ಪಂಜಾಬ್‌ನಲ್ಲಿ ಎಎಪಿ ಸರ್ಕಾರ ಬೀಳಿಸೋದಾಗಿ ಅಮಿತ್ ಶಾ ಬೆದರಿಕೆ

Date:

ಲೋಕಸಭೆ ಚುನಾವಣೆಯ ನಂತರ ಪಂಜಾಬ್‌ನಲ್ಲಿ ಭಗವಂತ್ ಮಾನ್ ಸರ್ಕಾರವನ್ನು ಪತನಗೊಳಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆದರಿಕೆ ಹಾಕಿದ್ದಾರೆ. ಇದು ಸರ್ವಾಧಿಕಾರಿ ನಡೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೋಮವಾರ ಆರೋಪಿಸಿದ್ದಾರೆ.

ಭಾನುವಾರ ಪಂಜಾಬ್‌ನ ಲುಧಿಯಾನದಲ್ಲಿ ಅಮಿತ್ ಶಾ ಚುನಾವಣಾ ರ್ಯಾಲಿ ನಡೆಸಿದ್ದಾರೆ. ಈ ವೇಳೆ, ಪಂಜಾಬ್‌ನಲ್ಲಿ ಬಿಜೆಪಿಯ ಅಭ್ಯರ್ಥಿಗಳ ಗೆಲುವಿಗೆ ಮತ ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಕೇಂದ್ರದಲ್ಲಿ ಬಿಜೆಪಿಯ ವಿಜಯದ ನಂತರ ಭಗವಂತ್ ಮಾನ್ ಸರ್ಕಾರವು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಅಮೃತಸರದಲ್ಲಿ ಸೋಮವಾರ ನಡೆ ವರ್ತಕರ ಸಭೆಯಲ್ಲಿ ಅಮಿತ್ ಶಾ ಹೇಳಿಕೆ ಬಗ್ಗೆ ಮಾತನಾಡಿದ ಕೇಜ್ರಿವಾಲ್, “ಅಮಿತ್ ಶಾ ಅವರ ಹೇಳಿಕೆಯನ್ನು ನೀವು ಕೇಳಿದ್ದೀರಾ? ಅವರು ಬೆದರಿಕೆ ಹಾಕಿದ್ದಾರೆ. ಆರಂಭದಲ್ಲಿ ಅವರು ಪಂಜಾಬಿಗಳನ್ನು ಸಾಕಷ್ಟು ನಿಂದಿಸಿದ್ದರು. ಈಗ, ಜೂನ್ 4ರ ನಂತರ ಪಂಜಾಬ್ ಸರ್ಕಾರವನ್ನು ಉರುಳಿಸುವ ಬೆದರಿಕೆ ಹಾಕಿದ್ದಾರೆ. ಜೂನ್ 4ರ ನಂತರ ಭಗವಂತ್ ಮಾನ್ ಮುಖ್ಯಮಂತ್ರಿಯಾಗಿ ಉಳಿಯುವುದಿಲ್ಲ ಎಂಬ ಬೆದರಿಕೆವೊಡ್ಡಿದ್ದಾರೆ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಮ್ಮಲ್ಲಿ 92 ಶಾಸಕರಿದ್ದಾರೆ. ನೀವು ನಮ್ಮ ಸರ್ಕಾರ ಅನ್ನು ಹೇಗೆ ಉರುಳಿಸುತ್ತೀರಿ? ದೇಶದಲ್ಲಿ ಸರ್ವಾಧಿಕಾರವಿದೆ. ಬಿಜೆಪಿ ನಾಯಕರು ಸಿಬಿಐ, ಇಡಿ ಮೂಲಕ ಶಾಸಕರಿಗೆ ಬೆದರಿಕೆ ಹಾಕುತ್ತಾರೆ. ಬಳಿಕ, ಅವರನ್ನು ಖರೀದಿ ಮಾಡುತ್ತಾರೆ” ಎಂದು ಕೇಜ್ರಿವಾಲ್ ದೂರಿದ್ದಾರೆ.

