ದೆಹಲಿ ಸಿಎಂ ಕಚೇರಿಯಲ್ಲಿ ಅಂಬೇಡ್ಕರ್ ಫೋಟೋ ತೆರವು?

Date:

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ಬಳಿಕ, ದೆಹಲಿ ಮುಖ್ಯಮಂತ್ರಿ ಕಚೇರಿಯಲ್ಲಿದ್ದ ಡಾ. ಬಿ.ಆರ್ ಅಂಬೇಡ್ಕರ್ ಮತ್ತು ಭಗತ್‌ ಸಿಂಗ್‌ ಅವರು ಫೋಟೋಗಳನ್ನು ತೆಗೆದುಹಾಕಿದೆ. ಈ ಫೋಟೋಗಳಿದ್ದ ಜಾಗದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಫೋಟೋಗಳನ್ನು ಹಾಕಿದೆ ಎಂದು ಆಮ್ ಆದ್ಮಿ ಪಕ್ಷ (ಎಎಪಿ) ಆರೋಪಿಸಿದೆ. ಆದರೆ, ಎಎಪಿಯ ಆರೋಪವನ್ನು ಬಿಜೆಪಿ ಅಲ್ಲಗಳೆದಿದೆ. ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರ ಫೋಟೋಗಳು ಮುಖ್ಯಮಂತ್ರಿ ಕಚೇರಿಯಲ್ಲಿವೆ ಎಂದು ಹೇಳಿದೆ.

- Advertisement -

ಫೋಟೋ ತೆರವು ಕುರಿತು ದೆಹಲಿ ವಿಧಾನಸಭೆಯ ವಿಪಕ್ಷ ನಾಯಕಿ, ಮಾಜಿ ಮುಖ್ಯಮಂತ್ರಿ ಆತಿಶಿ ಅವರು ಫೋಟೋವೊಂದನ್ನು ಟ್ವೀಟ್ ಮಾಡಿದ್ದು, “ದೆಹಲಿ ಮುಖ್ಯಮಂತ್ರಿ ಕಚೇರಿಯಿಂದ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಫೋಟೋಗಳನ್ನು ಬಿಜೆಪಿ ತೆಗೆದುಹಾಕಿದೆ. ತನ್ನ ‘ದಲಿತ ವಿರೋಧಿ” ಮತ್ತು ‘ಸಿಖ್ ವಿರೋಧಿ’ ಧೋರಣೆಯನ್ನು ತೋರಿಸಿದೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

“ಬಿಜೆಪಿಯ ದಲಿತ ವಿರೋಧಿ ಮನಸ್ಥಿತಿ ಎಲ್ಲರಿಗೂ ತಿಳಿದಿದೆ. ಇಂದು, ಅದರ ದಲಿತ ವಿರೋಧಿ ಮನಸ್ಥಿತಿಗೆ ಪುರಾವೆ ನೀಡಲಾಗಿದೆ. ಕೇಜ್ರಿವಾಲ್ ದೆಹಲಿ ಸರ್ಕಾರದ ಪ್ರತಿಯೊಂದು ಕಚೇರಿಯಲ್ಲೂ ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಶಹೀದ್ ಭಗತ್ ಸಿಂಗ್ ಅವರ ಫೋಟೋಗಳನ್ನು ಇರಿಸಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ, ಈ ಎರಡೂ ಫೋಟೋಗಳನ್ನು ಮುಖ್ಯಮಂತ್ರಿ ಕಚೇರಿಯಿಂದ ತೆಗೆದುಹಾಕಲಾಗಿದೆ” ಎಂದು ಆರೋಪಿಸಿದ್ದಾರೆ.

ಇನ್ನು, ಅರವಿಂದ್ ಕೇಜ್ರಿವಾಲ್ ಕೂಡ ಟ್ವೀಟ್ ಮಾಡಿದ್ದು, “ದೆಹಲಿಯ ಹೊಸ ಬಿಜೆಪಿ ಸರ್ಕಾರ ಬಾಬಾ ಸಾಹೇಬರ ಫೋಟೋವನ್ನು ತೆಗೆದು ಪ್ರಧಾನಿ ಮೋದಿ ಫೋಟೋ ಹಾಕಿದೆ. ಇದು ಸರಿಯಲ್ಲ. ಬಾಬಾ ಸಾಹೇಬರ ಲಕ್ಷಾಂತರ ಅನುಯಾಯಿಗಳಿಗೆ ನೋವುಂಟು ಮಾಡಿದೆ. ಬಿಜೆಪಿಗೆ ನನ್ನದೊಂದು ವಿನಂತಿ. ನೀವು ಪ್ರಧಾನ ಮಂತ್ರಿಯ ಫೋಟೋ ಹಾಕಬಹುದು, ಆದರೆ ಬಾಬಾ ಸಾಹೇಬರ ಫೋಟೋ ತೆಗೆಯಬೇಡಿ” ಎಂದಿದ್ದಾರೆ.

ಈ ವರದಿ ಓದಿದ್ದೀರಾ?: ಬಿಜೆಪಿಯ ಕರಾಳ ಮುಖ | ರೀಲ್ಸ್‌ ಮಾಡುವುದು, ಅವಘಡವಾದಾಗ ಅಳಿಸಲು ನೋಟಿಸ್‌ ಕೊಡುವುದು!

ಎಎಪಿ ಹೇಳಿಕೆಯನ್ನು ಬಿಜೆಪಿ ನಿರಾಕಿಸಿದೆ. ಮತ್ತೊಂದು ಚಿತ್ರವನ್ನು ಹಂಚಿಕೊಂಡಿರುವ ಬಿಜೆಪಿ, ಮುಖ್ಯಮಂತ್ರಿ ಕುರ್ಚಿಯ ಹಿಂದಿನ ಗೋಡೆಯಲ್ಲಿದ್ದ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಫೋಟೋಗಳನ್ನು ಪಕ್ಕದ ಗೋಡೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿಕೊಂಡಿದೆ.

“ದೆಹಲಿ ಮುಖ್ಯಮಂತ್ರಿ ರಾಖಾ ಗುಪ್ತಾ ಮತ್ತು ಎಲ್ಲ ಮಂತ್ರಿಗಳ ಕೊಠಡಿಗಳಲ್ಲಿ ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್, ಭಗತ್ ಸಿಂಗ್, ರಾಷ್ಟ್ರಪತಿ ಮುರ್ಮು ಮತ್ತು ಪ್ರಧಾನಿ ಮೋದಿ ಅವರ ಚಿತ್ರಗಳನ್ನು ಇರಿಸಲಾಗಿದೆ” ಎಂದು ಬಿಜೆಪಿ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...