ಕಲ್ಲು ತೂರಾಟ, ಗಲಾಟೆ ನಡುವೆ ಬಹುತೇಕ ಕಡೆ ರಾಜ್ಯದಲ್ಲಿ ಶಾಂತಿಯುತ ಮತದಾನ

Date:

ದೇಶದಲ್ಲಿ ಶುಕ್ರವಾರ (ಏ.26) ಎರಡನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆದಿದೆ.

- Advertisement -

ರಾಜ್ಯದಲ್ಲಿ ಸಂಜೆ 6ಗಂಟೆಗೆ ಮತದಾನ ಮುಗಿದಿದ್ದು, 5.30ರ ಹೊತ್ತಿಗೆ 63.90ರಷ್ಟು ಮತದಾನವಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು, ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಿದ್ದು ಬಿಟ್ಟರೆ ಉಳಿದಂತೆ ಯಾವುದೇ ಅಹಿತಕರ ಘಟನೆಗಳು ನಡೆಯದೆ ಶಾಂತಿಯುತವಾಗಿ ಮತದಾನವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರ ಸೇರಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಬೆಳಿಗ್ಗೆ 7ಗಂಟೆಗೆ ಮತದಾನ ಪ್ರಕ್ರಿಯೆ ರಾಜ್ಯದಲ್ಲಿ ಆರಂಭವಾಯಿತು. ಬಿಸಿಲಿನ ಕಾವು ಏರುವ ಹೊತ್ತಿಗೆ ಶೇ.22.34ರಷ್ಟು ಮತದಾನ ರಾಜ್ಯದಲ್ಲಿ ಕಂಡು ಬಂತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಶೇ.38.23ರಷ್ಟು, 3 ಗಂಟೆ ಹೊತ್ತಿಗೆ ಶೇ.50.93ರಷ್ಟು ಹಾಗೂ ಸಂಜೆ 5 ಗಂಟೆಗೆ ಶೇ.63.90 ರಷ್ಟು ಮತದಾನ ನಡೆದಿದ್ದು ಕಂಡುಬಂತು.

ಮಂಡ್ಯದಲ್ಲಿ ಅತಿ ಹೆಚ್ಚು ಶೇ. 74 ರಷ್ಟು ಮತದಾನವಾಗಿದ್ದರೆ, ಬೆಂಗಳೂರು ಕೇಂದ್ರದಲ್ಲಿ ಶೇ. 49 ರಷ್ಟು ಮತದಾನವಾಗಿದೆ. ಈ ಮೂಲಕ ಬೆಂಗಳೂರು ಕೇಂದ್ರ ಈ ಬಾರಿಯೂ ಅತಿ ಕಡಿಮೆ ಮತದಾನ ಕ್ಷೇತ್ರವಾಗಿಯೇ ಮುಂದುವರೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆ ಗ್ರಾಮ ಮಾತ್ರ  ಶೇಕಡಾ 100ರಷ್ಟು ಮತದಾನ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದೆ.

ರಾಜ್ಯದಲ್ಲಿ ಬಹುತೇಕ ಕಡೆ ಮತದಾರರು ಉತ್ಸಾಹದಿಂದಲೇ ಮತಚಲಾಯಿಸಿದ್ದಾರೆ. ಶತಾಯುಸಿಗಳು ಮತಗಟ್ಟೆಗೆ ಬಂದು ಮತಚಾಲಾಯಿಸಿದ್ದು ಅಲ್ಲಲ್ಲಿ ಕಂಡುಬಂತು. ಸ್ಟಾರ್‌ ನಟರು, ಸೆಲೆಬ್ರೆಟಿಗಳು ತಮ್ಮ ಹತ್ತರಿದರ ಬೂತ್‌ಗಳಿಗೆ ತೆರಳಿ ಮತ ಫೋಟೋಗಳಿಗೆ ಪೋಸ್‌ ನೀಡಿದರು.

ಅಭ್ಯರ್ಥಿಗಳು ಮತ್ತು ಅವರ ಕುಟುಂಬ ಸದಸ್ಯರು ದೇವಸ್ಥಾನಗಳಿಗೆ ತೆರಳಿ, ಹಿರಿಯರ ಅಶೀರ್ವಾದ ಪಡೆದು ಮತಚಲಾಯಿಸಿದರು. ಇದೇ ವೇಳೆ ಪ್ರಮುಖ ನಾಯಕಾರ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್‌ ಮತ ಚಲಾಯಿಸಿದ ಬಳಿಕ ಪರಸ್ಪರ ಟೀಕೆಗಳನ್ನು ಮಾಧ್ಯಮಗಳ ಮುಂದೆ ಮಾಡಿದರು.

