ನಾನು ಡಿಕೆಶಿಗೆ ಸರಿಸಾಟಿ ಇದೀನಾ? ಇಲ್ಲವಾ? ಎಂಬುದು ಜನ ತೀರ್ಮಾನಿಸುತ್ತಾರೆ: ಕುಮಾರಸ್ವಾಮಿ

Date:

ನಾನು ಅವರಿಗೆ ಲೆಕ್ಕಕ್ಕೆ ಇದೀನಾ? ಸರಿಸಾಟಿ ಇದೀನಾ, ಇಲ್ಲವಾ? ಎಂಬುದನ್ನು ಜನರು ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಹಾಸನ ಜಿಲ್ಲೆಯ ಅರಕಲಗೂಡು ಕ್ಷೇತ್ರದ ರಾಮನಾಥಪುರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮಗಳ ಜತೆ ಮಾತನಾಡಿ, “ಹೊಸ್ತೊಡಕು ದಿನ ನಮ್ಮ ತೋಟದಲ್ಲಿ ಏನು ನಡೆದಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗೆ ಅಷ್ಟು ಜ್ಞಾನ ಇಲ್ಲವೇ? ಆದರೆ ಊಟವನ್ನೇ ದೊಡ್ಡ ವಿವಾದ ಮಾಡುತ್ತಿರುವ ಕಾಂಗ್ರೆಸ್ ನವರು ಅದೆಷ್ಟು ಹತಾಶರಾಗಿದ್ದಾರೆ ಎನ್ನುವುದು ಇದರಿಂದ ಅರ್ಥವಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

“ನಾನು ಜಾತಿ ಆಧಾರದಲ್ಲಿ ರಾಜಕಾರಣ ಮಾಡಿದವನಲ್ಲ. ಪಾಪ ನನ್ನ ಸ್ನೇಹಿತರಿಗೆ ಹಣದ ಮದ ನೆತ್ತಿಗೇರಿದೆ. ಕುಮಾರಸ್ವಾಮಿ ನನಗೆ ಡೋಂಟ್ ಕೇರ್ ಅಂದಿದ್ದಾರೆ, ನಾನೇನು ಲೆಕ್ಕಕ್ಕೆ ಇಟ್ಟುಕೊ ಎಂದು ಹೇಳಿದ್ದೀನಾ? ರಾಜ್ಯದ ಜನ ತೀರ್ಮಾನ ಮಾಡುತ್ತಾರೆ. ಇವರ ಹಣ, ಅಧಿಕಾರ ಯಾವುದನ್ನೂ ತೀರ್ಮಾನ ಮಾಡಲ್ಲ” ಎಂದು ಹೇಳಿದರು.

“ಕೊತ್ವಾಲ್ ರಾಮಚಂದ್ರನ ಗರಡಿಯಲ್ಲಿ ಬಂದಿರುವವರು ನೀವು, ಸ್ಟ್ರೈಟ್ ಫೈಟರ್ ಆಗಿದ್ದರೆ ವಿಧಾನಸೌಧದಲ್ಲಿ ಫೈಟ್ ಮಾಡ್ತೀರಾ? ನೀವು ಬಂದಿರುವ ಹಿನ್ನೆಲೆ ಅಂತದ್ದೇ ಅಲ್ಲವೇ? ನಿಮ್ಮ‌ ಮದ ಇಳಿಸುವ ಕಾಲ ಸನಿಹಕ್ಕೆ ಬಂದಿದೆ” ಎಂದು ಕಿಡಿಕಾರಿದರು.

ಫೋನ್ ಟ್ಯಾಪಿಂಗ್

ಆದಿಚುಂಚನಗಿರಿ ಶ್ರೀಗಳ ಫೋನ್ ಟ್ಯಾಪಿಂಗ್ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಮಾಡಿರುವ ಆರೋಪದ ಬಗ್ಗೆ ಉತ್ತರಿಸಿ, “ನಾನು ಫೋನ್ ಟ್ಯಾಪಿಂಗ್ ಮಾಡಿಕೊಳ್ಳುತ್ತಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ? ಅವರು ತನಿಖೆ ಮಾಡಿಕೊಳ್ಳಲಿ, ಈವರೆಗೆ ತನಿಖೆ ಮಾಡಿದರಲ್ಲ, ಅದು ಏನಾಯಿತು?” ಎಂದು ತರಾಟೆಗೆ ತೆಗೆದುಕೊಂಡರು.

ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದರು ಎನ್ನುವ ಬಗ್ಗೆ ಉತ್ತರಿಸಿ, “ಬೇರೆ ಸಮುದಾಯಗಳಲ್ಲೂ ಎಷ್ಟು ಮಠಗಳಿಲ್ಲ? ನಮ್ಮ ಸಮುದಾಯದಲ್ಲೂ ಅಂಥ ಬೆಳವಣಿಗೆ ಆಗಲಿ ಎಂದು ಇನ್ನೊಬ್ಬರಿಗೂ ಸಹಾಯ ಮಾಡಿದ್ದೇವೆ. ಅದರಲ್ಲಿ ಏನಿದೆ? ಅದನ್ನು ರಾಜಕೀಯಕ್ಕೆ ಬಳಸಿಕೊಳ್ಳಬೇಕಾ” ಎಂದು ಪ್ರಶ್ನಿಸಿದರು.

