ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು ತಿಳಿಸಿದ್ದಾರೆ. ಜೊತೆಗೆ ಬಿಜೆಪಿ ಸಂಸದರು ತನ್ನನ್ನು ಬೀಳಿಸಿ ಗಾಯಗೊಳಿಸಿದ್ದಾರೆ ಎಂದು ಆರೋಪಿಸಿ ಖರ್ಗೆಯವರು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.
“ಗೃಹ ಸಚಿವರ ಇಂತಹ ನಡವಳಿಕೆಯು ಹಕ್ಕುಚ್ಯುತಿ ಉಲ್ಲಂಘನೆಯಾಗಿದೆ ಮತ್ತು ಸದನದ ಅವಹೇಳನಕ್ಕೆ ಸಮಾನವಾಗಿದೆ” ಎಂದು ಅಮಿತ್ ಶಾ ವಿರುದ್ಧದ ಹಕ್ಕುಚ್ಯುತಿ ನೋಟಿಸ್‌ನಲ್ಲಿ ಖರ್ಗೆ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಅಂಬೇಡ್ಕರ್ ವಿವಾದ | ಅಮಿತ್ ಶಾ ವಿರುದ್ಧ ಹಕ್ಕುಚ್ಯುತಿ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ
राज्यसभा में विपक्ष के नेता और कांग्रेस अध्यक्ष के साथ आज सुबह संसद परिसर में मकर द्वार के बाहर धक्का-मुक्की की गई। उन्होंने इस घटना पर अभी लोकसभा अध्यक्ष को पत्र लिखा है।
— Jairam Ramesh (@Jairam_Ramesh) December 19, 2024
The Leader of the Opposition in the Rajya Sabha and @INCIndia President @kharge ji was physically assaulted… pic.twitter.com/YOhHWT55bD
ಕೇಂದ್ರ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷಗಳು ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ಸಂಸತ್ತಿನಲ್ಲಿ ಭಾರೀ ಗದ್ದಲ ಶುರುವಾಗಿದೆ.
ಗುರುವಾರ ಸಂಸತ್ತಿನ ಆವರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ನಡುವೆ ತಳ್ಳಾಟ ನಡೆದಿದ್ದು, ಈ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಗಾಯವಾಗಿದೆ ಎಂದು ಹೇಳಲಾಗಿದೆ. ಇನ್ನು ಕೆಲವು ಬಿಜೆಪಿ ನಾಯಕರು ತಮಗೂ ಗಾಯವಾಗಿದೆ, ರಾಹುಲ್ ಗಾಂಧಿ ದೂಡಿದ್ದರಿಂದ ಗಾಯವಾಗಿದೆ ಎಂದು ಹೇಳಿಕೊಂಡಿದ್ದಾರೆ. ಹೀಗೆ ಉಭಯ ಪಕ್ಷಗಳ ನಾಯಕರು ಪರಸ್ಪರ ಆರೋಪ ಮಾಡುತ್ತಿದ್ದಾರೆ.