ಕೆಲವು ಕಡೆ ವಿಳಂಬ

ಹುಣಸೂರು, ರಾಮನಗರ, ಮಂಗಳೂರು, ಚಿಕ್ಕಮಗಳೂರು, ವಿಟ್ಲ, ಸಳ್ಯ ಸೇರಿದಂತೆ ಕೆಲವು ಬೂತ್‌ಗಳಲ್ಲಿ ಇವಿಎಂ ಕೈಕೊಟ್ಟ ಕಾರಣ ಮತದಾನ ತಡವಾಗಿ ಆರಂಭವಾಯಿತು.

ಮತದಾನ ಬಹಿಷ್ಕಾರ

ಚಿತ್ರದುರ್ಗ ತಾಲ್ಲೂಕಿನಲ್ಲಿ ಗಣಿಬಾಧಿತ ಪ್ರದೇಶದ ವ್ಯಾಪ್ತಿಯಿಂದ ಹೊರಗಿಟ್ಟ ಕ್ರಮವನ್ನು ವಿರೋಧಿಸಿ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದ ಸಿದ್ದಾಪುರ ಗ್ರಾಮಸ್ಥರು, ಶುಕ್ರವಾರ ಮತಗಟ್ಟೆಯತ್ತಲೇ ಸುಳಿಯಲಿಲ್ಲ.

ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಮತಗಟ್ಟೆಯ ಬಳಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗ ಚಾಮರಾಜಪೇಟೆ ಮತಗಟ್ಟೆಯ ಬಳಿ ನಡೆಯಿತು. ಮತಗಟ್ಟೆಯ ಬಳಿ ಬಿಜೆಪಿ ಕಾರ್ಯಕರ್ತರು ನಿಂತಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಮಧ್ಯಪ್ರವೇಶ ಮಾಡಿದ ಪೊಲೀಸರು ಗುಂಪನ್ನು ಚದುರಿಸಿದರು.

ಶಿಕ್ಷಕಿ ಹೃದಯಾಘಾತದಿಂದ ನಿಧನ

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿ ಮೇಗಳ ಗೊಲ್ಲರಹಟ್ಟಿ ಮತಗಟ್ಟೆಗೆ ನಿಯೋಜನೆಗೊಂಡಿದ್ದ ಶಿಕ್ಷಕಿ ಯಶೋಧಮ್ಮ(58)ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತ ಶಿಕ್ಷಕಿ ಬೊಮ್ಮಸಮುದ್ರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ (ಸಂಜೆ 5.30)

ಉಡುಪಿ-ಚಿಕ್ಕಮಗಳೂರು – ಶೇ.72.13
ಹಾಸನ – ಶೇ.72.13
ದಕ್ಷಿಣ ಕನ್ನಡ – ಶೇ.71.83
ಚಿತ್ರದುರ್ಗ – ಶೇ.67.00
ತುಮಕೂರು – ಶೇ.72.10
ಮಂಡ್ಯ – ಶೇ.74.87
ಮೈಸೂರು – ಶೇ.65.85
ಚಾಮರಾಜನಗರ – ಶೇ. 69.60
ಬೆಂಗಳೂರು ಗ್ರಾಮಾಂತರ – ಶೇ.61.78
ಬೆಂಗಳೂರು ಉತ್ತರ – ಶೇ.50.4
ಬೆಂಗಳೂರು ಕೇಂದ್ರ – ಶೇ.48.61
ಬೆಂಗಳೂರು ದಕ್ಷಿಣ – ಶೇ.49.37
ಚಿಕ್ಕಬಳ್ಳಾಪುರ – ಶೇ. 70.97
ಕೋಲಾರ – ಶೇ.71.26

ಲೋಕಸಭೆ ಚುನಾವಣೆ-2024, ಮತದಾನ, ಕರ್ನಾಟಕ, ಮೊದಲ ಹಂತದ ಮತದಾನ, ಮತದಾನ ಪ್ರಮಾಣ, Lok Sabha Elections-2024, Voting, Karnataka, First Phase Voting, Voting Rate,

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ...

ಕರ್ನಾಟಕ ಮತ್ತೊಂದು ಬೆಂಗಾಲ್ ಆಗಲು ಬಿಡುವುದಿಲ್ಲ; SIR ರದ್ದಾಗಲೇಬೇಕು: ಪ್ರಕಾಶ್ ರಾಜ್

ಕರ್ನಾಟಕ ಮತ್ತೊಂದು ಪಶ್ಚಿಮ ಬಂಗಾಳವಾಗಲು ಬಿಡುವುದಿಲ್ಲ. SIR ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು. ಮತದಾರರ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...