ಕಳೆದ 5 ವರ್ಷಗಳಲ್ಲಿ ಅಮೇಥಿ ನೊಂದಿದೆ; ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

Date:

ಕಳೆದ ಐದು ವರ್ಷಗಳಲ್ಲಿ ಅಮೇಥಿ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅವರು ಯೋಚಿಸದ ಕಾರಣ ಕ್ಷೇತ್ರವು ‘ನೊಂದಿದೆ’ ಎಂದು ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ.

- Advertisement -

ಅಮೇಥಿ ಕಣದಲ್ಲಿರುವ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಪರವಾಗಿ ನಡೆದ ಪ್ರಚಾರದಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದರು. ಮೇ 20 ರಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಕೊನೆಯ ಸುತ್ತಿನ ಪ್ರಚಾರದಲ್ಲಿ ಪ್ರಿಯಾಂಕಾ ಅವರು ಶರ್ಮಾ ಪರವಾಗಿ ಮತಚಾಯಿಸಿದ್ದಾರೆ. ‘ಶರ್ಮಾತಮ್ಮ ಇಡೀ ಜೀವನವನ್ನು ಅಮೇಥಿಗೆ ಅರ್ಪಿಸಿದ್ದಾರೆ’ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಶರ್ಮಾ ಕಳೆದ 40 ವರ್ಷಗಳಿಂದ ಅಮೇಥಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರು ಈ ಕ್ಷೇತ್ರದಲ್ಲಿ ನನ್ನ ತಂದೆ ರಾಜೀವ್ ಗಾಂಧಿ ಅವರಿಗೆ ನಿಖಕವರ್ತಿಯಾಗಿದ್ದರು. ನನ್ನ ತಾಯಿ ಸೋನಿಯಾ ಗಾಂಧಿ ಮತ್ತು ನನ್ನ ಅಣ್ಣ ರಾಹುಲ್ ಗಾಂಧಿಯವರ ಗೆಲುವಿಗಾಗಿಯೂ ಕೆಲಸ ಮಾಡಿದ್ದಾರೆ. ಅವರು ಅಮೇಥಿಗೆ ತಮ್ಮ ಜೀವನವನ್ನು ಅರ್ಪಿಸಿದ್ದಾರೆ” ಎಂದು ಹೇಳಿದರು.

ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್ ಬರೇಲಿಯಲ್ಲಿ ಕ್ರಮವಾಗಿ ಶರ್ಮಾ ಮತ್ತು ರಾಹುಲ್ ಗಾಂಧಿ ಪರವಾಗಿ ಪ್ರಿಯಾಂಕಾ ಭಾರೀ ಪ್ರಚಾರ ನಡೆಸುತ್ತಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಬೀಡುಬಿಟ್ಟಿದ್ದಾರೆ. “ಅಮೇಥಿ ನನ್ನ ಮನೆ ಮತ್ತು ಕುಟುಂಬ. ನಾವು ಅದರಿಂದ ಎಂದಿಗೂ ದೂರ ಉಳಿದಿಲ್ಲ. ಉಳಿಯುವುದೂ ಇಲ್ಲ” ಎಂದು ಹೇಳಿದರು.

ಇರಾನಿ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ, “2019ರಲ್ಲಿ ಅವರು ನಿಮ್ಮನ್ನು ದಾರಿ ತಪ್ಪಿಸಿದ್ದರಿಂದ ರಾಹುಲ್‌ ಅವರನ್ನು ಸೋಲಿಸಲಾಯಿತು. ಆದರೆ, ನಾವು ನಮ್ಮ ಜವಾಬ್ದಾರಿಯನ್ನು ಅರ್ಥಮಾಡಿಕೊಂಡಿದ್ದೇವೆ. ಅಮೇಥಿ ನನ್ನ ಮನೆ ಮತ್ತು ಕುಟುಂಬ. ನಾವು ಈ ಕುಟುಂಬಕ್ಕಾಗಿ ಕೆಲಸ ಮಾಡುತ್ತಲೇ ಇರುತ್ತೇವೆ. ಕಿಶೋರಿ ಲಾಲ್ ಶರ್ಮಾ ಜೊತೆಗೆ ರಾಹುಲ್ ಗಾಂಧಿ ಕೂಡ ಇದು ನನ್ನ ಕುಟುಂಬ ಎಂದು ಹೇಳಿದ್ದಾರೆ.ನಾನು ಅಮೇಥಿ ಮತ್ತು ರಾಯ್ ಬರೇಲಿಗಾಗಿ ಕೆಲಸ ಮಾಡುತ್ತೇನೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಅಮೇಥಿಯಿಂದ ಸ್ಪರ್ಧಿಸಿದ್ದರು. ಅವರು ವಯನಾಡಿನಲ್ಲಿ ಗೆದ್ದರು. ಆದರೆ, ಅಮೇಥಿಯಲ್ಲಿ ಇರಾನಿ ವಿರುದ್ಧ ಸೋತರು. ಈಗ, ರಾಹುಲ್‌ ವಯನಾಡ್ ಮತ್ತು ರಾಯ್‌ಬರೇಲಿಯಲ್ಲಿ ಸ್ಪರ್ಧಿಸಿದ್ದಾರೆ. ತಮ್ಮ ಹಳೆಯ ಕ್ಷೇತ್ರ ಅಮೇಥಿಯನ್ನು ಪಕ್ಷದ ಹಿರಿಯ ಕಾರ್ಯಕರ್ತ ಶರ್ಮಾ ಅವರಿಗೆ ಬಿಟ್ಟುಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...