ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಸಂತ್ರಸ್ತನ ವಿರುದ್ಧವೇ FIR ದಾಖಲು

Date:

Advertisements

ವಿಧಾನ ಪರಿಷತ್ ಸದಸ್ಯ, ಹೆಚ್ ಡಿ ರೇವಣ್ಣ ಅವರ ಮಗ ಡಾ.ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಯುವಕನ ವಿರುದ್ಧವೇ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಅರಕಲಗೂಡು ಮೂಲದ ಸಂತ್ರಸ್ತ ಯುವಕ ಬೆಂಗಳೂರಿನಲ್ಲಿ ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದಾರೆ. ಯುವಕ ಸುಳ್ಳು ಆರೋಪ ಮಾಡಿದ್ದು, ಹಣಕ್ಕಾಗಿ ಪೀಡಿಸಿ, ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಎಂಎಲ್‌ಸಿ ಅವರ ಆಪ್ತ ಶಿವಕುಮಾರ್ ನೀಡಿದ ದೂರು ಆಧರಿಸಿ ಎಫ್‌ಐಆರ್ ದಾಖಲಾಗಿದೆ.

‘5 ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ’ ಎಂದು ಯುವಕ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಐಪಿಸಿ ಸೆಕ್ಷನ್‌ 384, 506 ರ ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

Advertisements

ದೂರಿನಲ್ಲಿ ಏನಿದೆ?

‘ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ನಾನು ಫೋನ್‌ ನಂಬರ್ ಕೊಟ್ಟಿದ್ದೆ. ಜೂನ್ 16ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಹೋಗಿದ್ದ ಸಂತ್ರಸ್ತ ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲಾಕ್‌ಮೇಲ್‌ ಮಾಡಲು ಆರಂಭಿಸಿದ್ದಾನೆ” ಎಂದು ಆರೋಪಿಸಿದ್ದಾರೆ.

ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸ್‌ ಕೆಲಸ ಕೊಡಿಸುತ್ತಿಲ್ಲ. ನನಗೆ ತುಂಬಾ ಕಷ್ಟ ಇದೆ. ನನಗೆ ಹಣ ಬೇಕು. ನೀನು ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ಹಾಕುತ್ತೇನೆ ಎಂದು ಬೆದರಿಕೆ ಹಾಕಿದ. ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸರು ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ. ಯಾಕೆ ಹಣ ಕೊಡಬೇಕು ಎಂದು ಸೂರಜ್‌ ರೇವಣ್ಣ ಕೇಳಿದ್ದರು.

ಜೂನ್‌ 18ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೋ ಹಾಕಿ ಬೆದರಿಕೆ ಹಾಕಿದ್ದಾನೆ. ಮೆಡಿಕಲ್ ಲೀಗಲ್ ಕೇಸ್ ಸೀಲ್ ಇರುವ ಅಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ. ಐದು ಕೋಟಿ ಬಳಿಕ ಮೂರು ಕೋಟಿ, ಕಡೆಗೆ ಎರಡೂವರೆ ಕೋಟಿಯಾದ್ರೂ ಹಣ ಕೊಡಿಸು ಎಂದು ಬೇಡಿಕೆ ಇಟ್ಟಿದ್ದಾನೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ಬಳಿಕ ಸೂರಜ್ ರೇವಣ್ಣ ಸರದಿ: ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ!

ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬದ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲ್ಯಾಕ್‌ಮೇಲ್ ಮಾಡಿದ. ನಿಮ್ಮ ಬಾಸ್ ಹಣ ಕೊಡದಿದ್ದರೆ ದೊಡ್ಡ ದೊಡ್ಡವರು ಹಣ ಕೊಡಲು ರೆಡಿ ಇದ್ದಾರೆ. ನಾನು ಬೆಂಗಳೂರಿಗೆ ಹೋಗಿ ಮಾಧ್ಯಮದ ಮುಂದೆ ಹೋಗುತ್ತೇನೆ. ಸೂರಜ್ ರೇವಣ್ಣ ಗೌರವ ಹಾಳು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X