ಏ.2ಕ್ಕೆ ಅಮಿತ್ ಶಾ ರಾಜ್ಯ ಭೇಟಿ; ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಪ್ರಚಾರ ಆರಂಭ: ಸುನೀಲ್ ಕುಮಾರ್

Date:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಏ.2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಶಕ್ತಿ ಕೇಂದ್ರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವರು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ.ಸುನೀಲ್ ಕುಮಾರ್ ತಿಳಿಸಿದರು.

ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ.ರಿಜಾಯ್ಸ್ ನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಜವಾಬ್ದಾರಿ ಇರುವ 5 ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದು, ನೇರವಾಗಿ 5 ಲೋಕಸಭಾ ಕ್ಷೇತ್ರಗಳ ಕಾರ್ಯಕರ್ತರ ಜೊತೆ ನಮ್ಮ ನಾಯಕರು ಮಾತನಾಡಲಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ರೋಡ್ ಷೋ ಇರುತ್ತದೆ. ಮೊದಲ ಹಂತದಲ್ಲಿ ನಡೆಯುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಮೇಲೆ ದೊಡ್ಡ ಪರಿಣಾಮ ಉಂಟಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಇವೆರಡು ಕಾರ್ಯಕ್ರಮದ ಹೊರತಾಗಿ ನಡುವಿನ ಸಮಯಾವಕಾಶದಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ, ಚಿತ್ರದುರ್ಗ ಬೀದರ್, ಬೆಳಗಾವಿ ಜಿಲ್ಲೆಗಳ ಕೋರ್ ಕಮಿಟಿ ಸದಸ್ಯರ ಜೊತೆ ಅಮಿತ್ ಶಾ ಅವರು ಮಾತುಕತೆ ಮಾಡಲಿದ್ದಾರೆ. ಈ ಮೂಲಕ ಚುನಾವಣಾ ಸಿದ್ಧತೆ ಮಾಡಲಿದ್ದಾರೆ” ಎಂದು ವಿವರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಂಗಳೂರು ಗ್ರಾಮಾಂತರದಲ್ಲಿ ಗೆಲುವು

“ಥೋಡೋ ವಿರುದ್ಧ ಜೋಡೋ ಇದು ಕರ್ನಾಟಕ ಚುನಾವಣೆಯ ಘೋಷಣೆ. ಕಳೆದ ಬಾರಿ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿತ್ತು. ಈ ಬಾರಿ ಮೊದಲ ವಿಜಯ ಅಲ್ಲಿಂದಲೇ ಆರಂಭವಾಗಲಿದೆ. ಆ ಕಾರಣಕ್ಕಾಗಿ ಅಲ್ಲಿಂದಲೇ ಚುನಾವಣಾ ಪ್ರಚಾರ ಆರಂಭಿಸುತ್ತೇವೆ” ಎಂದು ಸುನೀಲ್ ಕುಮಾರ್ ವಿವರಿಸಿದರು.

ನಮ್ಮ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಯು ರಾಜ್ಯ ನಾಯಕರ ಉಪಸ್ಥಿತಿಯಲ್ಲಿ ನಡೆಯುತ್ತಿದೆ ಎಂದರಲ್ಲದೆ, ಬಿಜೆಪಿ 200ಕ್ಕಿಂತ ಹೆಚ್ಚು ಸೀಟು ಗೆಲ್ಲುವುದಿಲ್ಲ ಎಂಬ ಮುಖ್ಯಮಂತ್ರಿಗಳ ಹೇಳಿಕೆ ಕುರಿತು ಪ್ರಸ್ತಾಪಿಸಿದ ಅವರು, 400ರ ಸಂಖ್ಯೆ ದಾಟುವ ಗುರಿಯೊಂದಿಗೆ ನಾವು ಕೆಲಸ ಮಾಡುತ್ತಿದ್ದೇವೆ. ದೇಶದಲ್ಲಿ 400 ಸೀಟು ಗೆಲ್ಲುವುದು ನಮಗೆ ಗೊತ್ತಿದೆ. ನೀವು ಕರ್ನಾಟಕದಲ್ಲಿ ಖಾತೆ ತೆರೆದರೆ ಸಾಕು ಎಂದು ಸವಾಲೆಸೆದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಪ್ರಕಾಶ್ ಅಂಬೇಡ್ಕರ್‌ಗೆ ಎಐಎಂಐಎಂ ಬೆಂಬಲ: ಓವೈಸಿ

ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದ ಅಕೋಲಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ವಂಚಿತ್ ಬಹುಜನ ಅಘಾಡಿ...

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...