ಅಂಬರ್‌ನಾಥ್‌ | ಅಮಾನತುಗೊಂಡಿದ್ದ 12 ಕಾಂಗ್ರೆಸ್ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

Date:

ಚುನಾವಣೆ ನಂತರ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಕ್ಕಾಗಿ ಕಾಂಗ್ರೆಸ್‌ನಿಂದ ಅಮಾನತುಗೊಂಡಿದ್ದ ಅಂಬರ್‌ನಾಥ್‌ ಪುರಸಭೆ 12 ಕೌನ್ಸಿಲರ್‌ಗಳು, ಇದೀಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರ್‌ನಾಥ್‌ನಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವೀಂದ್ರ ಚವಾಣ್ ಸಮ್ಮುಖದಲ್ಲಿ ಕಾಂಗ್ರೆಸ್‌ ಕೌನ್ಸಿಲರ್‌ಗಳು ಬಿಜೆಪಿ ಸೇರಿಸಿದ್ದಾರೆ. ಅಭಿವೃದ್ಧಿಯ ಹಿತದೃಷ್ಟಿಯಿಂದ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾಗಿಯೂ, ಈಗ ಬಿಜೆಪಿಗೆ ಸೇರಿದ್ದಾಗಿಯೂ ಅವರು ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಕೌನ್ಸಿಲರ್‌ಗಳನ್ನು ಪಕ್ಷಕ್ಕೆ ಸ್ವಾಗತಿಸಿದ ರವೀಂದ್ರ ಚವಾಣ್, “ಈ ಕೌನ್ಸಿಲರ್‌ಗಳನ್ನು ಜನರು ಆಯ್ಕೆ ಮಾಡಿದ್ದರು. ಆ ಜನರಿಗೆ ಕೌನ್ಸಿಲರ್‌ಗಳು ಅಭಿವೃದ್ಧಿಯ ಭರವಸೆ ನೀಡಿದ್ದರು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಕ್ರಿಯಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬುದನ್ನು ಅರಿತಿರುವ ಕೌನ್ಸಿಲರ್‌ಗಳು, ಜನರಿಗೆ ನ್ಯಾಯ ಮತ್ತು ಅಭಿವೃದ್ಧಿಯನ್ನು ತಲುಪಿಸಲು ನಮ್ಮ ಜೊತೆಗೂಡಿದ್ದಾರೆ” ಎಂದು ಹೇಳಿದ್ದಾರೆ.

ಡಿಸೆಂಬರ್ 20ರಂದು ನಡೆದ ಸ್ಥಳೀಯ ಚುನಾವಣೆಯಲ್ಲಿ ಅಂಬರ್‌ನಾಥ್‌ ಪುರಸಭೆಯ ಫಲಿತಾಂಶವು ಅತಂತ್ರ ಪುರಸಭೆಯನ್ನು ನಿರ್ಮಿಸಿತ್ತು. ಆ ಸಂದರ್ಭದಲ್ಲಿ 12 ಕಾಂಗ್ರೆಸ್‌ ಕೌನ್ಸಿಲರ್‌ಗಳು ಪಕ್ಷದ ಬದ್ಧ ಎದುರಾಳಿಯಾದ ಬಿಜೆಪಿ ಜೊತೆಗೂಡಿ ‘ಅಂಬರ್‌ನಾಥ್ ವಿಕಾಸ್ ಅಘಾಡಿ’ (AVA) ಬ್ಯಾನರ್ ಅಡಿಯಲ್ಲಿ ಮೈತ್ರಿ ಮಾಡಿಕೊಂಡು, ಆಡಳಿತ ರಚಿಸಿದ್ದರು. ಕಾಂಗ್ರೆಸ್‌ ಕೌನ್ಸಿಲರ್‌ಗಳು ಮಿತ್ರಪಕ್ಷ ಶಿವಸೇನೆ (ಯುಬಿಟಿ)ಯನ್ನೂ ಬದಿಗಿಟ್ಟಿದ್ದರು. ಪರಿಣಾಮ, ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡ ಪಕ್ಷದ ಕೌನ್ಸಿಲರ್‌ಗಳನ್ನು ಕಾಂಗ್ರೆಸ್‌ ಅಮಾನತು ಮಾಡಿತ್ತು. ಈ ಬೆನ್ನಲ್ಲೇ, ಅವರೆಲ್ಲರೂ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ಈ ಲೇಖನ ಓದಿದ್ದೀರಾ?: ಅರಸು – ಸಿದ್ದರಾಮಯ್ಯ: ʼಬದಲಾದ ಕಾಲಘಟ್ಟದ ಪಾತ್ರʼಕ್ಕೆ ಸಿಗದ ವಿಶ್ಲೇಷಣಾ ನ್ಯಾಯ

60 ಸದಸ್ಯರ ಅಂಬರ್‌ನಾಥ್‌ ಪುರಸಭೆಯ ಚುನಾವಣೆಯಲ್ಲಿ ಶಿವಸೇನೆ (ಯುಬಿಟಿ) 27 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿ 14, ಕಾಂಗ್ರೆಸ್‌ 12, ಎನ್‌ಸಿಪಿ (ಅಜಿತ್ ಬಣ) 4 ಹಾಗೂ ಸ್ವತಂತ್ರರು 2 ಸ್ಥಾನಗಳನ್ನು ಗೆದ್ದಿದ್ದರು. ಮೈತ್ರಿಯಡಿಯಲ್ಲಿ ಕಾಂಗ್ರೆಸ್‌ ಕೌನ್ಸಿಲರ್‌ಗಳು ಶಿವಸೇನೆ (ಯುಬಿಟಿ)ಗೆ ಬೆಂಬಲ ನೀಡಬೇಕಿತ್ತು. ಆದರೆ, ಅವರು ಬಿಜೆಪಿ ಮತ್ತು ಎನ್‌ಸಿಪಿ (ಅಜಿತ್ ಬಣ)ದ ಜೊತೆಗೂಡಿ ಆಡಳಿತ ರಚಿಸಿದ್ದರು.

ಇನ್ನು, ಅಕೋಲಾ ಜಿಲ್ಲೆಯ ಅಕೋಟ್ ಪುರಸಭೆಯಲ್ಲಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಪಕ್ಷವು ಬಿಜೆಪಿ ಜೊತೆ ಕೈಜೋಡಿಸಿ ಆಡಳಿತ ರಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...