“ಜೆಡಿಎಸ್ ಎಲ್ಲಿದೆ ಎನ್ನುವ ದುರಹಾಂಕರ ಮಾತುಗಳನ್ನು ಇವರು ಆಡುತ್ತಿದ್ದಾರೆ. ಅವರ ಸಹವಾಸ ಮಾಡಿದಕ್ಕೆ ಈಗ ಜೆಡಿಎಸ್ ಈ ಹಂತಕ್ಕೆ ಬಂದಿದೆ. ಐದು ವರ್ಷ ಅಧಿಕಾರ ಮಾಡಿ ಅಂತ ಕೊಟ್ಟು ಬುಡ ಸಮೇತ ತೆಗೆಯೋಕೆ ಹೊರಟರಲ್ಲ, ಅದಕ್ಕೆ‌ ಮರು ಜೀವ ಕೊಡುವುದಕ್ಕೆ ಪ್ರಯತ್ನ ಮಾಡುತ್ತಿದ್ದೇನೆ. ಪಕ್ಕದಲ್ಲಿಯೇ ಕೂತು ಹಳ್ಳ ತೋಡಿದ್ರಲ್ಲ, ಎಲ್ಲಾ ನೆನಪಿದೆ ನನಗೆ” ಎಂದು ಆಕ್ರೋಶ ಹೊರಹಾಕಿದರು.

ಧರ್ಮಸ್ಥಳದಲ್ಲಿ ಸರಕಾರ ತೆಗೆಯಲು ಷಡ್ಯಂತ್ರ

“ಧರ್ಮಸ್ಥಳ ಆಯುರ್ವೇದ ಆಸ್ಪತ್ರೆಯಲ್ಲಿ ಮೈತ್ರಿ ಸರಕಾರ ತೆಗೆಯಲು ಗುಳಿಗೆ ಅರೆದಿದ್ದನ್ನು ನೀವೇ (ಮಾಧ್ಯಮಗಳು) ತೋರಿಸಿದರಲ್ಲ. ಅದಕ್ಕೆ ಹಾಸನಾಂಬೆಯ ಮುಂದೆ ಪ್ರಮಾಣ ಮಾಡಬೇಕಾ? ಧರ್ಮಸ್ಥಳದಲ್ಲಿ ಕುತಂತ್ರ ಮಾಡಿ ಬಂದರಲ್ಲ, ಈ ಸರಕಾರ ಒಂದೇ ವರ್ಷ ಎಂದು ಹೇಳಿದರಲ್ಲ. ಆ ಮೇಲೆ ಏನಾಯಿತು ಎನ್ನುವುದು ನಾಡಿನ ಜನರಿಗೆ ಗೊತ್ತಿದೆಯಲ್ಲ” ಎಂದರು.

ಮಾಜಿ ಶಾಸಕ ಪ್ರೀತಮ್ ಗೌಡ ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, “ಪದೇ ಪದೆ ಯಾಕೆ ಅವರ ಹೆಸರು ಎಳೆದು ತರುತ್ತೀರಿ? ಅವರು ಎನ್‌ಡಿಎ ಪರ ಮತ ಕೇಳಿದ್ದಾರೆ. ಎನ್‌ಡಿಎ ಅಭ್ಯರ್ಥಿಗೆ ಮತ ಕೊಡಿ ಎಂದು ಹೇಳಿದ್ದಾರೆ. ಯಾವುದೇ ಗೊಂದಲ ಇಲ್ಲ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಸ್ತೆ ಅಭಿವೃದ್ಧಿಗೆ 20000 ಕೋಟಿ ರೂಪಾಯಿ ಸಂಪುಟ ಅನುಮೋದನೆ

ಲೋಕೋಪಯೋಗಿ ಇಲಾಖೆಯಿಂದ ಒಟ್ಟು 20,000 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ಹೆದ್ದಾರಿ,...

SC-ST ಮೀಸಲಾತಿ ರಕ್ಷಣೆಗೆ ಸುಪ್ರೀಂಗೆ ಮೇಲ್ಮನವಿ, 9ನೇ ಅನುಸೂಚಿಗೆ ಸೇರ್ಪಡೆ ಅಗತ್ಯ: ನ್ಯಾ. ನಾಗಮೋಹನ್ ದಾಸ್

ಪ.ಜಾತಿ ಮತ್ತು ಪ.ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ...

ಕೇರಳ ರಾಜ್ಯಪಾಲರ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ‘ಬಿಜೆಪಿ’ ಟ್ಯಾಗ್: ರಾಷ್ಟ್ರಪತಿಗೆ ದೂರು ನೀಡಿದ ಎಸ್‌ಎಫ್‌ಐ

ಕೇರಳದ ನೂತನ ರಾಜ್ಯಪಾಲರಾದ ಓಂ ಪ್ರಕಾಶ್ ಮಾಥುರ್ ಅವರ ಅಧಿಕೃತ ಇನ್‌ಸ್ಟಾಗ್ರಾಮ್...

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...