ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಅತಂತ್ರ ಸರ್ಕಾರ ಬೇಡ; ಅಮಿತ್ ಶಾ

Date:

  • ಬಿಜೆಪಿಗೆ ಪೂರ್ಣ ಬಹುಮತ ನೀಡಿ ಎಂದ ಕೇಂದ್ರ ಗೃಹ ಸಚಿವ
  • ರಾಜ್ಯದಲ್ಲೀಗ ಬದಲಾವಣೆಯ ಬಿರುಗಾಳಿ ಬೀಸಿದೆ ಎಂದ ಸಿಎಂ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸ್ಥಿತಿಗೆ ಅವಕಾಶ ನೀಡಬೇಡಿ. ಪೂರ್ಣ ಬಹುಮತದ ಸರ್ಕಾರ ರಚನೆಗೆ ಜನ ಅವಕಾಶ ನೀಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಳಿಕೊಂಡರು.

ಬೆಂಗಳೂರಿನ ಕೊಮ್ಮಘಟ್ಟದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಹಕಾರ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಹಲವು ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಅಪೂರ್ಣ ಸರ್ಕಾರ ಬೇಡ. ಪೂರ್ಣ ಬಹುಮತದ ಸದೃಢ ಬಿಜೆಪಿ ಸರ್ಕಾರ ರಚನೆ ಆಗಬೇಕು. ಈ ಮೂಲಕ ಪ್ರಧಾನಿಗಳ ಕೈಬಲಪಡಿಸಬೇಕು ಎಂದು ಅಮಿತ್ ಶಾ ಹೇಳಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ , ಕರ್ನಾಟಕದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಜನಪರ ಸರ್ಕಾರವನ್ನು ಮತ್ತೊಮ್ಮೆ ತರಲಾಗುವುದು ಎಂದರು.

ರೈತರಿಗೆ ಅನುಕೂಲ;
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಹಕಾರಿ ಇಲಾಖೆಯಲ್ಲಿ ಸಮರೋಪಾದಿ ಅಭಿವೃದ್ದಿ ಕಾರ್ಯಗಳಾಗಿವೆ. ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುವ ಸಾಲವನ್ನು ಮೂರು ಲಕ್ಷದಿಂದ 5 ಲಕ್ಷ ರೂ.ಗಳವರೆಗೆ ಏರಿಸಲಾಗಿದೆ.

ರೈತರಿಗೆ ಇರರಿಂದ ಬಹಳ ದೊಡ್ಡ ಅನುಕೂಲವಾಗಲಿದೆ. ಯಶಸ್ವಿನಿ ಯೋಜನೆಯನ್ನು ಪುನರಾರಂಭಿಸಿ 300 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ರೈತರಿಗೆ ಜೀವನಜ್ಯೋತಿ ಜೀವ ವಿಮಾ ಪ್ರಾರಂಭ ಮಾಡಿ ಸಹಜ ಸಾವಿಗೂ 2 ಲಕ್ಷ ರೂ.ಗಳನ್ನು ಕುಟುಂಬದವರಿಗೆ ನೀಡಲಾಗುವುದು.
ಇದಕ್ಕಾಗಿ 180 ಕೋಟಿ ರೂ.ಗಳನ್ನು ರೈತರ ಪರವಾಗಿ ತುಂಬಲಾಗುತ್ತಿದೆ. ಬೀಜಗೊಬ್ಬರಕ್ಕೆ 10 ಸಾವಿರ ರೂ. ನೀಡುವ ಭೂ ಸಿರಿ ಯೋಜನೆಯನ್ನು ರೂಪಿಸಲಾಗಿದೆ ಎಂದು ಸಿಎಂ ಹೇಳಿದರು.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತರ ನ್ಯಾಯಯುತ ಬೇಡಿಕೆಗಳ ಅನುಷ್ಠಾನಕ್ಕೆ ‍ಸರ್ಕಾರ ಬದ್ಧ, ನಿಮ್ಮ ಋಣ ತೀರಿಸುತ್ತೇವೆ: ಡಿಕೆ ಶಿವಕುಮಾರ್

ಅಂಬೇಡ್ಕರ್ ಅಂದರೆ ಶಕ್ತಿ-ಸ್ವಾಭಿಮಾನ ಅವರು ನೀಡಿರುವ ಸಂವಿಧಾನ ಶಕ್ತಿಯನ್ನು ಉಳಿಸಿಕೊಂಡು ಹೋಗಬೇಕಿದೆ....

ನಮ್ಮಲ್ಲಿನ ಕೆಲವರ ರಾಜಿ ರಾಜಕಾರಣದಿಂದ ಬಿಜೆಪಿಗೆ ಸೋಲು: ಸ್ವಪಕ್ಷಿಯರ ವಿರುದ್ಧ ಸಿ ಟಿ ರವಿ ಕಿಡಿ

ನಮ್ಮಲ್ಲೂ ರಾಜಿ ರಾಜಕಾರಣ ಮಾಡಿ ತಪ್ಪು ಮಾಡಿದ್ದಾರೆ ಹೊಂದಾಣಿಕೆ ರಾಜಕಾರಣದಿಂದಲೇ ಬಿಜೆಪಿಗೆ ಸೋಲಾಗಿದೆ ಪಕ್ಷದೊಳಗಿನ...

ಸಂವಿಧಾನ ಬದಲಾಯಿಸಲು ಬಂದವರನ್ನೇ ನಾವು-ನೀವು ಬದಲಾಯಿಸಿದ್ದೀವಿ: ಸಿಎಂ ಸಿದ್ದರಾಮಯ್ಯ

ಮನುಸ್ಮೃತಿಯ ಆರಾಧಕರಾದ ಬಿಜೆಪಿ, ಆರ್ ಎಸ್ ಎಸ್ ನವರು ಸಂವಿಧಾನ ವಿರೋಧಿಗಳು ಟೌನ್‌ಹಾಲ್...

ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್...