ಲಂಚ, ಜೀವ ಬೆದರಿಕೆ ಆರೋಪ | ಬಿಜೆಪಿ ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್

Date:

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ನೀಡಿದ ದೂರು ಆಧರಿಸಿ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು‌‌‌ ಮಾಡಿಕೊಂಡಿದ್ದಾರೆ.

ಜೀವ ಬೆದರಿಕೆ ಆರೋಪ

“ಬಿಜೆಪಿ ಶಾಸಕ ಮುನಿರತ್ನ ಮತ್ತು ಅವರ ಆಪ್ತ ವಸಂತ್ ಕುಮಾರ್ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ರೇಣುಕಾಸ್ವಾಮಿ ರೀತಿಯಲ್ಲೇ ನಿನ್ನ ಕೊಲೆ ಮಾಡುತ್ತೇವೆ ಎಂದು ಹೆದರಿಸಿದ್ದಾರೆ” ಎಂದು ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಬೆಂಗಳೂರು ಪ್ರೆಸ್‌ ಕ್ಲಬ್‌ನಲ್ಲಿ ಸುದ್ದುಗೋಷ್ಠಿ ಮಾಡಿ ಗಂಭೀರ ಆರೋಪ ಮಾಡಿದ್ದರು.

“ಹಣ ವಸೂಲಿ ಮಾಡಲು ಜಾತಿ ನಿಂದನೆ ಮಾಡಿ, ಹೆಂಡತಿ ಮತ್ತು ತಾಯಿ ಬಗ್ಗೆ ಅತ್ಯಂತ ಅಶ್ಲೀಲ ಭಾಷೆಯಲ್ಲಿ ನಿಂದಿಸಿ ತಮಗೆ ಜೀವ ಬೆದರಿಕೆಯೊಡ್ಡಿದ್ದಾರೆ. ಮುಂದೆ ನಾನು‌ ಜೀವಂತವಾಗಿ ಇರ್ತಿನೋ ಇಲ್ವೋ ಗೊತ್ತಿಲ್ಲ. ನನ್ನ ಜಾತಿ ಬಳಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನ ಹೆಂಡತಿ ಫೋಟೋ ತೋರಿಸು ಹೇಗಿದ್ದಾಳೆ ಎನ್ನುತ್ತಾರೆ. ಮನಿರತ್ನ ನನ್ನ ಹೆಂಡತಿಯನ್ನು ಮಂಚಕ್ಕೆ ಕಳುಹಿಸು ಎಂದಿದ್ದಾರೆ. ನನ್ನ ತಾಯಿಯ ಬಗ್ಗೆ ಅಸಹ್ಯವಾಗಿ ಮಾತಾಡಿದ್ದಾರೆ” ಎಂದು ಆರೋಪಿಸಿ, ಮುನಿರತ್ನ ಮಾತನಾಡಿದ್ದಾರೆ ಎನ್ನಲಾದ ಆಡಿಯೋಗಳನ್ನು ಬಿಡುಗಡೆ ಮಾಡಿದ್ದರು.

“ಮುನಿರತ್ನ ನನ್ನನ್ನು ಏನಾದ್ರೂ ಮಾಡುವಷ್ಟು ಪ್ರಭಾವಿ. ನನ್ನ ಜೀವಕ್ಕೆ ಅಪಾಯವಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್‌ ಹಾಗೂ ಪೊಲೀಸ್ ಕಮಿಷನರ್‌ ಅವರನ್ನು ಭೇಟಿ ಆಗಿ ದೂರು ಕೊಡುವೆ” ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...