“ನಾನು ಅಮಿತ್ ಶಾ ಅವರಿಗೆ ಹೇಳಬಯಸುತ್ತೇನೆ. ನೀವು ಪಂಜಾಬ್‌ನ ಜನರಿಗೆ ಬೆದರಿಕೆ ಹಾಕಿದರೆ, ನಿಮಗೆ ಪಂಜಾಬ್‌ಗೆ ಪ್ರವೇಶಿಸಲು ಕಷ್ಟವಾಗುತ್ತದೆ. ಎಚ್ಚರಿಕೆಯಿಂದ ಮಾತನಾಡಿ” ಎಂದಿದ್ದಾರೆ.

ನಿರುದ್ಯೋಗ, ಹಣದುಬ್ಬರದ ಬಗ್ಗೆ ಮಾತನಾಡಿದ ಕೇಜ್ರಿವಾಲ್, “ಮೋದಿ ಅವರು ‘ಇಂಡಿಯಾ’ ಕೂಟವು ಜನರ ಮಂಗಳಸೂತ್ರ ಕಸಿದುಕೊಳ್ಳುತ್ತದೆ ಎಂದು ದ್ವೇಷ ಬಿತ್ತುವ ಮಾತನಾಡುತ್ತಿದ್ದಾರೆ. ಆದರೆ, ಅವರು ನಿರುದ್ಯೋಗ, ಬೆಲೆ ಏರಿಕೆಯಂತಹ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ. ಜನರ ಸಮಸ್ಯೆಗಳಿಗೆ ಅವರ ಬಳಿ ಪರಿಹಾರವಿಲ್ಲ. ಅವರು ಬೇರೆ ಜಗತ್ತಿನಲ್ಲಿ ವಾಸಿಸುತ್ತಿದ್ದಾರೆ ಎಂಬಂತೆ ಕಾಣುತ್ತಿದೆ” ಎಂದರು.

“5,500 ಕೋಟಿ ಗ್ರಾಮೀಣಾಭಿವೃದ್ಧಿ ನಿಧಿ ಸೇರಿದಂತೆ ಪಂಜಾಬ್‌ನ 9,000 ಕೋಟಿ ರೂಪಾಯಿ ಹಣವನ್ನು ತಡೆಹಿಡಿದಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು. “ಇದು ಅವರ ಮೋದಿ) ಹಣವಲ್ಲ, ಇದು ಪಂಜಾಬ್ ಜನರ ಹಣ” ಎಂದು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಪಲ್ಟಿ; 6 ಮಂದಿ ನಾಪತ್ತೆ

17 ಮಂದಿ ಪ್ರಯಾಣಿಸುತ್ತಿದ್ದ ದೋಣಿಯೊಂದು ಗಂಗಾ ನದಿಯಲ್ಲಿ ಪಲ್ಟಿಯಾಗಿರುವ ಘಟನೆ ಬಿಹಾರ...

ನೀರಿನ ಸಮಸ್ಯೆ| ದೆಹಲಿ ಜಲ ಮಂಡಳಿ ಕಚೇರಿ ಧ್ವಂಸಗೊಳಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತರು

ದೆಹಲಿಯಲ್ಲಿ ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಬಿಜೆಪಿಯ ಮಹಿಳಾ ಪ್ರತಿಭಟನಾಕಾರರು ಚತ್ತರ್‌ಪುರದಲ್ಲಿರುವ...

ಕಾಂಗ್ರೆಸ್ ಕಚೇರಿಯಲ್ಲಿ ಅಕಾಡೆಮಿ ಅಧ್ಯಕ್ಷರು ವರದಿ ಒಪ್ಪಿಸುವುದು – ಅರ್ವೆಲ್ ಮಾತನ್ನು ನೆನಪಿಸುತ್ತದೆ

'ದ್ವಂದಾಲೋಚನೆ ಎಂದರೆ ಏಕಕಾಲದಲ್ಲಿ ಮನಸ್ಸಿನಲ್ಲಿ ಎರಡು ತದ್ವಿರುದ್ಧ ನಂಬಿಕೆಗಳನ್ನು ಇಟ್ಟುಕೊಳ್ಳುವುದು ಮತ್ತು...