ದೆಹಲಿಗೆ ಹೋದರೂ ಭೇಟಿಯಾಗದ ಅಮಿತ್ ಶಾ; ಸ್ವತಂತ್ರ ಸ್ಪರ್ಧೆ ಘೋಷಿಸಿದ ಈಶ್ವರಪ್ಪ

Date:

ತಮ್ಮ ಮಗನಿಗೆ ಬಿಜೆಪಿ ಟಿಕೆಟ್‌ ಸಿಗದ ಕಾರಣ, ಕೇಸರಿ ಪಡೆ ವಿರುದ್ಧ ಬಂಡಾಯ ಎದಿದ್ದರು ಈಶ್ವರಪ್ಪ ಶಿವಮೊಗ್ಗದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆಂಬ ಬೆದರಿಕೆ ಹಾಕಿದ್ದರು. ಈ ನಡುವೆ, ಬುಧವಾರ ದೆಹಲಿಗೆ ಬರುವಂತೆ ಈಶ್ವರಪ್ಪಗೆ ಬಿಜೆಪಿ ನಾಯಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್ ನೀಡಿದ್ದರು. ಅಮಿತ್ ಶಾ ಭೇಟಿಗಾಗಿ ದೆಹಲಿಗೆ ಹೋಗಿದ್ದ ಈಶ್ವರಪ್ಪಗೆ ಭೇಟಿಗೆ ಸಮಯ ನೀಡಲಾಗಿಲ್ಲ. ಬರಿಗೈಯಲ್ಲಿ ಶಿವಮೊಗ್ಗಗೆ ಮರಳಿರುವ ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿದ್ದಾರೆ.

- Advertisement -

“ಇನ್ನು ಯಾವುದೇ ಮಾತುಕತೆ ಬೇಡ. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇನೆ. ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಒಂದು ಕುಟುಂಬ ರಾಜ್ಯ ಬಿಜೆಪಿಯ ಅಧಿಕಾರವನ್ನು ಹಿಡಿದುಕೊಂಡಿದೆ. ಹಿಂದು ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ಭಾವನೆಗಳಿಗೆ ಧಕ್ಕೆ ತರುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು. ಆಗ ಮಾತ್ರ ಶಿವಮೊಗ್ಗದಲ್ಲಿ ಸ್ಪರ್ಧಿಸದಿರುವ ನಿರ್ಧಾರವನ್ನು ಹಿಂಪಡೆಯಲು ಒಪ್ಪುತ್ತೇನೆ” ಎಂದು ಅವರು ಷರತ್ತು ವಿಧಿಸಿದ್ದಾರೆ.

ಈ ಹಿಂದೆ ಅಮಿತ್ ಶಾ ಬುಲಾವ್ ಬರುವುದಕ್ಕೂ ಮುನ್ನ ಕೂಡ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಬದಲಾಯಿಸದಿದ್ದರೆ ಚುನಾವಣೆಗೆ ಸ್ಪರ್ಧಿಸುವ ನಿರ್ಧಾರವನ್ನು ಬದಲಾಯಿಸುವುದಿಲ್ಲ ಎಂದು ಈಶ್ವರಪ್ಪ ಹೇಳಿದ್ದರು.

“ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ಗೆ ಕುಟುಂಬ ಸಂಸ್ಕೃತಿ ಇದೆ ಎಂದು ಹೇಳುತ್ತಿದ್ದರು. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಒಂದೇ ಕುಟುಂಬದ ಕೈಯಲ್ಲಿದೆ. ಆ ಕುಟುಂಬದಿಂದ ಪಕ್ಷವನ್ನು ಮುಕ್ತಗೊಳಿಸಬೇಕು. ಪಕ್ಷದ ಕಾರ್ಯಕರ್ತರು ನೊಂದಿದ್ದಾರೆ. ಕಾರ್ಯಕರ್ತರ ನೋವು ನೀಗಿಸಲು ಸ್ಪರ್ಧಿಸಿಯೇ ಸ್ಪರ್ಧಿಸುತ್ತೇನೆ,’’ ಎಂದು ಹೇಳಿದ್ದಾರೆ.

“ಹಿಂದುತ್ವ ಸಿದ್ಧಾಂತ ಹಾಗೂ ಸಂಘಟನೆಗಾಗಿ ಹೋರಾಡಿದವರ ಶ್ರಮವನ್ನು ಗೌರವಿಸಬೇಕು. ನಾನು ಪಕ್ಷದಲ್ಲಿನ ಅವ್ಯವಸ್ಥೆ ಸರಿಪಡಿಸಲು ಸ್ಪರ್ಧಿಸುತ್ತಿದ್ದೇನೆ. ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ” ಎಂದು ಹೇಳಿದ್ದಾರೆ.

ಕರ್ನಾಟಕದ 28 ಲೋಕಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಮತದಾನ ನಡೆಯಲಿದೆ. ಶಿವಮೊಗ್ಗದಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರದಿಂದ ರಾಜಕೀಯ ‘ಶಿಕಾರಿ’ ಇಂದಿನಿಂದಲೇ ಆರಂಭವಾಗಿದೆ. ಶಿಕಾರಿಯಾಡುವ ಜವಾಬ್ದಾರಿಯನ್ನು ಇಲ್ಲಿನ ಜನತೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ವಿಸ್ತರಣೆ: ಬಸ್ ಕಂಡಕ್ಟರ್ ಆಗಿ ಟಿಕೆಟ್ ನೀಡಿದ ಸಿಎಂ ವಿಜಯ್

ತಮಿಳುನಾಡು ಸರ್ಕಾರವು ಮಹಿಳೆಯರಿಗಾಗಿ ಜಾರಿಗೆ ತಂದಿರುವ ಉಚಿತ ಬಸ್ ಪ್ರಯಾಣ ಯೋಜನೆಯನ್ನು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...