ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ: ಸಿದ್ದರಾಮಯ್ಯ ಪ್ರಶ್ನೆ

Date:

ಗೃಹ ಸಚಿವ ಅಮಿತ್ ಶಾ ಅವರೇ , ನೀವು ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ? ಕರ್ನಾಟಕದ ಶಾಂತಿ, ನೆಮ್ಮದಿ ಮತ್ತು ಸೌಹಾರ್ದತೆಯನ್ನು ಉಳಿಸುವುದಕ್ಕೋ, ಕೆಡಿಸುವುದಕ್ಕೋ? ನೀವು ಕರ್ನಾಟಕಕ್ಕೆ ಕಾಲಿಟ್ಟಾಗೆಲ್ಲ ಕನ್ನಡಿಗರ ಮನಸ್ಸಿನಲ್ಲಿ ಇಂತಹದ್ದೊಂದು ಪ್ರಶ್ನೆ ಹುಟ್ಟಿಕೊಳ್ಳಲು ನೀವೇ ಕಾರಣವಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಮಳೆ ಕೊರತೆಯಿಂದಾಗಿ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಲಾಗಿದೆ. ಅಂದಾಜು ₹33,770 ಕೋಟಿಯಷ್ಟು ನಷ್ಟವಾಗಿದೆಯೆಂದು ರಾಜ್ಯ ಸರ್ಕಾರ ಸಮೀಕ್ಷೆ ನಡೆಸಿ ಅಂದಾಜು ಮಾಡಿತ್ತು. ಇದರಲ್ಲಿ ಕನಿಷ್ಠ ₹17,901 ಕೋಟಿ ಪರಿಹಾರವನ್ನಾದರೂ ನೀಡಬೇಕೆಂಬುದು ಕರ್ನಾಟಕದ ಬೇಡಿಕೆ. ಇದಕ್ಕಾಗಿ ಪತ್ರದ ಮೇಲೆ ಪತ್ರ ಬರೆದೆವು, ಪ್ರಧಾನಿಯವರ ಜೊತೆ ಬರಪರಿಹಾರ ನೀಡುವ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷರಾದ ನಿಮ್ಮನ್ನೂ ಭೇಟಿಯಾದೆವು. ಈವರೆಗೆ ಒಂದು ಪೈಸೆ ಪರಿಹಾರ ನೀಡಿಲ್ಲ. ಕರ್ನಾಟಕ-ಕನ್ನಡಿಗರ ಬಗ್ಗೆ ಯಾಕೆ ನಿಮಗೆ ಇಷ್ಟು ದ್ವೇಷ?” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಡಲಿಗೆ ಲಕ್ಷಾಂತರ ಬಂಡವಾಳ, ಗಡಿಯಲ್ಲಿ ದಂಡ: ಕೇಳುವವರಿಲ್ಲ ಕರಾವಳಿ...

ಸಮುದ್ರದ ಅಲೆಗಳ ನಡುವೆ ಜೀವದ ಹಂಗು ತೊರೆದು, ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿ ಮೀನುಗಾರಿಕೆಗೆ ತೆರಳುವ ಮೀನುಗಾರರ ಬದುಕು ಈಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಒಂದು ಕಡೆ ಸಮುದ್ರದ ಅಪಾಯ, ಮತ್ತೊಂದು ಕಡೆ...

ರಾಜಕೀಯದ ಅಂಧಾನುಸರಣೆ ಮತ್ತು ಮನೋವಿಜ್ಞಾನ — ಮೋದಿ ಆಡಳಿತ...

ರಾಜಕೀಯ ನಾಯಕನ ನಿರ್ಧಾರವನ್ನು ಪ್ರಶ್ನಿಸಿದರೆ ತನ್ನದೇ ಗುಂಪಿನವರು ವಿರೋಧಿಸಬಹುದು, ಅಪಹಾಸ್ಯ ಮಾಡಬಹುದು ಅಥವಾ ತನ್ನ ರಾಜಕೀಯ ನಿಷ್ಠೆ, ದೇಶಪ್ರೇಮ ಹಾಗೂ ಧರ್ಮನಿಷ್ಠೆಯ ಬಗ್ಗೆ ಅನುಮಾನ ವ್ಯಕ್ತಪಡಿಸಬಹುದು ಎಂಬ ಭಯದಿಂದ ಕೆಲವರು ಮೌನವಾಗಿರಬಹುದು. ಇನ್ನೂ...

ವೀರಪ್ಪ ಮೊಯ್ಲಿ ಹೇಳಿಕೆ- ಕಾಂಗ್ರೆಸ್‌ನ ರಾಜಕೀಯ ನಿರ್ಧಾರಗಳ ನೆರಳಲ್ಲಿ...

ಮೊಯ್ಲಿ ಅವರ ಹೇಳಿಕೆಯ ಮತ್ತೊಂದು ಪ್ರಮುಖ ಭಾಗ ಪಕ್ಷದ ಆಂತರಿಕ ಸುಧಾರಣೆಗೆ ಸಂಬಂಧಿಸಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷೆಯಾಗಿದ್ದ ಅವಧಿಯಲ್ಲಿ ಪಕ್ಷವನ್ನು ಭವಿಷ್ಯದ ರಾಜಕೀಯ ಸವಾಲುಗಳಿಗೆ ಸಿದ್ಧಗೊಳಿಸಲು ಮಹತ್ವದ ಬದಲಾವಣೆಗಳನ್ನು ತರಲು ಬಯಸಿದ್ದರು;...

“ಒಂದು ವಾರದೊಳಗೆ ಉನ್ನತಾಧಿಕಾರ ಸಮಿತಿಯ ಸಭೆ ಕರೆಯುತ್ತೇನೆ ಎಂದು ಕಳೆದ ಸೆಪ್ಟೆಂಬರ್ ನಲ್ಲಿ ನೀವು ನನಗೆ ಆಶ್ವಾಸನೆ ಕೊಟ್ಟಿದ್ದೀರಿ. ವಾರ ಕಳೆದು ತಿಂಗಳುಗಳ ಮೇಲೆ ತಿಂಗಳುಗಳು ಕಳೆದುಹೋಯಿತು. ಇಲ್ಲಿಯವರೆಗೆ ನೀವು ಸಭೆಯನ್ನೂ ಕರೆದಿಲ್ಲ, ಬರಪರಿಹಾರವನ್ನೂ ನೀಡಿಲ್ಲ” ಎಂದಿದ್ದಾರೆ.

“ಈ ಅನ್ಯಾಯ ಇದೇ ಮೊದಲ ಸಲವೇನಲ್ಲ, 2017ರಲ್ಲಿಯೂ ಕರ್ನಾಟಕದಲ್ಲಿ ಬರಗಾಲ ಬಂದಿತ್ತು. ಇದರಿಂದಾಗಿ ಅಂದಾಜು ₹30,000 ಕೋಟಿಯಷ್ಟು ನಷ್ಟ ಉಂಟಾಗಿತ್ತು. ಆಗ ಕೇಂದ್ರ ಸರ್ಕಾರ ನೀಡಿದ್ದು ಕೇವಲ ₹1,435 ಕೋಟಿ ಪರಿಹಾರ. ಅದೇ ವರ್ಷ ಮಹಾರಾಷ್ಟ್ರಕ್ಕೆ ₹8,195 ಕೋಟಿ ಮತ್ತು ಗುಜರಾತ್‌ಗೆ ₹3,894 ಕೋಟಿ ಪರಿಹಾರ ನೀಡಲಾಗಿತ್ತು. 2019ರಲ್ಲಿ ರಾಜ್ಯದಲ್ಲಿ ಬಿಜೆಪಿಯದ್ದೇ ಸರ್ಕಾರವಿದ್ದಾಗಲೂ ಅತಿವೃಷ್ಟಿಯಿಂದಾಗಿರುವ ಹಾನಿಗೆ ಪರಿಹಾರ ನೀಡದೆ ಸತಾಯಿಸಿದ್ದೀರಿ. ಕನ್ನಡಿಗರು ನಿಮಗೆ ಏನು ಅನ್ಯಾಯ ಮಾಡಿದ್ದಾರೆ. ಬಿಜೆಪಿಯನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಅವಕಾಶ ನೀಡದಿರುವುದೇ ಅಪರಾಧವಾಗಿ ಹೋಯಿತೇ?” ಎಂದು ವಾಗ್ದಾಳಿ ನಡೆಸಿದ್ದಾರೆ.

