ಮಣಿಪುರದ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ: ಶೋಭಾ ಕರಂದ್ಲಾಜೆ ಆರೋಪ

Date:

ಮಣಿಪುರದ ಘಟನೆ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ. ಆದರೆ, ಮಣಿಪುರದ ಈಗಿನ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಮಣಿಪುರದಲ್ಲಿ ಜಾತಿ, ಧರ್ಮ ಸಂಘರ್ಷ ನಡಿಯುತ್ತಿದೆ. ಹಿಂದಿನ ಸರ್ಕಾರಗಳ ತಪ್ಪುಗಳ ಕಾರಣದಿಂದ ಇದೆಲ್ಲ ನಡೆಯುತ್ತಿದೆ” ಎಂದು ದೂರಿದರು.

ಬೇರೆ ದೇಶದ ನುಸುಳುಕೋರರು ದೊಡ್ಡ ಪ್ರಮಾಣದಲ್ಲಿ ಈಶಾನ್ಯ ಭಾಗದಲ್ಲಿ ಜಮಾ ಆಗಿದ್ದಾರೆ. ನುಸುಳುಕೋರರನ್ನು ಹೊರ ಹಾಕುವ ಕೆಲಸವನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮಾಡುತ್ತಿದೆ. ಈಶಾನ್ಯದ ಎಲ್ಲ ರಾಜ್ಯಗಳನ್ನು ಹಿಂದಿನ ಯುಪಿಎ ಸರ್ಕಾರ ಮತ್ತು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಈಶಾನ್ಯ ರಾಜ್ಯಗಳ ಜನರು ತಾವು ಭಾರತೀಯರು ಎಂದು ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ, ಈಗ ಇಡೀ ಈಶಾನ್ಯದ ಎಲ್ಲ ರಾಜ್ಯಗಳಲ್ಲಿ ನಮ್ಮ ಭಾರತ ಎನ್ನುತ್ತಾರೆ. ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಹ ನಡೆಯುತ್ತಿವೆ. ಮೊದಲ ಬಾರಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಅವರು ನೋಡುತ್ತಿದ್ದಾರೆ ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೀಗಾಗಿ ವಿದ್ರೋಹಿ ಚಟುವಟಿಕೆ ನಡೆಸಲು ಅಲ್ಲಿಗೆ ಬರುತ್ತಾರೆ. ಈಶಾನ್ಯ ರಾಜ್ಯಗಳಲ್ಲಿ ಶಾಂತಿ ನೆಲೆಸಬೇಕು. ಭಾರತದ ಒಂದು ಭಾಗ ಆಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸೌಲಭ್ಯ ಅವರಿಗೆ ಸಿಗಬೇಕು.

ಪಾರ್ಲಿಮೆಂಟ್ ನಲ್ಲಿ ಚರ್ಚೆ ಮಾಡೋದು ಬಿಟ್ಟು ಕಾಂಗ್ರೆಸ್ ಸೇರಿದಂತೆ ಇತರೆ ಪಕ್ಷಗಳು ಹೊರಗೆ ಚರ್ಚೆ ಮಾಡುತ್ತಿವೆ. ಯಾವುದೇ ಉತ್ತರಕ್ಕೂ ಭಾರತ ಸರ್ಕಾರ ಸಿದ್ಧವಿದೆ. ಪಶ್ಚಿಮ ಬಂಗಾಳದ ಮಾಲ್ಡದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಿದ ಪ್ರಕರಣ ಹೊರ ಬರುತ್ತಿದೆ. ರಾಜಕಾರಣ ಎಲ್ಲರೂ ಮಾಡ್ತಾರೆ. ಕೊಲ್ಲುವ ರಾಜಕಾರಣ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿದೆ. ಕೇಂದ್ರ ಸರ್ಕಾರವನ್ನು ಕೆಟ್ಟದಾಗಿ ಬಿಂಬಿಸುವ ಕೆಲಸ ನಡೆಯುತ್ತಿದೆ ಎಂದರು.

ಈ ಸುದ್ದಿ ಓದಿದ್ದೀರಾ? ಹಾಲು, ಮದ್ಯದಿಂದ ಅನ್ನಭಾಗ್ಯ ಹಣ ವಸೂಲಿಗೆ ಇಳಿದಿರುವ ಕಾಂಗ್ರೆಸ್‌ ವಿತ್ತನೀತಿಗೆ ಧಿಕ್ಕಾರ: ಎಚ್‌ಡಿಕೆ

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ

ರಾಜ್ಯ ವಿರೋಧ ಪಕ್ಷದ ನಾಯಕನ ಆಯ್ಕೆ ಆದಷ್ಟು ಬೇಗ ನಡೆಯಲಿದೆ. ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ನಮ್ಮ ಸ್ಟ್ರಾಟರ್ಜಿಯಲ್ಲಿ ಮುಂದಿನ ದಿನಗಳಲ್ಲಿ ನಾವು ನಾಯಕನನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.

ಆದರೆ, ಕಾಂಗ್ರೆಸ್ ಯಾವ ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆಯೋ ಆ ಭರವಸೆಗಳು ಈಗ ಈಡೇರುತ್ತಿಲ್ಲ. ರಾಜ್ಯದ ಹಣಕಾಸಿನ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಅವರು ಕೊಟ್ಟ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್ ನಲ್ಲಿ ಜಾರಿ ಮಾಡ್ತೇವೆ ಎಂದಿದ್ದರು. ಸಿದ್ಧರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರಿಗೆ ಕೇಳುತ್ತೇನೆ ನಿಮ್ಮ ಮೊದಲ ಕ್ಯಾಬಿನೆಟ್ ಯಾವಾಗ? ಮೊದಲ ಕ್ಯಾಬಿನೆಟ್ ನಲ್ಲಿ ನೀವು ಕೊಡೋದು ಯಾವಾಗ ಎಂದು ಪ್ರಶ್ನಿಸಿದರು.

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆ ಸರಿಯಾದ ಯೋಜನೆ ಅಲ್ಲ. ಸಾರಿಗೆ ಸಂಸ್ಥೆ ನಷ್ಟದಲ್ಲಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಅವರಿಗೆ ಸಂಬಳ ನೀಡಲು ಕಷ್ಟ ಆಗಲಿದೆ ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯತೆ, ದೇಶಭಕ್ತಿ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡಬೇಕಿಲ್ಲ: ಸಚಿವ ಎಂ ಬಿ ಪಾಟೀಲ್‌

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...

ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ...

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ...