ಆಡಳಿತ ಪಕ್ಷಕ್ಕೆ ಮತ್ತೊಂದು ಶಾಕ್‌: ಕೂಡ್ಲಿಗಿ ಬಿಜೆಪಿ ಶಾಸಕ ಎನ್‌ ವೈ ಗೋಪಾಲಕೃಷ್ಣ ಕಾಂಗ್ರೆಸ್‌ ಕಡೆ ಮುಖ

Date:

  • ಗೋಪಾಲಕೃಷ್ಣ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತ
  • ಡಿಕೆಶಿ, ಸಿದ್ದರಾಮಯ್ಯ ಭೇಟಿ ಮಾಡಿ ಮಾತುಕತೆ ನಡೆಸಿರುವ ಗೋಪಾಲಕೃಷ್ಣ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲಿ ಆಡಳಿತ ಪಕ್ಷ ಬಿಜೆಪಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್‌ ವೈ ಗೋಪಾಲಕೃಷ್ಣ ಅವರು ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ.

ಕಾಂಗ್ರೆಸ್‌ ಸೇರ್ಪಡೆ ಸಂಬಂಧ ಗೋಪಾಲಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸೋಮವಾರ ರಾತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಅಧಿಕೃತವಾಗಿ ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿವೆ.

ಗೋಪಾಲಕೃಷ್ಣ ಅವರಿಗೆ ಕಾಂಗ್ರೆಸ್​ ನಾಯಕರಿಂದ ಟಿಕೆಟ್ ಭರವಸೆ ಸಿಕ್ಕಿದೆ ಎಂದು ತಿಳಿದು ಬಂದಿದ್ದು, ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಫೈನಲ್‌ ಆಗಿಲ್ಲ. ಆದರೆ, ತವರು ಕ್ಷೇತ್ರ ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದು, ಅಲ್ಲಿಂದಲೇ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸದ್ಯದಲ್ಲೇ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಯಡಿಯೂರಪ್ಪ ನಿವಾಸದ ಮೇಲಿನ ದಾಳಿ ಬಿಜೆಪಿಯ ಆಂತರಿಕ ಕುತಂತ್ರ: ಡಿ ಕೆ ಶಿವಕುಮಾರ್

ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಗೋಪಾಲಕೃಷ್ಣ ಅವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಆದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ವಂಚಿತರಾಗಿ ಬಿಜೆಪಿ ಸೇರಿ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಇನ್ನೊಂದು ಕಡೆ ಮಾಜಿ ಸಂಸದ ವಿ ಎಸ್ ಉಗ್ರಪ್ಪ ಸಹ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಲು ಚಿಂತನೆಯಲ್ಲಿದ್ದಾರೆ. ಇದರ ಮಧ್ಯೆ ಗೋಪಾಲಕೃಷ್ಣ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದು ಕುತೂಹಲ ಮೂಡಿಸಿದೆ.

6 ಬಾರಿ ಶಾಸಕರಾಗಿ ಆಯ್ಕೆ

ಎನ್ ವೈ ಗೋಪಾಲಕೃಷ್ಣ ಅವರು ಒಟ್ಟು ಆರು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ನಾಲ್ಕು ಬಾರಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಬಳ್ಳಾರಿ ಮತ್ತು ಕೂಡ್ಲಿಗಿ ಕ್ಷೇತ್ರದಿಂದ ಒಂದೊಂದು ಬಾರಿ ಜಯ ಗಳಿಸಿದ್ದರು. 2014ರಲ್ಲಿ ನಡೆದ ಉಪಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವತಿಗೆ ಕಿರುಕುಳ ನೀಡಿದವನಿಗೆ ಚಪ್ಪಲಿ ಏಟು

ತನ್ನನ್ನು ಹಿಂಬಾಲಿಸಿ ಬಂದು ಕಿರುಕುಳ ನೀಡಿದ್ದಾನೆಂದು ಆರೋಪಿಸಿ ಯುವತಿಯೊಬ್ಬಳು ಯುವಕನಿಗೆ ಚಪ್ಪಲಿಯಿಂದ...

ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ...

ಬಿಜೆಪಿ ಆತ್ಮಾವಲೋಕನ : ಕೆ ಸುಧಾಕರ್ ಕುಯಿಲು, ಎಂಟಿಬಿ ಹುಯಿಲು!

ಬಿಜೆಪಿಯ ಆತ್ಮಾವಲೋಕನ ಸಭೆಯಲ್ಲಿ ಎಂಟಿಬಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಕೆ. ಸುಧಾಕರ್...

ಧಾರವಾಡ | ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಿವಾಜಿ ಕುರಿತು ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಯುವಕನನ್ನು...