“ಕರಾವಳಿಯ ರೈತರೇ ಕಟ್ಟಿ ಬೆಳೆಸಿದ್ದ ವಿಜಯಾ ಬ್ಯಾಂಕನ್ನು ನುಂಗಿದ್ದು ಗುಜರಾತಿನ ಬರೋಡಾ ಬ್ಯಾಂಕ್. ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ನಿರ್ಮಾಣಗೊಂಡಿದ್ದ ಬಂದರು ಮತ್ತು ವಿಮಾನ ನಿಲ್ದಾಣಗಳನ್ನು ನಮ್ಮಿಂದ ಕಿತ್ತುಕೊಂಡದ್ದು ಗುಜರಾತಿನ ಉದ್ಯಮಿ ಅದಾನಿ. ಗುಜರಾತಿಗಳಿಗೆ ಕನ್ನಡಿಗರು ಶತ್ರುಗಳಾ?” ಎಂದು ಹರಿಹಾಯ್ದಿದ್ದಾರೆ.

“ನಮ್ಮ ರೈತರೇ ಕಟ್ಟಿರುವ ಕರ್ನಾಟಕದ ಹೆಮ್ಮೆಯ ಕೆಎಂಎಫ್ ಅನ್ನು ಗುಜರಾತಿನ ಅಮುಲ್ ಜೊತೆ ವಿಲೀನಗೊಳಿಸಲು ಹೂಡಿದ್ದ ಸಂಚನ್ನು ಕನ್ನಡಿಗರು ಮರೆತಿಲ್ಲ. ರಾಜ್ಯದಲ್ಲಿ ಆ ಕಾಲದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರದ ನೆರವಿನಿಂದ ಒಂದಷ್ಟು ದಿನ ನಂದಿನಿ ಉತ್ಪನ್ನಗಳನ್ನು ಮಾರುಕಟ್ಟೆಯಿಂದ ಮಾಯಮಾಡಿ ಅಮುಲ್ ಉತ್ಪನ್ನಗಳು ಎಲ್ಲೆಲ್ಲೂ ರಾರಾಜಿಸುವಂತೆ ಮಾಡಿದ್ದು ನೀವೇ ಅಲ್ಲವೇ? ನಮ್ಮ ನಂದಿನಿಯನ್ನು ಉಳಿಸಲು ಕರ್ನಾಟಕದಾದ್ಯಂತ ಸ್ವಾಭಿಮಾನಿ ಕನ್ನಡಿಗರು ಎದ್ದು ನಿಂತಾಗ ಬೇರೆ ದಾರಿ ಕಾಣದೆ ನಿಮ್ಮ ದುರಾಲೋಚನೆಯನ್ನು ಕೈಬಿಟ್ಟದ್ದು ನಿಜ ಅಲ್ಲವೇ?” ಎಂದು ಕುಟುಕಿದ್ದಾರೆ.

ಗೃಹ ಸಚಿವ ಅಮಿತ್ ಶಾ ಅವರೇ, ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಉತ್ತರಿಸಿ” ಎಂದು ಸಿಎಂ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಹೋ, ಅದು ನಿಮ್ಮ ಮಡಿಲೇ?’ — ಅದಾನಿ ಸಮೂಹದ ಲೀಗಲ್ ನೋಟಿಸ್‌ಗೆ ವ್ಯಂಗ್ಯವಾಗಿ ಮೊಯಿತ್ರಾ ತಿರುಗೇಟು

ಸಾಮಾಜಿಕ ಜಾಲತಾಣ 'ಎಕ್ಸ್' (ಹಿಂದಿನ ಟ್ವಿಟರ್) ನಲ್ಲಿ ಹಂಚಿಕೊಂಡ ವ್ಯಂಗ್ಯಚಿತ್ರವೊಂದಕ್ಕೆ ಸಂಬಂಧಿಸಿದಂತೆ...

‘ನಿಷೇಧ ಬೇಡ, ನಿಯಂತ್ರಿಸಿ’: ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು...

ಆಶಾ ಕಾರ್ಯಕರ್ತೆಯರ ಬೇಡಿಕೆಯ ಮೊತ್ತ ‘ಬಹಳ ದೊಡ್ಡದು’ ಎನ್ನುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನವೆಂಬರ್ 17ರಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಹೋರಾಟ ನಡೆಸುತ್ತಿರುವ...

ಟ್ರಂಪ್-ಕ್ಸಿ-ಪುಟಿನ್ ತ್ರಿಪಕ್ಷೀಯ ಸಭೆ: ಪ್ರಧಾನಿ ಮೋದಿ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು...