ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದ ಹೊರತು ಆಲಮಟ್ಟಿ ಅಣೆಕಟ್ಟು ಎತ್ತರ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತದ ವತಿಯಿಂದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ನೇತೃತ್ವದಲ್ಲಿ ಆಲಮಟ್ಟಿ ಜಲಾಶಯದ ಬಳಿ ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಣೆ ಮಾಡಿದರು.

- Advertisement -

ಬಾಗಿನ ಅರ್ಪಣೆ ಮಾಡಿ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಆಲಮಟ್ಟಿ ಜಲಾಶಯದ ಅಣೆಕಟ್ಟಿನ ಎತ್ತರದ ವಿಷಯಕ್ಕೆ‌ ಸಂಬಂಧಿಸಿದಂತೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳ ವಿಶೇಷ ಸಭೆಯನ್ನು ಪ್ರಧಾನಿ ಮೋದಿ ಅವರು ಶೀಘ್ರದಲ್ಲೇ ಕರೆಯಬೇಕು” ಎಂದು ಆಗ್ರಹಿಸಿದರು‌.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಆಲಮಟ್ಟಿ ಅಣೆಕಟ್ಟು ಎತ್ತರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ಎರಡನೇ ಹಂತದ ನ್ಯಾಯಾಧೀಕರಣದ ತೀರ್ಪಿನ ನಂತರ ನೋಟಿಫಿಕೇಷನ್ ಆಗಿಲ್ಲ. ಇದು ಆಗುವವರೆಗೂ ಆಣೆಕಟ್ಟು ಎತ್ತರ ಅಸಾಧ್ಯ. ಹಾಗಾಗಿ ಕೇಂದ್ರ ಸರ್ಕಾರ ಕೂಡಲೇ ಈ ಸಭೆ ಆಯೋಜಿಸಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರಕಾರ ಕೂಡಾ ಕೃಷ್ಣಾ ಕೊಳ್ಳದ ಫಲಾನುಭವಿ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಎಲ್ಲ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆಯನ್ನು ಶೀಘ್ರದಲ್ಲಿ ಕರೆಯಲಿದೆ. ಭೂಸ್ವಾಧೀನ, ಪುನರ್ ವಸತಿ, ಪುನರ್ ನಿರ್ಮಾಣಕ್ಕೆ ಸದ್ಯದ ಕಾಲಘಟ್ಟದಲ್ಲಿ 80 ಸಾವಿರ ಕೋಟಿ ರೂ‌. ಖರ್ಚಾಗುವ ನಿರೀಕ್ಷೆ ಇದೆ” ಎಂದು ಮಾಹಿತಿ ನೀಡಿದರು.

“ಎಚ್‌ ಡಿ ಕುಮಾರಸ್ವಾಮಿ ಅರೆಸ್ಟ್ ಮಾಡೋಕೆ ನೂರು ಸಿದ್ದರಾಮಯ್ಯ ಬೇಕಿಲ್ಲ. ಒಬ್ಬ ಕಾನ್‌ಸ್ಟೇಬಲ್ ಸಾಕು” ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿ ಕುಮಾರಸ್ವಾಮಿಗೆ ತಿರುಗೇಟು ಕೊಟ್ಟರು.

ಮುಡಾ : ದಾಖಲೆ ತಿದ್ದಿಲ್ಲ

“ಮುಡಾ ಹಗರಣದಲ್ಲಿ ನನ್ನ ಪಾತ್ರ, ಪ್ರಭಾವವಿಲ್ಲ. ಯಾವ ದಾಖಲೆಯನ್ನೂ ತಿದ್ದಿಲ್ಲ. ವೈಟನರ್ ಹಚ್ಚಿ ದಾಖಲೆಯಲ್ಲಿ ತಿದ್ದುಪಡಿ ಮಾಡಿಲ್ಲ” ಎಂದು ಇದೇ ವೇಳೆ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...