ಕುಡಿಯುವ ನೀರಿಗಾಗಿ ರಾಜ್ಯಾದ್ಯಂತ 7108 ಬಾಡಿಗೆ ಬೋರ್‌ವೆಲ್‌: ಸಚಿವ ಕೃಷ್ಣ ಬೈರೇಗೌಡ

Date:

  • ಎಲ್ಲ ತಾಲೂಕುಗಳಲ್ಲೂ ಈವರೆಗೆ 600ಕ್ಕೂ ಅಧಿಕ ಟಾಸ್ಕ್‌ಫೋರ್ಸ್ ಸಭೆ
  • ಬರ ಪರಿಹಾರ ಕಾರ್ಯಕ್ಕೆ ₹861.32 ಕೋಟಿ ಅನುದಾನ ಲಭ್ಯ

“ರಾಜ್ಯದಲ್ಲಿ ಪ್ರಸ್ತುತ ಬರ ಪರಿಸ್ಥಿತಿ ಹತೋಟಿಯಲ್ಲಿದ್ದು, ಮುಂದಿನ ಬೇಸಿಗೆಗೆ ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಉದ್ಭವಿಸದಂತೆ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ 7108 ಬಾಡಿಗೆ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಶುಕ್ರವಾರ ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಸಭೆಯ ನಡುವೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದಅವರು, “ರಾಜ್ಯದಲ್ಲಿ ಪ್ರಸ್ತುತ ನೀರಿನ ಸಮಸ್ಯೆ ಕಂಡುಬಂದಿರುವ 116 ಗ್ರಾಮಗಳಿಗೆ 175 ಟ್ಯಾಂಕರ್ ಮೂಲಕ ಹಾಗೂ 382 ಗ್ರಾಮಗಳಿಗೆ 445 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ಪ್ರತಿ ದಿನ ನೀರು ಪೂರೈಸಲಾಗುತ್ತಿದೆ. 9 ನಗರ ಸ್ಥಳೀಯ ಸಂಸ್ಥೆಗಳಲ್ಲಿನ 57 ವಾರ್ಡ್‌ಗಳಿಗೆ 24 ಟ್ಯಾಂಕರ್‌ಗಳ ಮೂಲಕ ಹಾಗೂ 29 ವಾರ್ಡ್‌ಗಳಿಗೆ 17 ಖಾಸಗಿ ಬೋರ್‌ವೆಲ್‌ಗಳ ಮೂಲಕ ತುರ್ತು ಕುಡಿಯುವ ನೀರು ಪೂರೈಸಲಾಗುತ್ತಿದೆ” ಎಂದು ತಿಳಿಸಿದರು.

“ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಬಹುದಾದ 7377 ಗ್ರಾಮಗಳನ್ನು ಹಾಗೂ 1272 ವಾರ್ಡ್‌ಗಳನ್ನು ಗುರುತಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಒಟ್ಟು 7080 ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಲಾಗಿದೆ. ಬಹುತೇಕ ಬೋರ್‌ವೆಲ್ ಮಾಲೀಕರ ಜೊತೆಗೆ ಈಗಾಗಲೇ ಒಪ್ಪಂದ ಮಾಡಿಕೊಂಡಿಕೊಳ್ಳಲಾಗಿದೆ. ಗ್ರಾಮಪಂಚಾಯತ್ ಮಟ್ಟದಲ್ಲಿ ಟ್ಯಾಂಕರ್‌ಗಳ ಟೆಂಡರ್ ಮಾಡಿ ಇಟ್ಟುಕೊಳ್ಳಲು ಸೂಚಿಸಲಾಗಿದೆ. ಸಮಸ್ಯೆ ಕಂಡುಬಂದ ಕೂಡಲೇ ಕುಡಿಯುವ ನೀರನ್ನು ಪೂರೈಸಲಾಗುವುದು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀರಿನ ಪೂರೈಕೆ ಸರ್ಕಾರದ ಆದ್ಯತೆ. ಹೀಗಾಗಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಾರದು ಎಂಬ ನಿಟ್ಟಿನಲ್ಲಿ ಬಾಡಿಗೆ ಟ್ಯಾಂಕರ್ ಹಾಗೂ ಖಾಸಗಿ ಬೋರ್‌ವೆಲ್, ಟ್ಯಾಂಕರ್‌ಗಳ ಮೂಲಕ ನೀರು ಪೂರೈಸುವವರಿಗೆ ಯಾವುದೇ ನೆಪ ಇಲ್ಲದೆ 15 ದಿನಗಳಲ್ಲಿ ಬಿಲ್ಲು ಪಾವತಿಗೆ ಕ್ರಮವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಜೊತೆಗೆ ವಾಟರ್ ಟ್ಯಾಂಕರ್ ಗಳಿಗೆ ನ್ಯಾಯಯುತ ದರ ನಿಗದಿಗೊಳಿಸುವ ಬಗ್ಗೆಯೂ ಸಿದ್ದತೆ ಆಗುತ್ತಿದೆ” ಎಂದು ತಿಳಿಸಿದರು.

“ಡಿಸೆಂಬರ್‌ನಿಂದ ಈವರೆಗೆ ತಾಲೂಕು ಮಟ್ಟದ 600 ಸಭೆಗಳನ್ನು ನಡೆಸಲಾಗಿದೆ. ಫೆಬ್ರವರಿ ಒಂದೇ ತಿಂಗಳಲ್ಲಿ 154 ಟಾಸ್ಕ್ ಫೋರ್ಸ್‌ ಸಭೆ ನಡೆಸಲಾಗಿದೆ. ಬರ ನಿರ್ವಹಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಬರ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ರೂ. 725.92 ಕೋಟಿ ಹಾಗೂ ತಹಶೀಲ್ದಾರ್ ಖಾತೆಯಲ್ಲಿ ರೂ.135.40 ಕೋಟಿ ಸೇರಿದಂತೆ ಒಟ್ಟು ರೂ. 861.32 ಕೋಟಿ ಅನುದಾನವು ಬರ ಪರಿಹಾರ ಕಾರ್ಯ ಕೈಗೆತ್ತಿಕೊಳ್ಳಲು ಲಭ್ಯವಿದೆ” ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಕೇಂದ್ರದ ವೈಫಲ್ಯ ಕಾರಣವಲ್ಲವೇ?

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದರ್ ಕುಮಾರ್ ಕಟಾರಿಯಾ, ಪ್ರಧಾನ ಕಾರ್ಯದರ್ಶಿ (ವಿಪತ್ತು ನಿರ್ವಹಣೆ) ವಿ. ರಶ್ಮಿ ಮಹೇಶ್, ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಹಾಗೂ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...