ಸಣ್ಣ ನೀರಾವರಿ ಇಲಾಖೆಯಲ್ಲಿ ಅಕ್ರಮದ ಆರೋಪ; ವರದಿ ಕೇಳಿದ ಸಚಿವ ಬೋಸರಾಜು

Date:

  • ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರ ಸಭೆ
  • ಇಲಾಖೆ ಪ್ರಗತಿಕಾರ್ಯಗಳ ಬಗ್ಗೆ ಮಾಹಿತಿ ಕೇಳಿದ ಬೋಸರಾಜು

ಸಣ್ಣ ನೀರಾವರಿ ಇಲಾಖೆಯಲ್ಲಿಅಕ್ರಮದ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಆ ಕುರಿತು ವರದಿ ನೀಡುವಂತೆ ಅಧಿಕಾರಿಳಿಗೆ ಸೂಚಿಸಿರುವುದಾಗಿ ಸಚಿವ ಬೋಸರಾಜು ಹೇಳಿದರು.

- Advertisement -

ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಮಾಹಿತಿ ನೀಡಿದ ಅವರು, ಪ್ರತಿ ಇಲಾಖೆಯ ಪ್ರಗತಿ ಪರಿಶೀಲನೆ ಹಾಗೂ ಅಕ್ರಮಗಳ ಕುರಿತಂತೆ ವರದಿ ಪಡೆಯಲು ಮುಖ್ಯಮಂತ್ರಿಗಳು ಹೇಳಿದ್ದರು. ಅದರಂತೆಯೇ ಈಗ ನಮ್ಮ ಇಲಾಖೆ ಕಾರ್ಯ ವೈಖರಿ ಬಗ್ಗೆ ವರದಿ ಪಡೆಯಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸಣ್ಣ ನೀರಾವರಿ ಇಲಾಖೆಯಲ್ಲಿ ಇತ್ತೀಚೆಗೆ ನಡೆದ ಕೆಲಸಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಸಣ್ಣ ನೀರಾವರಿ ಇಲಾಖೆಯಲ್ಲಿ ಯಾವುದೇ ಅಕ್ರಮ ಕಂಡು ಬಂದರೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳೆಲ್ಲ ಪರಿಶೀಲನೆಗೆ ತೆರಳಿದ್ದಾರೆ ಎಂದ ಅವರು ರಾಜ್ಯಾದ್ಯಂತ ಕೆರೆಗಳ ಪರಿಶೀಲನಾ ಕಾರ್ಯವೂ ನಡೆಯುತ್ತಿದ್ದು, ಇಲಾಖೆ ಇಂಜಿನಿಯರ್‌ಗಳು ಸ್ಥಳ ಪರಿಶೀಲನೆಗೆ ತೆರಳಿದ್ದಾರೆ ಎಂದರು.

ಇನ್ನು ರಾಜ್ಯದಲ್ಲಿನ ಕೆರೆತುಂಬುವ ಯೋಜನೆ ಬಗ್ಗೆ ಮಾಹಿತಿ ನೀಡಿದ ಅವರು, ಕೆರೆ ತುಂಬುವ ಕೆಲಸ ಇಡೀ ರಾಜ್ಯದಲ್ಲಿ ನಡೆಯುತ್ತಿದೆ, ಅಂತರ್ಜಲ ಹೆಚ್ಚಿಸುವ ಕೆಲಸ ಕೂಡ ನಡೆಯುತ್ತಿದೆ. ಕೆ ಸಿ ವ್ಯಾಲಿಯ ಎರಡು ಪ್ರಾಜೆಕ್ಟ್‌ಗಳು ಯಶಸ್ವಿಯಾಗಿವೆ; ಈ ಹಿನ್ನೆಲೆಯಲ್ಲಿ ಮೂರನೇ ಪ್ರಾಜೆಕ್ಟ್‌ಗೆ ಮುಂದಾಗಿದ್ದೇವೆ ಎಂದರು.

ಈ ವಿಚಾರ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ಬರುತ್ತಿದೆ. ರಾಜ್ಯಾದ್ಯಂತ ಮಲಿನ ನೀರನ್ನು ಶುದ್ದಗೊಳಿಸಿ ಕೆರೆಗಳಿಗೆ ತುಂಬಿಸುವ ಕೆಲಸ ಮಾಡ್ತೇವೆ ಎಂದ ಅವರು, ತುಮಕೂರು ನಗರಕ್ಕೆ ನೀರು ಪೂರೈಕೆಗೆ 1080 ಕೋಟಿ ರೂಪಾಯಿ ವೆಚ್ಚದ ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ತಮ್ಮ ಮತ್ತೊಂದು ಇಲಾಖೆ ಕಾರ್ಯ ವೈಖರಿ ಬಗ್ಗೆ ಮಾತನಾಡಿದ ಸಚಿವ ಬೋಸರಾಜು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಬಗ್ಗೆಯೂ ಚರ್ಚೆ ಮಾಡಿದ್ದೇವೆ; ಮಕ್ಕಳಿಗೆ ಅನುಕೂಲ ಆಗುವ ರೀತಿ ವೈಜ್ಞಾನಿಕ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದೇವೆ ಎಂದರು.

ಈ ಸುದ್ದಿ ಓದಿದ್ದೀರಾ?: ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪೋಸ್ಟ್‌ಗಳನ್ನು ನೋಡಿಕೊಂಡು ಸರ್ಕಾರ ಸುಮ್ಮನೇ ಕೂರಲ್ಲ: ಪ್ರಿಯಾಂಕ್‌ ಖರ್ಗೆ

ಇದೇ ವೇಳೆ ವಿಧಾನ ಪರಿಷತ್ ಚುನಾವಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಬಗ್ಗೆ ನಾನು ಯಾವುದೇ ಮಾತುಕತೆ ಮಾಡಿಲ್ಲ, ಹೈಕಮಾಂಡ್ ನಾಯಕರು, ಸಿಎಂ, ಡಿಸಿಎಂ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದೇ ಅಂತಿಮ ಎಂದು ಹೇಳಿದರು.

ಮುಂದುವೆರದು ಮಾತನಾಡಿದ ಅವರು, ನಾನು ನಮ್ಮ ನಾಯಕರು ಹೇಳಿದ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದೇನೆ. ಎಲ್ಲ ಸಮಸ್ಯೆಗಳನ್ನು ಸರಿಪಡಿಸುವುದು ಸಿಎಂ ಡಿಸಿಎಂ ಮಾಡ್ತಾರೆ. ಕೊಟ್ಡ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸಿಕೊಂಡು ಹೋಗುವುದು ನನ್ನ ಕರ್ತವ್ಯ ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...