ತ್ರಿವಳಿ ರೈಲು ದುರಂತ | ರಾಜೀನಾಮೆ ಬೇಡಿಕೆಗೆ ರೈಲ್ವೆ ಸಚಿವರು ನೀಡಿದ ಉತ್ತರವೇನು ಗೊತ್ತಾ?

Date:

Advertisements

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ತ್ರಿವಳಿ ರೈಲು ದುರಂತದಲ್ಲಿ 280 ಕ್ಕೂ ಹೆಚ್ಚು ಜನರು ಮೃತಪಟ್ಟು ಒಂದು ಸಾವಿರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ ದೇಶ ಕಂಡ ಕೆಲವೇ ಭೀಕರ ರೈಲು ದುರಂತಗಳಲ್ಲಿ ಇದೂ ಒಂದಾಗಿದೆ. ನೂರಾರು ಕುಟುಂಬಗಳಿಗೆ ಆಧಾರವಾಗಿದ್ದ ಜನರು ಅಸುನೀಗಿದ್ದು, ಮನೆಯ ಪ್ರಮುಖರನ್ನು ಕಳೆದುಕೊಂಡು ಮುಂದೇನು ಎಂಬ ಚಿಂತೆಯಲ್ಲಿ ದಿನದೂಡುವ ಸ್ಥಿತಿ ಕುಟುಂಬದ ಇತರ ಸದಸ್ಯರಿಗೆ ಎದುರಾಗಿದೆ.

ಇವೆಲ್ಲ ಪರಿಸ್ಥಿತಿಗಳಿಗೆ ರೈಲ್ವೆ ಇಲಾಖೆಯೆ ಗಂಭೀರ ಹೊಣೆಯಾಗಿದ್ದು, ಆಡಳಿತಾತ್ಮಕ ಸಮಸ್ಯೆ ಒಳಗೊಂಡ ಮಾನವ ದೋಷ ಎದ್ದು ಕಾಣುತ್ತಿದೆ. ರೈಲ್ವೆ ಸಚಿವರು ಎಲ್ಲ ರಾಜ್ಯಗಳನ್ನು ಒಳಗೊಂಡು ತಮ್ಮ ಇಲಾಖೆಯನ್ನು ಸಮರ್ಥವಾಗಿ ನಿಭಾಯಿಸಿದ್ದರೆ ಭೀಕರ ದುರಂತವನ್ನು ತಪ್ಪಿಸಬಹುದಿತ್ತು. ವಿಪಕ್ಷಗಳು ಹಾಗೂ ಸಾರ್ವಜನಿಕರು ದುರಂತದ ಹೊಣೆ ಹೊತ್ತು ರಾಜೀನಾಮೆ ನೀಡಿ ಎಂದು ಸಚಿವರನ್ನು ಆಗ್ರಹಿಸಿದರೆ ಅವರು ನೀಡುವ ಉತ್ತರವೆ ಬೇರೆಯಿದೆ.

ಘಟನಾ ಸ್ಥಳದಲ್ಲಿ ಸುದ್ದಿಗಾರರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದಾಗ, “ಮೊದಲು ನಾಪತ್ತೆಯಾದವರನ್ನು ಅವರ ಕುಟುಂಬದ ಸದಸ್ಯರಿಗೆ ಆದಷ್ಟು ಬೇಗ ಹುಡುಕಿ ಖಚಿತಪಡಿಸಿಕೊಳ್ಳಬೇಕಿರುವುದು ನಮ್ಮ ಗುರಿಯಾಗಿದೆ. ನಮ್ಮ ಜವಾಬ್ದಾರಿ ಇನ್ನೂ ಮುಗಿದಿಲ್ಲ” ಎಂದಷ್ಟೆ ಹೇಳಿ ರಾಜೀನಾಮೆ ವಿಷಯದಿಂದ ನುಣುಚಿಕೊಂಡರು.

Advertisements

ಈ ಸುದ್ದಿ ಓದಿದ್ದೀರಾ? ತ್ರಿವಳಿ ರೈಲು ದುರಂತ| ಘಟನೆ ಸಿಬಿಐ ತನಿಖೆಗೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ರೈಲ್ವೆ ಸಚಿವ

ಏತನ್ಮಧ್ಯೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಯುಬಿಟಿ ಶಿವಸೇನೆ ಬಣದ ನಾಯಕ ಸಂಜಯ್ ರಾವತ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು ಅಪಘಾತದ ನಂತರ ಅಶ್ವಿನಿ ವೈಷ್ಣವ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ದುರಂತಕ್ಕೆ “ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಿಸ್ಟಂ” ಸಮಸ್ಯೆ ಪ್ರಮುಖ ಕಾರಣ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಆದರೆ ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಎಲೆಕ್ಟ್ರಾನಿಕ್ ಇಂಟರ್‌ಲಾಕಿಂಗ್ ಸಿಸ್ಟಂ ಮಾತ್ರವಲ್ಲದೆ ಮಾನವ ದೋಷವು ಪ್ರಮುಖವಾಗಿದೆ ಎಂದು ರೈಲ್ವೆ ಮಂಡಳಿ ಹೇಳಿದೆ.

“ಪ್ರಾಥಮಿಕ ಸಂಶೋಧನೆಗಳ ಪ್ರಕಾರ, ಸಿಗ್ನಲಿಂಗ್‌ನಲ್ಲಿ ಕೆಲವು ಸಮಸ್ಯೆಗಳಿವೆ. ರೈಲ್ವೆ ಸುರಕ್ಷತಾ ಆಯುಕ್ತರ ವಿವರವಾದ ವರದಿಗಾಗಿ ನಾವು ಇನ್ನೂ ಕಾಯುತ್ತಿದ್ದೇವೆ. ಕೋರಮಂಡಲ್ ಎಕ್ಸ್‌ಪ್ರೆಸ್ ಮಾತ್ರ ಅಪಘಾತಕ್ಕೀಡಾಗಿದೆ. ರೈಲು ಸುಮಾರು ಗಂಟೆಗೆ 128 ಕಿಮೀ ವೇಗದಲ್ಲಿತ್ತು” ಎಂದು ರೈಲ್ವೆ ಮಂಡಳಿಯ ಕಾರ್ಯಾಚರಣೆ ಮತ್ತು ವ್ಯವಹಾರ ಅಭಿವೃದ್ಧಿ ಸದಸ್ಯ ಜಯ ವರ್ಮ ಸಿನ್ಹಾ ದುರಂತದ ಕುರಿತು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X