ದೆಹಲಿಗೆ ಬರುವಂತೆ ಈಶ್ವರಪ್ಪಗೆ ಅಮಿತ್ ಶಾ ಬುಲಾವ್

Date:

ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆಂದು ಘೋಷಿಸಿ, ಪ್ರಚಾರ ಆರಂಭಿಸಿರುವ ಈಶ್ವರಪ್ಪಗೆ ಅಮಿತ್ ಶಾ ಕರೆ ಮಾಡಿದ್ದು, ದೆಹಲಿಗೆ ಬರುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಕರ್ನಾಟಕದಲ್ಲೇ ಇರುವ ಅಮಿತ್ ಶಾ ಫೋನ್ ಕರೆಯ ಮೂಲಕ ಈಶ್ವರಪ್ಪ ಜೊತೆ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸ್ವತಃ ಈಶ್ವರಪ್ಪ ಅವರೇ ತಮ್ಮ ಆಪ್ತರಿಗೆ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬುಧವಾರ ದೆಹಲಿಗೆ ಹೋಗುವುದಾಗಿ ಹೇಳಿರುವ ಈಶ್ವರಪ್ಪ, ತಮ್ಮ ಸ್ಪರ್ಧೆಯ ನಿಲುವಿಗೂ ಬದ್ಧರಾಗಿರುವುದಾಗಿ ಹೇಳಿಕೊಂಡಿದ್ದಾರೆ.

ಹಾವೇರಿಯಲ್ಲಿ ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಈಶ್ವರಪ್ಪ ಬೇಡಿಕೆ ಇಟ್ಟಿದ್ದರು. ಆದರೆ, ಬಿಜೆಪಿ ಟಿಕೆಟ್‌ ನೀಡಿಲ್ಲ. ತಮ್ಮ ಮಗನಿಗೆ ಟಿಕೆಟ್ ನೀಡದೇ ಇರುವುದಕ್ಕೆ ಯಡಿಯೂರಪ್ಪ ಕಾರಣ ಎಂದು ಆರೋಪಿಸಿರುವ ಈಶ್ವರಪ್ಪ, ಶಿವಮೊಗ್ಗದಲ್ಲಿ ಯಡಿಯೂರಪ್ಪ ಪುತ್ರ, ಸಂಸದ ರಾಘವೇಂದ್ರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

“ಪ್ರಧಾನಿ ಮೋದಿ ಹೇಳಿದರೂ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ಹಿಂದೆ ಸರಿಯುವುದಿಲ್ಲ. ನನ್ನ ಸ್ಪರ್ಧೆ ಕುರಿತು ಪ್ರಧಾನಿ ಮೋದಿ ಕಾಲಿಗೆ ಬಿದ್ದು ಮನವರಿಕೆ ಮಾಡುತ್ತೇನೆ” ಎಂದು ಕೂಡ ಈಶ್ವರಪ್ಪ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...