ಕಮೀಷನ್ ಆರೋಪ | ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚಲಿದೆ: ವಿಜಯೇಂದ್ರ

Date:

ಸಾಕ್ಷಿ ಸಮೇತ ಡಿ ಕೆಂಪಣ್ಣ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ 40% ಕಮೀಷನ್ ಆರೋಪ ಮಾಡುತ್ತಿದ್ದಾರೆ. ಆದರೆ, ವಾಸ್ತವವಾಗಿ 80% ವರೆಗೂ ಕಮೀಷನ್ ದಂಧೆ ಈ ಕಾಂಗ್ರೆಸ್ ಸರ್ಕಾರದಲ್ಲಿ ಎಗ್ಗಿಲ್ಲದೇ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆರೋಪಿಸಿದರು.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮಾಡೋದೆಲ್ಲಾ ಅನಾಚಾರ ಮನೆ ಮುಂದೆ ಬೃಂದಾವನ ಎಂಬ ಗಾದೆ ಮಾತು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಷರಶಃ ಅನ್ವಯಿಸುತ್ತದೆ.
ಬಿಜೆಪಿ ಸರ್ಕಾರದ ಕಾಲದಲ್ಲಿ ಇದೇ ಕೆಂಪಣ್ಣನವರು ಕಮೀಷನ್ ಆರೋಪದ ಗದ್ದಲ ಎಬ್ಬಿಸಿದ್ದರು. ಕಾಂಗ್ರೆಸ್ಸಿಗರು ಅದನ್ನು ಬಂಡವಾಳ ಮಾಡಿಕೊಂಡು ಸತ್ಯಹರಿಶ್ಚಂದ್ರರಂತೆ ಕೂಗಾಡಿದ್ದರು” ಎಂದಿದ್ದಾರೆ.

“ಸತ್ಯ ಏನೆಂಬುದು ಜನರಿಗೆ ಮನವರಿಕೆಯಾಗುತ್ತಿದೆ, ಮಾನ್ಯ ಕೆಂಪಣ್ಣನವರು ತಾವೇ ಹೇಳಿರುವಂತೆ
ಕಮೀಷನ್ ವಸೂಲಿಗೆ ನಿಯುಕ್ತಿಯಾಗಿರುವ ಅಧಿಕಾರಗಳ ವಿವರ ಧೈರ್ಯವಾಗಿ ಬಹಿರಂಗ ಪಡಿಸಲಿ ಆಗ ಅದರ ಹಿಂದಿರುವ ಮುಖ್ಯ, ಉಪ ಮುಖ್ಯ ಸೂತ್ರಧಾರಿಗಳ ನೈಜ ಮುಖವಾಡ ಕಳಚುತ್ತದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ವಿಜಯಣ್ಣ ಎಂಟು ತಿಂಗಳ ಹಿಂದೆ ತಮ್ಮದೇ ಸರ್ಕಾರದಲ್ಲಿ ನಲವತ್ತು ಪರ್ಸೆಂಟ್ ಕಮಿಷನ್,,ಪಾಪ ಪರ್ಸೆಂಟೇಜು ಏಟಿಗೆ ಕೆಲವರು ಜೀವ ಕಳಕೊಂಡರು,,, ಎಷ್ಟು ಬೇಗ ಮರೆತುಹೋಗಿದೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ನೀರಿಗೆ ಹಾಹಾಕಾರ ಶುರುವಾಗಿದೆ. ಇದೀಗ, ರಾಜರಾಜೇಶ್ವರಿ...

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ಬೆಂಗಳೂರು | ಪ್ರಿಯಕರನೊಂದಿಗೆ ಸೇರಿ ಎರಡು ವರ್ಷದ ಮಗುವಿಗೆ ಚಿತ್ರಹಿಂಸೆ ನೀಡಿದ ತಾಯಿ

ಹೆತ್ತ ತಾಯಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಎರಡು ವರ್ಷದ ಮಗುವನ್ನು ಮನೆಯಲ್ಲಿ...