- ಅಮುಲ್ ವಿರೋಧಿಸಿ ವಿನೂತನ ಪ್ರತಿಭಟನೆ ನಡೆಸಿದ ಡಿಕೆಶಿ
- ಹಾಸನದ ಹೇಮಾವತಿ ಪ್ರತಿಮೆ ಬಳಿ ನಡೆದ ಪ್ರತಿಭಟನೆ
ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯಾಗಿರುವ ಕೆಎಂಎಫ್‌ನ್ನು ಗುಜರಾತಿನ ಅಮುಲ್‌ನೊಂದಿಗೆ ವಿಲೀನ ಮಾಡುವುದನ್ನು ವಿರೋಧಿಸಿ, ನಂದಿನಿ ಉತ್ಪನ್ನಗಳನ್ನು ಉಚಿತವಾಗಿ ಹಂಚುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ಕಾರ್ಯಕ್ರಮ ನಿಮಿತ್ತ ಹಾಸನಕ್ಕೆ ಭೇಟಿ ನೀಡಿದ್ದ ಡಿ.ಕೆ ಶಿವಕುಮಾರ್ ಹಾಸನದ ಹೇಮಾವತಿ ಪ್ರತಿಮೆ ಬಳಿ ಇದ್ದ ನಂದಿನಿ ಹಾಲಿನ ಕೇಂದ್ರದ ಬಳಿ ‘ಫ್ಲೇವರ್ಡ್ ಮಿಲ್ಕ್’ ಕುಡಿಯುತ್ತಾ ಸಾರ್ವಜನಿಕರೊಂದಿಗೆ ಚರ್ಚಿಸಿದರು.
ಈ ಸುದ್ದಿ ಓದಿದ್ದೀರಾ? : ಚಾಮರಾಜನಗರ | ನಂದಿನಿ – ಅಮೂಲ್ ವಿಲೀನ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ
ನಂತರ, ನಂದಿನಿ ಕೇಂದ್ರದಲ್ಲಿದ್ದ ಹಾಲು, ತುಪ್ಪ, ಮಜ್ಜಿಗೆ, ಮೈಸೂರ್ ಪಾಕ್ ಸೇರಿದಂತೆ ಹಲವಾರು ಉತ್ಪನ್ನಗಳನ್ನು ಖರೀದಿಸಿ, ಸ್ಥಳದಲ್ಲಿದ್ದ ಸಾರ್ವಜನಿಕರಿಗೆ, ಬೆಂಬಲಿಗರಿಗೆ ಹಾಗೂ ಕಾರ್ಯಕರ್ತರಿಗೆ ಹಂಚಿ ವಿನೂತ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಅಮುಲ್ ಉತ್ಪನ್ನಗಳನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಹಾಗೂ ಗುಜರಾತಿನ ಕಂಪನಿಯು ಕಳೆದ ಕೆಲ ದಿನಗಳಿಂದ ಯತ್ನಿಸುತ್ತಿದ್ದು, ಇದಕ್ಕೆ ವಿಪಕ್ಷಗಳು ಸೇರಿದಂತೆ ಕನ್ನಡಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.