ಮತ್ತೆ ಹೊಸ ವಿವಾದದಲ್ಲಿ ಸಿಲುಕಿದ ಸಂಸದ ಪ್ರತಾಪ್ ಸಿಂಹ: ಸಹೋದರನ ವಿರುದ್ಧ ಮರಗಳ್ಳತನ ಆರೋಪ

Date:

ಸಂಸತ್‌ನ ಭದ್ರತಾ ಲೋಪ ಪ್ರಕರಣದಲ್ಲಿ ಆರೋಪಿಗಳಿಗೆ ಲೋಕಸಭೆಯ ಒಳಗಡೆ ಪ್ರವೇಶಿಸಲು ಪಾಸ್ ನೀಡಿ ವಿವಾದಕ್ಕೆ ಸಿಲುಕಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಈಗ ಮತ್ತೊಂದು ಹೊಸ ವಿವಾದದಲ್ಲಿ ಸಿಲುಕಿದ್ದಾರೆ.

ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಅನುಮತಿ ಇಲ್ಲದೆಯೇ ಅಕ್ರಮವಾಗಿ ಕಡಿದು, ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಶೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ.

ಇನ್ನು ಈ ಹಗರಣದಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶಿಸಲಿದ್ದಾರೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಕಾಂಗ್ರೆಸ್​ ತನ್ನ ‘ಎಕ್ಸ್’​​ ಖಾತೆಯಲ್ಲಿ ಸುಮಾರು 02 ನಿಮಿಷ 11 ಸೆಕೆಂಡ್‌ಗಳ ವಿಡಿಯೋ ಸಾಕ್ಷ್ಯ ಬಿಡುಗಡೆಗೊಳಿಸಿದೆ. ವಿಡಿಯೋ ಸಮೇತ ಆರೋಪ ಮಾಡಿದ್ದಲ್ಲದೇ, ಪ್ರತಾಪ್​ ಸಿಂಹರನ್ನು ಕೂಡ ಟೀಕೆ ಮಾಡಿದೆ.

“ಅಣ್ಣ ಸಂಸತ್ ದಾಳಿಕೋರರಿಗೆ ಪಾಸ್ ನೀಡುವ ಕೆಲಸದಲ್ಲಿದ್ದರೆ, ತಮ್ಮ ವಿಕ್ರಮ್ ಸಿಂಹ ಸಿನಿಮೀಯ ಮಾದರಿಯಲ್ಲಿ ಮರಗಳ್ಳತನದಲ್ಲಿ ತೊಡಗಿದ್ದಾನೆ” ಎಂದು ಗಂಭೀರ ಆರೋಪ ಮಾಡುವ ಮೂಲಕ ಕಿಡಿಕಾರಿದೆ.

ಟ್ವೀಟ್‌ನಲ್ಲಿ, “ಸಂಸದ ಪ್ರತಾಪ್ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುವುದು ದಕ್ಷ ಅಧಿಕಾರಿಯಾದ ತಹಶೀಲ್ದಾರ್ ಮಮತಾ ಅವರ ಮೂಲಕ ಬೆಳಕಿಗೆ ಬಂದಿದೆ. ಇದರಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಕೈಜೋಡಿಸಿದ್ದು ಈ ಬಗ್ಗೆ ಸಚಿವ ಖಂಡ್ರೆ ಅವರು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅದೇಶಿಸಲಿದ್ದಾರೆ. ನಿಮ್ಮ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ?” ಎಂದು ಬಿಜೆಪಿಯ ನಾಯಕರಲ್ಲಿ ಪ್ರಶ್ನಿಸಿದೆ.

ಆಗಿರೋದೇನು?

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದನಗೂಡು ಎಂಬ ಹಳ್ಳಿಯಲ್ಲಿರುವ ಸರ್ವೆ ನಂಬರ್ 16ರಲ್ಲಿ ನೂರಾರು ಮರಗಳನ್ನು ಕಡಿಯಲಾಗಿದೆ. ಅರಣ್ಯ ಇಲಾಖೆಯ ಶೆಡ್ಯೂಲ್ಡ್ ಪಟ್ಟಿಯಲ್ಲಿರುವ ಪ್ರಮುಖ ಮರಗಳನ್ನು ಕಡಿಯಲಾಗಿದೆ. ಅಂದರೆ ಈ ಮರಗಳನ್ನು ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಕಡಿಯಲು ಹಾಗೂ ಸಾಗಾಟ ಮಾಡಲು ಅವಕಾಶವಿಲ್ಲ. ಅಂಥದ್ದರಲ್ಲಿ ಸುಮಾರು 12 ಎಕರೆ ಪ್ರದೇಶದಲ್ಲಿ ಕಡಿದು ಹಾಕಿದ್ದು, ಸಾಗಾಟಕ್ಕೆ ರಾಶಿ ಹಾಕಲಾಗಿದೆ.

ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ

ಈ ಬಗ್ಗೆ ಮಾಹಿತಿ ಅರಿತ ದಕ್ಷ ಅಧಿಕಾರಿಯಾದ ಬೇಲೂರು ತಹಶೀಲ್ದಾರ್ ಮಮತಾ ಅವರು ಸ್ಥಳಕ್ಕೆ ಡಿ.16ರಂದು ಭೇಟಿ ನೀಡಿ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರಕರಣ ಕೂಡ ದಾಖಲಿಸಿದ್ದಾರೆ.

