ಆಡಳಿತಕ್ಕೆ ಹೊಸ ರೂಪ; ಸಚಿವ ಸಂಪುಟದ ಎಲ್ಲ 34 ಸ್ಥಾನ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements
  • ಖಾತೆ ಹಂಚಿಕೆ ಇವತ್ತು ಅಥವಾ ನಾಳೆ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ
  • ‘ಐದು ಗ್ಯಾರಂಟಿ ಬಗ್ಗೆ ಸಚಿವ ಸಂಪುಟದಲ್ಲಿ ವಿವರ ಮಂಡಿಸಲು ಸೂಚಿಸಲಾಗಿದೆ’

ಸಚಿವ ಸಂಪುಟದ ಎಲ್ಲ 34 ಸ್ಥಾನಗಳನ್ನು ಭರ್ತಿ ಮಾಡಲಾಗಿದ್ದು, ಆಡಳಿತಕ್ಕೆ ಹೊಸ ರೂಪ ಕೊಡುವ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಶನಿವಾರ ವಿಧಾನಸೌಧದಲ್ಲಿ ಸಚಿವ ಸಂಪುಟದ ಅನೌಪಚಾರಿಕ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, “ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚಿಸಲಾಗಿದೆ. ಮುಖ್ಯಮಂತ್ರಿ ಹೊರತುಪಡಿಸಿ, 33 ಸ್ಥಾನಗಳನ್ನೂ ಭರ್ತಿ ಮಾಡಲಾಗಿದೆ. ಖಾತೆ ಹಂಚಿಕೆ ಇವತ್ತು ಅಥವಾ ನಾಳೆ ಮಾಡಲಾಗುವುದು” ಎಂದು ಹೇಳಿದರು.

“ಸಚಿವ ಸಂಪುಟದ ಸ್ವರೂಪದ ಕುರಿತು ವಿವರಿಸಿದ ಮುಖ್ಯಮಂತ್ರಿಗಳು, ಸಚಿವ ಸಂಪುಟವು ಹೊಸ ಹಾಗೂ ಹಳೆ ಮುಖಗಳ ಸಮ್ಮಿಶ್ರಣವಾಗಿದೆ. ಮೊದಲ ಬಾರಿ ಗೆದ್ದವರನ್ನು ಮಂತ್ರಿ ಮಾಡಿಲ್ಲ. ಸರ್ಕಾರ ನಾವು ಕೊಟ್ಟಿರುವ ಭರವಸೆ ಈಡೇರಿಸಬೇಕು. ಜನ ಹೊಸ ಬದಲಾವಣೆ ಬಯಸಿದ್ದಾರೆ. ಅದರಿಂದ ಆಡಳಿತಕ್ಕೆ ಹೊಸ ರೂಪ ಕೊಡುವ ದೃಷ್ಟಿಯಿಂದ ಈ ಸಚಿವರ ಸಂಪುಟ ರಚಿಸಲಾಗಿದೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Advertisements

“ವಿರೋಧ ಪಕ್ಷಗಳು ತಾವು ಕೊಟ್ಟ ವಚನ ಈಡೇರಿಸಿಲ್ಲ. ನಾವು ಹಿಂದೆಯೂ ನಮ್ಮ ವಚನ ಈಡೇರಿಸಿದ್ದೇವೆ. ಈಗಲೂ ಈಡೇರಿಸುತ್ತೇವೆ. ಐದು ಗ್ಯಾರಂಟಿಗಳ ಕುರಿತು ಮುಂದಿನ ಸಚಿವ ಸಂಪುಟದಲ್ಲಿ ವಿವರಗಳನ್ನು ಮಂಡಿಸಲು ಸೂಚಿಸಲಾಗಿದೆ. ಈ ಕುರಿತು ಚರ್ಚಿಸಿ ಅನುಮೋದನೆ ನೀಡಿ ಶೀಘ್ರವೇ ಅವುಗಳನ್ನು ಜಾರಿಗೆ ತರಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? 24 ನೂತನ ಸಚಿವರ ಸೇರ್ಪಡೆಯೊಂದಿಗೆ ಪೂರ್ಣ ಪ್ರಮಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ರಚನೆ

“ಕೊಡಗು, ಹಾವೇರಿ, ಹಾಸನ , ಚಿಕ್ಕಮಗಳೂರು ಮತ್ತಿತರ ಜಿಲ್ಲೆಗಳಿಗೆ ಪ್ರಾತಿನಿಧ್ಯ ಲಭಿಸಿಲ್ಲ. ಕೆಲವು ಮಾನದಂಡಗಳನ್ನು ಅನುಸರಿಸುವಾಗ ಕೆಲವು ಜಿಲ್ಲೆಗಳಿಗೆ ಪ್ರಾತಿನಿಧ್ಯ ದೊರೆತಿಲ್ಲ. ಉದಾಹರಣೆಗೆ ಕೊಡಗು ಜಿಲ್ಲೆಯಲ್ಲಿ ಇಬ್ಬರೂ ಮೊದಲ ಬಾರಿ ಶಾಸಕರಾಗಿದ್ದಾರೆ. ಹಾಗಾಗಿ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಲು ಸಾಧ್ಯವಾಗಿಲ್ಲ” ಎಂದು ವಿವರಿಸಿದರು.

ಪುಟ್ಟರಂಗಶೆಟ್ಟಿ ಅವರು ವಿಧಾನ ಸಭೆಯ ಉಪಾಧ್ಯಕ್ಷ ಹುದ್ದೆಯನ್ನು ಒಪ್ಪಿಕೊಂಡಿಲ್ಲ ಎಂಬ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, “ಅಸಮಾಧಾನ, ಸಮಾಧಾನ ಯಾವಾಗಲೂ ಇರುತ್ತದೆ. ಅಸಮಾಧಾನದಲ್ಲಿ ಸಮಾಧಾನವಿರುತ್ತದೆ. ಅವರೊಂದಿಗೆ ನಾನು ನಿನ್ನೆ ರಾತ್ರಿಯೇ ಮಾತನಾಡಿದ್ದೇನೆ. ಅವರು ಒಪ್ಪಿಕೊಂಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X