ಅಂಬೇಡ್ಕರ್ ವಿಚಾರ | ಪಾಲಿಕೆಯ ಸಭೆಯಲ್ಲಿ ಹೊಡೆದಾಡಿಕೊಂಡ ಬಿಜೆಪಿ – ಕಾಂಗ್ರೆಸ್ ಸದಸ್ಯರು

Date:

ಬಾಬಾ ಸಾಹೇಬ್ ಅಂಬೇಡ್ಕರ್ ಕುರಿತು ಅವಹೇಳನಕಾರಿ ಮಾತನಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಚಂಡೀಗಢ ನಗರ ಪಾಲಿಕೆಯಲ್ಲಿ ಕಾಂಗ್ರೆಸ್‌, ಎಎಪಿ ಸದಸ್ಯರು ನಿರ್ಣಯ ಅಂಗೀಕರಿಸಿದ್ದಾರೆ. ಈ ನಿರ್ಣಯದ ವಿರುದ್ಧ ಬಿಜೆಪಿ ಸದಸ್ಯರು ಹೌಹಾರಿದ್ದು, ಕಾಂಗ್ರೆಸ್‌, ಎಎಪಿ ಮತ್ತು ಬಿಜೆಪಿ ನಡುವೆ ಪಾಲಿಕೆಯಲ್ಲಿಯೇ ಘರ್ಷಣೆ ನಡೆದಿದೆ. ಪಾಲಿಕೆಉಯ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರು ಹೊಡೆದಾಡಿಕೊಂಡಿದ್ದಾರೆ.

- Advertisement -

ಪಾಲಿಕೆಯ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಎಎಪಿ ಸದಸ್ಯರು ಅಮಿತ್ ಶಾ ವಿರುದ್ಧ ನಿರ್ಣಯ ಅಂಗೀಕರಿಸಿದರೆ, ಪ್ರತಿಯಾಗಿ ಬಿಜೆಪಿಗರು ನೆಹರು ಕಾಲದಿಂದಲೂ ಅಂಬೇಡ್ಕರ್ ಅವರನ್ನು ಕಾಂಗ್ರೆಸ್‌ ಅಗೌರವಿಸಿದೆ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ, “ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ ‘ಸುಳ್ಳು ಅಭಿಯಾನ’ ನಡೆಸುತ್ತಿದೆ. ಅಂಬೇಡ್ಕರ್ ಅವರ ಪರಂಪರೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಬೂಟಾಟಿಕೆಯಲ್ಲಿ ಕಾಂಗ್ರೆಸ್‌ ತೊಡಗಿದೆ. ಅಂಬೇಡ್ಕರ್ ಅವರ ಜೀವಿತಾವಧಿಯಲ್ಲಿ ಅವರನ್ನು ಅವಮಾನಿಸುತ್ತಿದ್ದ ಕಾಂಗ್ರೆಸ್, ಈಗ ಅವರನ್ನು ಗೌರವಿಸುವಂತೆ ನಟಿಸುತ್ತಿದೆ” ಎಂದು ಆರೋಪಿಸಿದೆ.

ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್‌, “ಅಂಬೇಡ್ಕರ್ ಅವರ ಕೊಡುಗೆಗಳನ್ನು ಸ್ಮರಿಸಲು ಕಾಂಗ್ರೆಸ್ ‘ಅಂಬೇಡ್ಕರ್ ಸಮ್ಮಾನ್ ಸಪ್ತಾಹ’ ಆರಂಭಿಸಿದೆ. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅಂಬೇಡ್ಕರ್ ಅವರ ಪರಂಪರೆಯನ್ನು ಎತ್ತಿ ಹಿಡಿಯಲು ಮೆರವಣಿಗೆಗಳು ಮತ್ತು ಪತ್ರಿಕಾಗೋಷ್ಠಿಗಳನ್ನು ನಡೆಸುತ್ತಿದ್ದಾರೆ. ಬಿಜೆಪಿ ಅಂಬೇಡ್ಕರ್ ಅವರ ಆಶಯಗಳನ್ನು ಬುಡಮೇಲು ಮಾಡುತ್ತಿದೆ. ಸಂವಿಧಾನವನ್ನೇ ಬದಲಾಯಿಸುವ ಹುನ್ನಾರದೊಂದಿಗೆ ಅಂಬೇಡ್ಕರ್‌ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡುತ್ತಿದೆ. ಅಮಿತ್ ಶಾ ಕ್ಷಮೆಯಾಚಿಸಬೇಕು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದೆ.

ಪಾಲಿಕೆಯಲ್ಲಿ ಆರೋಪ-ಪ್ರತ್ಯಾರೋಪಗಳಿಗೆ ಸದಸ್ಯರ ನಡುವೆ ವಾಗ್ವಾದ ನಡೆದಿದ್ದು, ಪರಸ್ಪರ ಕೈ-ಕೈ ಮಿಲಾಯಿಸಿದ್ದು, ಹೊಡೆದಾಡಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...