ಸಿದ್ದರಾಮಯ್ಯರಿಂದ 24 ಹಿಂದೂ ಕಾರ್ಯಕರ್ತರ ಹತ್ಯೆ ಆರೋಪ: ‘ಶಾಸಕ ಹರೀಶ್‌ ಪೂಂಜಾ ಹೇಳಿಕೆಯ ವಿಡಿಯೋ ಒದಗಿಸಿ’ ಎಂದ ಹೈಕೋರ್ಟ್‌

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೀಡಿರುವ ಹೇಳಿಕೆಯ ವಿಡಿಯೋ ಸಿಡಿಯನ್ನು ಒದಗಿಸುವಂತೆ ಪ್ರಕರಣದ‌ ದೂರುದಾರರಿಗೆ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ.

ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ದೂರುದಾರೆ ನಮಿತಾ ಕೆ.ಪೂಜಾರಿ ಅವರಿಗೆ ವಿಡಿಯೋ ಸಿಡಿಯನ್ನು ಒದಗಿಸುವಂತೆ ಕರ್ನಾಟಕ ಹೈಕೋರ್ಟ್ ಮೌಖಿಕವಾಗಿ ಶುಕ್ರವಾರ ಸೂಚಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧ ಬೆಳ್ತಂಗಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ, ಶಾಸಕ ಹರೀಶ್ ಪೂಂಜಾ ಅವರು ನೀಡಿದ ಹೇಳಿಕೆಯಿಂದ ಯಾವುದೇ ಹಿಂಸಾಚಾರ ಅಥವಾ ಶಾಂತಿಭಂಗ, ಕೋಮು ಸೌಹಾರ್ದಕ್ಕೆ ಧಕ್ಕೆಯಾದ ಪ್ರಕರಣ ನಡೆದಿಲ್ಲ. ರಾಜಕೀಯ ಪ್ರೇರಿತ, ದುರುದ್ದೇಶ ಮತ್ತು ದ್ವೇಷ ಭಾವನೆಯಿಂದ ದೂರು ದಾಖಲಿಸಿದ್ದು, ಅದನ್ನು ರದ್ದುಪಡಿಸಬೇಕು ಎಂದು ಕೋರಿದರು.

ಇದಕ್ಕೆ ಆಕ್ಷೇಪಿಸಿದ ದೂರುದಾರೆ ಪರ ವಕೀಲ ಬಿ ಲತೀಫ್‌ ಅವರು, ‌ಅರ್ಜಿದಾರರು ನೀಡಿರುವ ಹೇಳಿಕೆ‌ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಿದೆ. ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆಯ ವಿಡಿಯೋ ಸಿಡಿ ತಮ್ಮ ಬಳಿ ಇದೆ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಮಯಾವಕಾಶ ನೀಡಬೇಕು ಎಂದು ಕೋರಿದರು. ಆ ಮನವಿಗೆ ಒಪ್ಪಿದ ಪೀಠವು ಸಿಡಿ ಒದಗಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಡಿಸೆಂಬರ್‌ 8ಕ್ಕೆ ಮುಂದೂಡಿದೆ.

ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹರೀಶ್ ಪೂಂಜಾ ಸ್ಪರ್ಧಿಸಿ, ಜಯ ಸಾಧಿಸಿದ್ದರು. ಇದರಿಂದ ಬೆಳ್ತಂಗಡಿಯ ಕಿನ್ಯಮ್ಮ ಸಭಾಭವನ ಜೈನ್ ಪಟೇಲ್ ಸಭಾಂಗಣದಲ್ಲಿ 2023ರ ಮೇ 22ರಂದು ಬಿಜೆಪಿ ಪಕ್ಷದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡುತ್ತಾ, ‘ಸತ್ಯಣ್ಣ, 24 ಮಂದಿ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಸಿದ್ದರಾಮಯ್ಯ ಅವರಿಗೆ ಮತ ಕೇಳಿದ್ದೀರಲ್ಲಾ? ಹಿಂದೂ ಹುಡುಗಿಯನ್ನು ಪ್ರೀತಿಸಿದ್ದ ಮುಸ್ಲಿಂ ಹುಡುಗನಿಗೆ ಹಿಂದೂ ಹುಡುಗನೊಬ್ಬ ಹಲ್ಲೆ ಮಾಡಿದ್ದ. ಗೋವುಗಳನ್ನು ಸಾಗಿಸುತ್ತಿದ್ದವರಿಗೆ ಹಿಂದೂ ಯುವಕರು ತಡೆದು ಹಲ್ಲೆ ಮಾಡಿದ್ದರು. ಅವರನ್ನು ಪೊಲೀಸರು ಬಂಧಿಸಿದ್ದರು. ನಾನು ಠಾಣೆಗೆ ಹೋಗಿ ಅವರ ಮೇಲೆ ಪ್ರಕರಣ ದಾಖಲಾಗದಂತೆ ನೋಡಿಕೊಂಡು ಠಾಣೆಯಿಂದ ಬಿಡಿಸಿಕೊಂಡು ಬಂದಿದ್ದೇನೆ’ ಎಂದು ಹೇಳಿಕೆ ನೀಡಿದ್ದರು.

ಇದನ್ನು ಆಧರಿಸಿ ನಮಿತಾ ಕೆ.ಪೂಜಾರಿ ಎಂಬುವರು ಬೆಳ್ತಂಗಡಿ ಠಾಣೆಗೆ ದೂರು ನೀಡಿ, ಹರೀಶ್ ಪೂಂಜಾ ಶಾಸಕನಾಗಿದ್ದುಕೊಂಡು ಕೋಮು ಪ್ರಚೋದಕ ಸಂವಿಧಾನಬಾಹಿರ ಹೇಳಿಕೆ ನೀಡಿದ್ದಾರೆ. ಹಿಂದೂ ಮತ್ತು ಮುಸ್ಲಿಂ ಧರ್ಮಗಳ ಮಧ್ಯೆ ದ್ವೇಷ ಉಂಟು ಮಾಡಬೇಕು ಹಾಗೂ ಶಾಂತಿ ಕದಡಬೇಕು ಎಂಬ ಉದ್ದೇಶದಿಂದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದರು. ದೂರು ಸ್ವೀಕರಿಸಿದ್ದ ಬೆಳ್ತಂಗಡಿ ಠಾಣಾ ಪೊಲೀಸರು ಪೊಲೀಸರು, ಐಪಿಸಿ ಸೆಕ್ಷನ್‌ಗಳಾದ 153, 153(ಎ) 505 ಮತ್ತು 505(ಎ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೈರಪ್ಪ ಮತ್ತು ಕುತರ್ಕದ ಉರುಳು

ಅಂತಃಕರಣವೇ ಇಲ್ಲದಾತ ಅದು ಹೇಗೆ ಬರಹಗಾರನಾಗಲು ಸಾಧ್ಯ? ತನ್ನ ಸಹಜೀವಿಗಳ ಬಗ್ಗೆ...

ಕೇರಳ ವಿಧಾನಸಭೆಯಲ್ಲಿ SIR ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯವು...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

ನೈಜ ದೇಶಭಕ್ತರು ಪಾಕ್ ವಿರುದ್ಧದ ಪಂದ್ಯ ನೋಡಿಲ್ಲ: ಬಿಜೆಪಿ, ಟೀಮ್ ಇಂಡಿಯಾವನ್ನು ಟೀಕಿಸಿದ ಸಂಜಯ್ ರಾವತ್

ಪಾಕಿಸ್ತಾನ ವಿರುದ್ಧದ ಏಷ್ಯಾ ಕಪ್ ಫೈನಲ್‌ನಲ್ಲಿ ಟೀಮ್ ಇಂಡಿಯಾ ಆಡಿದ ವಿಚಾರದಲ್ಲಿ...

Download Eedina App Android / iOS

X