ಭವಿಷ್ಯದಲ್ಲಿ ತಮಿಳರಿಗೆ ಪ್ರಧಾನಿ ಪಟ್ಟ: ಅಮಿತ್‌ ಶಾ ಭರವಸೆ

Date:

Advertisements

ಭವಿಷ್ಯದಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯನ್ನಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭರವಸೆ ನೀಡಿದ್ದಾರೆ.

ತಮಿಳುನಾಡು ಪ್ರವಾಸ ಕೈಗೊಂಡಿರುವ ಅಮಿತ್‌ ಶಾ ಚೆನ್ನೈನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರ ಜೊತೆ ಆಪ್ತ ಸಮಾಲೋಚನಾ ಸಭೆ ನಡೆಸಿ ಮಾತನಾಡಿದರು.

“ಭವಿಷ್ಯದಲ್ಲಿ ತಮಿಳುನಾಡು ಬಿಜೆಪಿ ನಾಯಕರೊಬ್ಬರನ್ನು ಪ್ರಧಾನ ಮಂತ್ರಿ ಮಾಡಲಾಗುವುದು. ಈ ಹಿಂದೆ ಕೂಡ ತಮಿಳರಿಗೆ ಪ್ರಧಾನ ಮಂತ್ರಿಯಾಗುವ ಅವಕಾಶ ಸಿಕ್ಕಿತ್ತು. ಆದರೆ ಡಿಎಂಕೆ ಅದನ್ನು ತಪ್ಪಿಸಿತು” ಎಂದು ಅವರು ಹೇಳಿದ್ದಾರೆ.

Advertisements

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಕನಿಷ್ಠ 20 ಸೀಟುಗಳು ಗೆಲ್ಲುವಂತೆ ಮಾಡಬೇಕು ಎಂದು ಅಮಿತ್ ಶಾ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ.

ಈ ನಡುವೆ ವೆಲ್ಲೂರಿನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅಮಿತ್ ಶಾ, “ರಾಜ್ಯದ ಜನತೆ ಎನ್‌ಡಿಎಯಿಂದ ಕನಿಷ್ಠ 25 ಸಂಸದರನ್ನು ಗೆಲ್ಲಿಸಬೇಕು. ಸೆಂಗೋಲ್‌ ಅನ್ನು ಸಂಸತ್ತಿನಲ್ಲಿ ಪ್ರತಿಷ್ಠಾಪಿಸಿದ್ದಕ್ಕಾಗಿ ತಮಿಳುನಾಡು ಜನತೆ ಪ್ರಧಾನಿ ನರೇಂದ್ರ ಮೋದಿಗೆ ಬೆಂಬಲ ನೀಡಲು ಎನ್‌ಡಿಎ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಪದಾಧಿಕಾರಿಗಳು ಶ್ರಮಿಸಬೇಕು. ಈ ಸಂಬಂಧ ಬೂತ್ ಸಮಿತಿಗಳನ್ನು ಬಲಪಡಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಣಿಪುರ ಹಿಂಸಾಚಾರ; 349 ಪರಿಹಾರ ಶಿಬಿರಗಳಲ್ಲಿ 50 ಸಾವಿರ ಮಂದಿ ವಾಸ್ತವ್ಯ

“ದಕ್ಷಿಣ ಚೆನ್ನೈ ಲೋಕಸಭಾ ಕ್ಷೇತ್ರದಲ್ಲಿ ಶೇ.60ರಷ್ಟು ಬೂತ್ ಮಟ್ಟದ ಕೆಲಸಗಳು ಪೂರ್ಣಗೊಂಡಿದ್ದು, ಉಳಿದ ಶೇ.40 ರಷ್ಟು ಕೆಲಸಗಳನ್ನು ಸೆಪ್ಟಂಬರ್ ವೇಳೆಗೆ ಪೂರ್ಣಗೊಳಿಸಬೇಕು. ದಕ್ಷಿಣ ಚೆನ್ನೈ ಕ್ಷೇತ್ರವನ್ನು ಗೆಲ್ಲಲು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಮಟ್ಟದಲ್ಲಿ ಶ್ರಮಿಸಬೇಕು” ಎಂದು ಅಮಿತ್ ಶಾ ಕಾರ್ಯಕರ್ತರಿಗೆ ಕರೆ ನೀಡಿದರು.

“ನಾನು ಚೆನ್ನೈಗೆ ಆಗಮಿಸಿದಾಗ ವಿಮಾನ ನಿಲ್ದಾಣದ ಹೊರಗಿದ್ದ ರಸ್ತೆಯ ಬೀದಿ ದೀಪಗಳು ಉರಿಯುತ್ತಿರಲಿಲ್ಲ. ವಿದ್ಯುತ್ ವ್ಯತ್ಯಯ ಆಗುತ್ತಿರುವುದು ನನಗೆ ಹೊಸದೇನಲ್ಲ. ಇದು ತಮಿಳುನಾಡು ಅಂಧಕಾರದಲ್ಲಿದೆ ಎಂಬುದನ್ನು ತೋರಿಸುತ್ತದೆ. ನಾವು ಕತ್ತಲೆಯಲ್ಲಿರುವ ತಮಿಳುನಾಡಿಗೆ ಬೆಳಕನ್ನು ತರುತ್ತೇವೆ” ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. Sengol dont give people free bus, 10kg rice, reduced electricity bill, monthly 2000 Rs etc, idea of fooling people in the name of religion is thrown to Arabian sea by karnataka people. Kaam ki bath karo ji.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X