ಪಾಕ್‌ ಪರ ಘೋಷಣೆ ಆರೋಪ | ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಐಜಿಪಿಗೆ ಮನವಿ

Date:

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪ ಬಗ್ಗೆ ಎಫ್‍ಎಸ್‍ಎಲ್ ವರದಿ ಬಹಿರಂಗ ಮಾಡುವಂತೆ ಬಿಜೆಪಿ ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿತು.

ಶಾಸಕರಾದ ಎಲ್ ಎ ರವಿಸುಬ್ರಹ್ಮಣ್ಯ, ಸಿ ಕೆ ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರು ಸೋಮವಾರ ನೃಪತುಂಗ ರಸ್ತೆಯಲ್ಲಿರುವ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿದರು.

“ಫೆಬ್ರವರಿ 27ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸೀರ್ ಹುಸೇನ್ ಅವರ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಾರೆ. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿಯ ಮಾಹಿತಿ ಇಲ್ಲ” ಎಂದು ಮನವಿಯಲ್ಲಿ ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಳ್ಳು ಸೃಷ್ಟಿಸಿ, ಬೆಂಕಿ ಹಚ್ಚಿ, ಭಯ ಬಿತ್ತುವವರು ಯಾರು?

ಸತ್ಯ ತಿಳಿಸಲು ವಿಳಂಬವೇಕೆ?

“ವಾಸ್ತವ ಸಂಗತಿ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ಹಳಿ ತಪ್ಪಿಸಲು ನಿಮ್ಮ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂದು ಪ್ರಶ್ನಿಸಲಾಗಿದೆ. ಇಂತಹ ವಿಳಂಬದಿಂದ ಮುಂದಿನ ದಿನಗಳಲ್ಲಿ ಈ ರೀತಿ ದೇಶವಿರೋಧಿ ಮತ್ತು ಸಮಾಜಘಾತುಕ ಕೆಲಸ ಮಾಡುವ ಜನರಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ. ಸತ್ಯ ತಿಳಿಸಲು ವಿಳಂಬವೇಕೆ?” ಎಂದು ಕೇಳಿದ್ದಾರೆ.

“ರಾಜ್ಯದ ಜವಾಬ್ದಾರಿಯುತ ವಿಪಕ್ಷವಾಗಿ, ನಾವು ಈ ಪತ್ರಕ್ಕೆ ನಿಮ್ಮಿಂದ ಪ್ರಾಮಾಣಿಕ ಮತ್ತು ತ್ವರಿತ ಪ್ರತ್ಯುತ್ತರದ ನಿರೀಕ್ಷೆಯಲ್ಲಿದ್ದೇವೆ” ಎಂದು ತಿಳಿಸಲಾಗಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...