ಅಮುಲ್‍ ಹೇರಿಕೆ | ಸಾರ್ವಜನಿಕರಿಗೆ ನಂದಿನಿ ಉತ್ಪನ್ನ ಹಂಚಿ ಡಿಕೆಶಿ ಪ್ರತಿಭಟನೆ

Date:

Advertisements
  • ಅಮುಲ್‌ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಡಿಕೆಶಿ
  • ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ

ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯಾಗಿರುವ ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್‌ ಹಾಸನದ ಹೇಮಾವತಿ ಪ್ರತಿಮೆ ಬಳಿ ಇದ್ದ ನಂದಿನಿ ಹಾಲಿನ ಕೇಂದ್ರದ ಬಳಿ ‘ಫ್ಲೇವರ್ಡ್ ಮಿಲ್ಕ್’ ಕುಡಿಯುತ್ತಾ ಸಾರ್ವಜನಿಕರೊಂದಿಗೆ ಚರ್ಚಿಸಿದರು.

ಈ ಸುದ್ದಿ ಓದಿದ್ದೀರಾ? : ಚಾಮರಾಜನಗರ | ನಂದಿನಿ – ಅಮೂಲ್‌ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

Advertisements

ನಂತರ, ನಂದಿನಿ ಕೇಂದ್ರದಲ್ಲಿದ್ದ ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿದಂತೆ ಹಲವಾರು ಉತ್ಪನ್ನಗಳನ್ನು ಖರೀದಿಸಿ, ಸ್ಥಳದಲ್ಲಿದ್ದ ಸಾರ್ವಜನಿಕರಿಗೆ, ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಹಂಚಿ ವಿನೂತ ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ಅಮುಲ್ ಉತ್ಪನ್ನಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಹಾಗೂ ಗುಜರಾತಿನ ಕಂಪನಿಯು ಕಳೆದ ಕೆಲ ದಿನಗಳಿಂದ ಯತ್ನಿಸುತ್ತಿದ್ದು, ಇದಕ್ಕೆ ವಿಪಕ್ಷಗಳು ಸೇರಿದಂತೆ ಕನ್ನಡಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಆಯತಪ್ಪಿ ಹೊಳೆಗೆ ಬಿದ್ದು ರೈತ ದುರ್ಮರಣ

ರೈತರೊಬ್ಬರು ಆಯತಪ್ಪಿ ಹೊಳೆಗೆ ಬಿದ್ದು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ...

‘ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ’ ಎಂದ ಬಿಜೆಪಿ ನಾಯಕ ಅನುರಾಗ್ ಠಾಕೂರ್; ಟ್ರೋಲ್‌ಗೆ ಗುರಿ

"ಭಗವಾನ್ ಹನುಮಂತ ಮೊದಲ ಬಾಹ್ಯಾಕಾಶ ಯಾತ್ರಿಕ" ಎಂದು ಹೇಳುವ ಮೂಲಕ ಬಿಜೆಪಿ...

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ...

Download Eedina App Android / iOS

X