿಕಾರಿಗೆ ಯಾವ ಶಿಕ್ಷೆಯೂ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬ್ರಾಹ್ಮಣ ವಿದ್ಯಾರ್ಥಿಗೆ ಉಚಿತ ಇಂಜಿನಿಯರ್ ಸೀಟ್ ನೀಡುತ್ತೀರಿ, ನಮ್ಮನ್ನು ಇದುವರೆಗೂ ಪರೀಕ್ಷೆ ಬರೆದಿದ್ದೀರೋ ಇಲ್ಲವೋ ಎಂದು ಸೌಜನ್ಯಕ್ಕಾದರೂ ಕೇಳಿಲ್ಲ, ಇದು ನಮ್ಮ ವ್ಯವಸ್ಥೆ” ಎಂದಿದ್ದಾರೆ.

2022ರ ಫೆಬ್ರವರಿ ಆರಂಭದಲ್ಲಿ ರಾಜ್ಯದಲ್ಲಿ ಶಾಲಾ ಸಮವಸ್ತ್ರಕ್ಕೆ ಸಂಬಂಧಿಸಿದ ವಿವಾದ ಉಂಟಾಗಿತ್ತು. ತರಗತಿಗಳಿಗೆ ಹಿಜಾಬ್ ಧರಿಸಲು ಬಯಸಿದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು. ಇದು ಕಾಲೇಜಿನ ಸಮವಸ್ತ್ರ ನೀತಿಯ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿತ್ತು. ಈ ವಿಚಾರವು ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...