ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾಗವಹಿಸಿದ ಸಭೆಯಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಮುಖಂಡರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ.
ಲಕ್ಷ್ಮೀ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಭಾಗಿಯಾಗಿದ್ದ ಸಭೆಯಲ್ಲಿ ಕಾರ್ಯಕರ್ತರು ಪಕ್ಷದ ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಭೆಯಲ್ಲಿ ಸರ್ಕಾರದ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು, ಚುನಾವಣೆ ಸಮಯದಲ್ಲಿ ಮಾತ್ರ ನಿಮಗೆ ಕಾರ್ಯಕರ್ತರ ನೆನಪಾಗುತ್ತದೆ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಇದೇ ಕಾರಣ ಜಿಲ್ಲೆಯಲ್ಲಿ ಕಾಂಗ್ರೆಸ್ಗೆ ಮತ್ತೆ ಮತ್ತೆ ಸೋಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ವೇದಿಕೆಯಲ್ಲಿದ್ದ ಸಚಿವೆ ಹೆಬ್ಬಾಳ್ಕರ್ ಮೌನವಾಗಿ ಕುಳಿತಿರುವ ದೃಶ್ಯ ಕಂಡುಬಂದಿದೆ.