ಈಗ ಬೆಳಕಿಗೆ ಬಂದಿರುವ ಪ್ರಕರಣ ಏನೆಂದರೆ, ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ, ಶುಂಠಿ ಬೆಳೆಯುವ ಉದ್ದೇಶಕ್ಕೆ ಜಯಮ್ಮ ಎಂಬುವವರೊಂದಿಗೆ ನಾಲ್ಕು ಎಕರೆಗಳ ಪ್ರದೇಶಕ್ಕೆ ಡಿ.11ರಂದು ಒಪ್ಪಂದ ಮಾಡಿಕೊಂಡಿದ್ದಾರೆ. ಡಿ.14ರಂದು ಒಪ್ಪಂದ ಮಾಡಿಕೊಂಡಿದ್ದ ಪ್ರದೇಶದಲ್ಲಿ, ಅರಣ್ಯ ಇಲಾಖೆಯ ಅನುಮತಿ ಇಲ್ಲದೆಯೇ ಅಕ್ರಮವಾಗಿ ಮರಗಳನ್ನು ಕಡಿದು ಹಾಕಲಾಗಿದೆ. ನಂಬಿ, ಹೊನ್ನೆ, ಹಲಸು ಸೇರಿದಂತೆ ನೂರಾರು ಅಮೂಲ್ಯವಾದ ಮರಗಳನ್ನು ಕಡಿದು ಹಾಕಲಾಗಿದ್ದು, ಸಾಗಾಟಕ್ಕೆ ಯತ್ನಿಸಲಾಗಿದೆ.

ಅಕ್ರಮವಾಗಿ ಕಡಿದು ಹಾಕಿ, ಸಾಗಾಟಕ್ಕೆ ರಾಶಿ ಹಾಕಲಾದ ಮರಗಳು

ಈ ಆರೋಪ ಒಂದು ಕಡೆಯಾದರೆ, ಇನ್ನೊಂದು ಗಂಭೀರ ಆರೋಪ ಕೂಡ ಇದರಲ್ಲಿ ಕೇಳಿಬಂದಿದೆ. ಒಟ್ಟು 12 ಎಕರೆ ಪ್ರದೇಶದಲ್ಲಿ ಮರಗಳನ್ನು ಕಡಿಯಲಾಗಿದೆ. ಇದರಲ್ಲಿ ನಾಲ್ಕೂವರೆ ಎಕರೆ ಪ್ರದೇಶವು ಸರ್ಕಾರಿ ಗೋಮಾಳ ಕೂಡ ಒಳಗೊಂಡಿದ್ದು, ಅದರಲ್ಲಿ ಇದ್ದಂತಹಾ ಮರಗಳನ್ನು ಕೂಡ ಕಡಿದು ಹಾಕಲಾಗಿದೆ ಎಂಬ ಅಂಶ ಈ ಘಟನೆಯಿಂದ ಬೆಳಕಿಗೆ ಬಂದಿದೆ.

ಈ ನಡುವೆ ಅರಣ್ಯ ಇಲಾಖೆಯವರು ಕೆಲವೊಂದು ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ. ಆದರೆ ಶುಂಠಿ ಬೆಳೆಯುವ ಉದ್ದೇಶಕ್ಕೆ ಒಪ್ಪಂದ ಮಾಡಿಕೊಂಡಿದ್ದ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹ ಅವರ ಹೆಸರನ್ನು ಉಲ್ಲೇಖಿಸಿಲ್ಲ ಎಂಬ ಗಂಭೀರ ಆರೋಪ ಸ್ಥಳೀಯ ಅರಣ್ಯಾಧಿಕಾರಿಗಳ ಮೇಲೆ ಕೇಳಿಬಂದಿದೆ. ಈ ಹಗರಣದಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳ ಪಾತ್ರವೂ ಕೇಳಿ ಬಂದಿರುವುದರಿಂದ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಏನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈಲಿಗೆ ಬೆಂಕಿ ಹಚ್ಚಿ ಸುಡುತ್ತೇವೆ ಎಂದವರನ್ನು ಒದ್ದು ಒಳಗೆ ಹಾಕಬೇಕು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳುತ್ತಿದ್ದ ರೈಲಿಗೆ ಹೊಸಪೇಟೆಯಲ್ಲಿ ಬೆಂಕಿ ಹಚ್ಚಿ ಸುಡುತ್ತೇವೆ...

ವಿಪಕ್ಷ ನಾಯಕ ಸ್ಥಾನದಿಂದ ಅಶೋಕ್‌ರನ್ನು ಕೆಳಗಿಳಿಸಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಬಜರಂಗದಳ ಒತ್ತಾಯ

ಬಜೆಟ್ ಅಧಿವೇಶನದ ವೇಳೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್,...

ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲು; ಕ್ಷಮೆ ಕೇಳಿದ ಶಫಿ

ನಟ ದರ್ಶನ್ ಮತ್ತು ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ನಡುವಿನ ಗಲಾಟೆ...