ಮಂಜೂರಾಗಿದ್ದ ಅನುದಾನಕ್ಕೆ ತಡೆ: ವಿಧಾನಸೌಧದೆದುರು ಬಿಜೆಪಿ ಶಾಸಕ ಮುನಿರತ್ನ ಏಕಾಂಗಿ ಪ್ರತಿಭಟನೆ

Date:

  • ಪ್ರತಿಭಟನಾ ಸ್ಥಳಕ್ಕೆ ಬಂದಿದ್ದ ಬಿಜೆಪಿ ಶಾಸಕರ ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು
  • ಅನುಮೋದನೆಗೊಂಡಿದ್ದ ₹126 ಕೋಟಿ ಅನುದಾನ ಬಿಡುಗಡೆಗೊಳಿಸಲು ಮುನಿರತ್ನ ಆಗ್ರಹ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಿಎಂ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾಗಿದ್ದ 126 ಕೋಟಿ ರೂ. ಅನುದಾನ ವಾಪಸ್ ಖಂಡಿಸಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಉಪವಾಸ ಧರಣಿ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಶಾಸಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ವಿರುದ್ಧ ಬಿತ್ತಿಪತ್ರ ಹಿಡಿದು ಪ್ರತಿಭಟನೆ ಮಾಡಿದರು.

ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರತಿಭಟನೆ ನಿಲ್ಲಿಸುವಂತೆ ಮುನಿರತ್ನ ಅವರ ಬಳಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ, ಇದು ಶಾಂತಿಯುತ ಹಾಗೂ ಯಾರಿಗೂ ತೊಂದರೆ ಮಾಡದ ಪ್ರತಿಭಟನೆ. ನನ್ನ ಕ್ಷೇತ್ರಕ್ಕೆ ಅನ್ಯಾಯ ಆಗಿದೆ ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸಂದರ್ಭ ಪ್ರತಿಭಟನೆಗೆ ಆಗಮಿಸಿದ್ದ ಮುನಿರತ್ನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಾಸಕರಿಗೆ ಪ್ರತಿಭಟನೆಗೆ ಅವಕಾಶ ಇದೆ. ಬೇರೆಯವರಿಗೆ ಇಲ್ಲ ಎಂದ ಪೊಲೀಸರು ಶಾಸಕರನ್ನು ಬಿಟ್ಟು ಉಳಿದವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದರಿಂದ ಶಾಸಕ ಮುನಿರತ್ನ ಏಕಾಂಗಿಯಾಗಿ ಪ್ರತಿಭಟನೆ ಮುಂದುವರಿಸಿದರು.

ಏಕಾಂಗಿಯಾಗಿ ಉಪವಾಸ ಧರಣಿ ಮುಂದುವರಿಸಿದ್ದ ಮುನಿರತ್ನ ಬಳಿ ಬಂದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಮನವೊಲಿಸಿದ ಹಿನ್ನೆಲೆಯಲ್ಲಿ ಧರಣಿ ಕೈಬಿಟ್ಟಿದ್ದಾರೆ. ಆ ಬಳಿಕ ಆರ್‌.ಆರ್.ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಆಗ್ರಹಿಸಿ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇನೆ. ಬರೆದಿರುವ ಪತ್ರವನ್ನು ಅವರಿಗೆ ನೀಡಿ ಕಾಲಿಗೆ ಬಿದ್ದು ಅನುದಾನ ನೀಡುವಂತೆ ಕೇಳುತ್ತೇನೆ ಎಂದು ತಿಳಿಸಿ, ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ನಡೆಸುತ್ತಿದ್ದ ಧರಣಿ ಕೈ ಬಿಟ್ಟು ತೆರಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಡಾ ದಾಖಲೆ ಬಹಿರಂಗ, ಮನೆ ಮುರುಕ ರಾಜಕಾರಣ ಬಿಡಿ ಎಂದು ಸಿಎಂ ಬಿಜೆಪಿಗೆ ತಿರುಗೇಟು

ಅಧಿವೇಶನದಲ್ಲಿ ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಆಡಳಿತ ಪಕ್ಷದವರು ಬೆಳಕು ಚೆಲ್ಲಿ...

ಬಿಜೆಪಿ ಪಾದಯಾತ್ರೆಯ ಪ್ರತಿ ದಿನ ಅವರ ಒಂದೊಂದು ಹಗರಣ ಬಯಲು: ಡಿ ಕೆ ಶಿವಕುಮಾರ್

ಬಿಜೆಪಿ ಪಾದಯಾತ್ರೆಯ ಪ್ರತಿ ದಿನವೂ ಅವರ ಒಂದೊಂದು ಹಗರಣ ಬಯಲು ಮಾಡುತ್ತೇವೆ...

ಏನಿದು ಮುಡಾ – ವಾಲ್ಮೀಕಿ ನಿಗಮ ಅಕ್ರಮ; ಈ ಹಿಂದೆ ಯಾವೆಲ್ಲಾ ಹಗರಣಗಳು ನಡೆದಿವೆ?

ಲೋಕಸಭಾ ಚುನಾವಣಾ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮುಡಾ ಮತ್ತು...

ಮುಡಾ, ವಾಲ್ಮೀಕಿ ನಿಗಮ ಅಕ್ರಮ ಖಂಡಿಸಿ ದೆಹಲಿಯಲ್ಲಿ ಬಿಜೆಪಿ ಸಂಸದರ ಪ್ರತಿಭಟನೆ, ಸಿಎಂ ರಾಜೀನಾಮೆಗೆ ಆಗ್ರಹ

ರಾಜ್ಯದಿಂದ ಆಯ್ಕೆಯಾದ ಬಿಜೆಪಿ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಕರ್ನಾಟಕ ಸರ್ಕಾರದ...