ಎಲ್ಲ ರಾಜಕೀಯ ಪಕ್ಷಗಳಿಗೂ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ: ಸ್ಟಾಲಿನ್‌ ಹೇಳಿಕೆಗೆ ಕಾಂಗ್ರೆಸ್ ಪ್ರತಿಕ್ರಿಯೆ

Date:

ಡಿಎಂಕೆಯ ಸಚಿವ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂಬ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಎಲ್ಲ ರಾಜಕೀಯ ಪಕ್ಷಗಳಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದೆ.

- Advertisement -

ಈ ಬಗ್ಗೆ ನವದೆಹಲಿಯ ಕಾಂಗ್ರೆಸ್ ಮುಖ್ಯ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ನಮ್ಮ ನಿಲುವು ಸ್ಪಷ್ಟವಾಗಿದೆ. ಸರ್ವ ಧರ್ಮ ಸಮಭಾವವೇ ಕಾಂಗ್ರೆಸ್‌ ನಿಲುವು. ನಾವು ಎಲ್ಲ ಧರ್ಮಗಳನ್ನು ಗೌರವಿಸುತ್ತೇವೆ. ಪ್ರತಿಯೊಂದು ಪಕ್ಷಕ್ಕೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವಿದೆ. ನಾವು ಪ್ರತಿಯೊಬ್ಬರ ನಂಬಿಕೆಗಳನ್ನು ಗೌರವಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, “ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ, ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ. ಅದನ್ನು ನಿರ್ಮೂಲನೆ ಮಾಡಬೇಕು. ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ” ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ‘ಇಂಡಿಯಾ’ ಗೆಲ್ಲದಿದ್ದರೆ ಮಣಿಪುರ, ಹರಿಯಾಣದಂತೆ ದೇಶ ಬದಲು: ಎಂ ಕೆ ಸ್ಟಾಲಿನ್

“ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ” ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದರು.

ಈ ಹೇಳಿಕೆಯ ಬಗ್ಗೆ ವಿರೋಧ ವ್ಯಕ್ತವಾದಾಗ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಸ್ಟಾಲಿನ್, “ತನ್ನ ಹೇಳಿಕೆಗೆ ಬದ್ಧವಾಗಿದ್ದೇನೆ, ಈ ಬಗ್ಗೆ ಕಾನೂನಾತ್ಮಕವಾಗಿ ಯಾವುದೇ ಪ್ರಕರಣಗಳನ್ನು ಎದುರಿಸಲು ಸಿದ್ಧವಿದ್ದೇನೆ ಎಂದು ಹೇಳಿದ್ದರು. ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೇನೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದೇನೆ ಎಂದು ಪುನರುಚ್ಚರಿಸುತ್ತಿದ್ದೇನೆ. ಇದನ್ನು ನಾನು ನಿರಂತರವಾಗಿ ಹೇಳುತ್ತೇನೆ” ಎಂದಿದ್ದರು

ನಕಲಿ ಸುದ್ದಿಗಳನ್ನು ಹರಡುತ್ತಿದೆ ಎಂದು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ಆಡಳಿತ ಪಕ್ಷವು ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಯಿಂದ ಹೆದರಿದೆ ಮತ್ತು ಜನರ ಗಮನವನ್ನು ತಿರುಗಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...