ನಮ್ಮ ಹಿಂದೆ ಓಡಾಡಿದವರೆಲ್ಲ ಇಂದು ಮಂತ್ರಿಯಾಗಿ, ಧಿಮಾಕು ತೋರಿಸುತ್ತಿದ್ದಾರೆ: ಶಾಸಕ ರಾಯರೆಡ್ಡಿ ಕಿಡಿ

Date:

Advertisements
  • ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲಲೂ ಹೆದರುತ್ತಿದ್ದರು: ರಾಯರೆಡ್ಡಿ
  • ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಿಲ್ಲ, ಈಗ ಅವಶ್ಯಕತೆ ಇಲ್ಲ

ನಮ್ಮ ಹಿಂದೆ ಓಡಾಡಿದವರೆಲ್ಲ ಮಂತ್ರಿಯಾಗಿದ್ದಾರೆ. ಅವರಪ್ಪಂದಿರ ಜೊತೆ ನಾನು ಕೆಲಸ‌ ಮಾಡಿದವ. ಈಗ ಇವರು ನಮ್ಮ ಮುಂದೆ ಧಿಮಾಕು ತೋರಿಸಿಕೊಂಡು ಓಡಾಡುತ್ತಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಜನಸಂರ್ಪಕ ಸಭೆಯಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, “ನೀವು ದುಃಖ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿಯಾಗಲು ಸಾಧ್ಯವಾಗುವುದಿಲ್ಲ. ಅದಕ್ಕೆ ಹಣೆಬರಹ ಬೇಕು” ಎಂದು ಜನರಿಗೆ ತಿಳಿಸಿದರು.

“ನಮ್ಮ ಸಿದ್ದರಾಮಯ್ಯ ಅವರನ್ನು ನೋಡಿ, ಕಾಂಗ್ರೆಸ್​​ಗೆ ಬಂದು ಎರಡು ಬಾರಿ ಮುಖ್ಯಮಂತ್ರಿ ಆದರು. ಕಾಂಗ್ರೆಸ್​​ನ ಹಳೇ (ಮೂಲ) ಮಂದಿ ಈಗ ಏನು ಹೇಳುತ್ತಿರಬಹುದು? ಇವೆಲ್ಲ ಮನುಷ್ಯನ ಅದೃಷ್ಟ” ಎಂದು ಹೇಳಿದರು.

Advertisements

“ದೇವೆಗೌಡರ ಕ್ಯಾಬಿನೆಟ್​​​ನಲ್ಲಿ ನಾನು ಸಚಿವ ಆಗಿದ್ದೆ. ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲಲೂ ಹೆದರುತ್ತಿದ್ದರು. ಏನ್ ಮಾಡುವುದು, ಅವರ ಹಣೆಬರಹದಲ್ಲಿ ಸಿಎಂ ಆಗುವುದು ಬರೆದಿತ್ತು. ಪಾಪ ಎಲ್ ​ಕೆ ಅಡ್ವಾಣಿ ಅವರು ಬಿಜೆಪಿ ಕಟ್ಟಿಕಟ್ಟಿ ಹೈರಾಣಾದರು. ಆದರೆ ಪ್ರಧಾನಿಯಾದದ್ದು ನರೇಂದ್ರ ಮೋದಿ” ಎಂದರು.

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆ ಬಗ್ಗೆ ವಿವಾದಾತ್ಮಕ ಹೇಳಿಕೆ : ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್‌ ದೂರು

“ಮುಖ್ಯಮಂತ್ರಿಗಳು ನನಗೆ ಕ್ಯಾಬಿನೆಟ್ ದರ್ಜೆ ಸ್ಥಾನ ನೀಡಲು ಸಿದ್ಧರಾಗಿದ್ದರು. ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನ ಕೊಡುತ್ತೇನೆ ಎಂದು ಹೇಳಿದ್ದರು. ನಾನೇ ಬೇಡ ಎಂದು ಹೇಳಿದ್ದೆ” ಎಂದು ತಿಳಿಸಿದರು.

“ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರವಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಸಚಿವ ಸ್ಥಾನ ಬೇಡ ಎಂದು ಬಹಿರಂಗವಾಗಿ ಬರೆದುಕೊಡಲು ಸಿದ್ಧ. ಮುಂದೆಯೂ ನನ್ನನ್ನು ಮಂತ್ರಿಯನ್ನಾಗಿ ಮಾಡುವುದು ಬೇಡ” ಎಂದು ಮಂಗಳವಾರ ರಾಯರೆಡ್ಡಿ ಕೊಪ್ಪಳದಲ್ಲಿ ಹೇಳಿದ್ದನ್ನು ಇಲ್ಲಿ ನೆನೆಯಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X