ವಿಶ್ಲೇಷಣೆ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ; ಕಾಂಗ್ರೆಸ್‌ಗೆ ʼಡು ಆರ್‌ ಡೈʼ!

Date:

ವಿಧಾನ ಪರಿಷತ್‌ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ತಣ್ಣಗೆ ಏರುತ್ತಿದೆ. ಕಾಂಗ್ರೆಸ್ ಪಕ್ಷ ಈ ಬಾರಿ ಶತಾಯಗತಾಯ ಗೆಲ್ಲುವ ಪಣ ತೊಟ್ಟಂತೆ ಕಾಣುತ್ತಿದೆ. ವರ್ಷಕ್ಕೂ ಮೊದಲೆ ಅಭ್ಯರ್ಥಿ ಘೋಷಣೆ ಮಾಡಿದೆ. ಜೆಡಿಎಸ್- ಬಿಜೆಪಿಯಲ್ಲಿ (ಎನ್‌ಡಿಎ ಮೈತ್ರಿ) ಇನ್ನು ಟಿಕೆಟ್ ಕಸರತ್ತು ಮುಂದುವರೆದಿದೆ. ಇಲ್ಲಿವರೆಗೂ ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿಲ್ಲ. ಈ ಬಾರಿ ಹಠಕ್ಕೆ ಬಿದ್ದಾದರೂ ಗೆಲ್ಲಲೇಬೇಕು.

- Advertisement -

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದರ್ಗ, ದಾವಣಗೆರೆ (ಹರಿಹರ, ಜಗಳೂರು, ದಾವಣಗೆರೆ ತಾಲೂಕುಗಳು ಮಾತ್ರ) ಸೇರಿ 5 ಜಿಲ್ಲೆಯ ಪದವೀಧರ ಮತದಾರರು ಮತದಾನ ಮಾಡುವ ಅರ್ಹತೆ ಹೊಂದಿದ್ದಾರೆ. 36 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತಿದ್ದು, ಇದರಲ್ಲಿ ಕಾಂಗ್ರೆಸ್ ನ 26, ಬಿಜೆಪಿಯ 4 ಹಾಗೂ ಜೆಡಿಎಸ್ ನ 4 ಮಂದಿ ಶಾಸಕರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅಗ್ನೇಯ ಪದವೀಧರ ಕ್ಷೇತ್ರದ ಪ್ರಸ್ತುತ ಅವಧಿ 2026ರ ನವೆಂಬರ್‌ಗೆ ಮುಕ್ತಾಯಗೊಳ್ಳಲಿದೆ. ಈಗ ಬಿಜೆಪಿಯ ಚಿದಾನಂದ ಎಂ.ಗೌಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಕಳೆದ ಬಾರಿ ಜೆಡಿಎಸ್‌ನಿಂದ ಚೌಡರೆಡ್ಡಿ ತೂಪಲ್ಲಿ, ಕಾಂಗ್ರೆಸ್‌ನಿಂದ ರಮೇಶ್ ಬಾಬು, ಬಂಡಾಯವಾಗಿ ಡಿ ಟಿ ಶ್ರೀನಿವಾಸ್ (ಈಗ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ), ಹಾಲೇನೂರು ಲೇಪಾಕ್ಷ ಸ್ಪರ್ಧಿಸಿದ್ದರು. ಚಿದಾನಂದಗೌಡ ಆಯ್ಕೆ ಆಗಿದ್ದರು.

WhatsApp Image 2026 02 14 at 3.27.27 PM

ಸರ್ಕಾರಿ ಉದ್ಯೋಗಸ್ಥರು ಮಾತ್ರ ಸಕ್ರಿಯವಾಗಿ ಪಲ್ಗೊಳ್ಳುತ್ತಾ ಬಂದಿರುವ ಈ ಚುನಾವಣೆಯಲ್ಲಿ ನಿರುದ್ಯೋಗಿ ಪದವೀಧರರು, ಬೇರೆ ಬೇರೆ ವೃತ್ತಿಪರ ಪದವೀಧರರು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗಿದ್ದಾರೆ. ಹಾಗಾಗಿ ಪದವೀಧರ ಕ್ಷೇತ್ರದ ಚುನಾವಣಾ ಆಕಾಂಕ್ಷಿತರಿಗೆ ತಲೆ ಬಿಸಿ ಹೆಚ್ಚಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಲೆಕ್ಕಚಾರ ಬುಡಮೇಲಾಗುವ ಸಾಧ್ಯತೆಗಳೂ ಹೆಚ್ಚಾಗಿವೆ ಎನ್ನಲಾಗುತ್ತಿದೆ.

ಬಿಜೆಪಿ ಜೆಡಿಎಸ್ ದೋಸ್ತಿ ಟಿಕೆಟ್ ಫೈಟ್ ನಡುವೆ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್ ಸೈಲೆಂಟ್ ಆಗಿ ಪ್ರಚಾರ ಆರಂಭಿಸಿದ್ದಾರೆ. ಈ ಐದು ಜಿಲ್ಲೆಗಳನ್ನು ಸುತ್ತುತ್ತಿದ್ದಾರೆ. ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿ ತಿಂಗಳಾಗಿದೆ. ಈ ನಡುವೆ ಬಿಜೆಪಿ- ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಟಿಕೆಟ್‌ಗಾಗಿ ಕಾಯುತ್ತಿದ್ದಾರೆ. ಪ್ರಚಾರಕ್ಕೆ ಟಿಕೆಟ್ ಘೋಷಣೆ ಅಡ್ಡಿಯಾಗಿದೆ.

ಹಾಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯರಿರುವುದರಿಂದ (ಚಿದಾನಂದ ಎಂ.ಗೌಡ) ಬಿಜೆಪಿ ಟಿಕೆಟನ್ನು ಜೆಡಿಎಸ್‌ಗೆ ಬಿಟ್ಟು ಕೊಡುತ್ತಾ ಎಂಬ ಚರ್ಚೆಯ ನಡುವೆ ಹಳೆ ಮೖಸೂರು ಭಾಗದ ಜಿಲ್ಲೆಗಳೇ ಹೆಚ್ಚಿರುವ ಈ ಭಾಗದಲ್ಲಿ ಜೆಡಿಎಸ್ ಕೂಡ ಬಿಜೆಪಿಗೆ ಟಿಕೆಟ್ ಬಿಟ್ಟುಕೊಡುವುದು ಸುಲಭದ ಮಾತಲ್ಲ. ಈ ನಡುವೆ ಬಿಜೆಪಿ ರಾಜ್ಯ ಘಟಕದ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಹೈಕಮಾಂಡ್‌ಗೆ ಮೂರು ಹೆಸರುಗಳನ್ನು ಶಿಫಾರಸು ಮಾಡಲಾಗಿದ್ದು, ಟಿಕೆಟ್‌ ಯಾರ ಪಾಲಾಗಲಿದೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಜೋರಾಗಿಯೇ ನಡೆಯುತ್ತಿದೆ. ಪದವೀಧರ ಕ್ಷೇತ್ರದ ಟಿಕೆಟ್ ಗೆ ಜೆಡಿಎಸ್ ಪಟ್ಟು ಹಿಡಿಯುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.

ಜೆಡಿಎಸ್‌ಗೆ ಬಿಜೆಪಿ ಟಿಕೆಟ್‌ ಬಿಟ್ಟುಕೊಟ್ಟರೆ ಕೋಲಾರದ ಚೌಡರೆಡ್ಡಿ ತೂಪಲ್ಲಿ ಅವರ ಬಣ ಪ್ರಬಲವಾಗಿದೆ. ಈ ನಡುವೆ ತುಮಕೂರು ಜಿಲ್ಲೆಯ ಜೆಡಿಎಸ್ ನೂತನ ಜಿಲ್ಲಾ ಅಧ್ಯಕ್ಷರಾಗಿರುವ ಎಚ್ ನಿಂಗಪ್ಪ ಕೂಡ ಅಭ್ಯರ್ಥಿಯಾಗುವ ಚರ್ಚೆ ಎನ್ ಡಿಎ ಪಾಳ್ಯದಲ್ಲಿ ಕೇಳಿಬರುತ್ತಿದೆ. ಜಾತಿ ಸಮೀಕರಣವು ಹೊಂದಿಕೆ ಆಗುವ ಲೆಕ್ಕಾಚಾರವಿದೆ. ಬಿಜೆಪಿ ಟಿಕೆಟ್‌ ರೇಸ್‌ನಲ್ಲಿ ತುಮಕೂರಿನ ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎನ್‌ ಬಿ ಪ್ರದೀಪ್‌ ಕುಮಾರ್‌, ದಾವಣಗೆರೆಯ ಸೋಮೇಶ್ವರ ವಿದ್ಯಾಲಯದ ಕಾರ್ಯದರ್ಶಿ ಕೆ ಎಂ ಸುರೇಶ್‌ ಹೆಸರು ಮುಂಚೂಣಿಯಲ್ಲಿದೆ. ಜತೆಗೆ ಬೆಂಗಳೂರಿನ ವಕೀಲ ವಸಂತಕುಮಾರ್‌, ವಿಪ ಮಾಜಿ ಸದಸ್ಯ ವೈ ಎ ನಾರಾಯಣಸ್ವಾಮಿ ಹೆಸರುಗಳು ಹೆಚ್ಚಾಗಿ ಕೇಳಿಬರುತ್ತಿವೆ. ತೆರೆ ಮರೆಯಲ್ಲಿ ಟಿಕೆಟ್ ಫೈಟ್ ಜೋರಾಗಿದೆ.

ನವೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಗೆ ಆಡಳಿತಾರೂಢ ಕಾಂಗ್ರೆಸ್‌ ಪಕ್ಷ ವರ್ಷಕ್ಕೂ ಮೊದಲೇ ಟಿಕೆಟ್‌ ಘೋಷಿಸಿರುವುದು ಅಭ್ಯರ್ಥಿ ಶಶಿ ಹುಲಿಕುಂಟೆ ಮಠ್‌ ಹಾಗೂ ಪಕ್ಷದ ಕಾರ್ಯಕರ್ತರಿಗೆ ಮತಬೇಟೆಗೆ ವರದಾನವಾಗಿದೆ. ಮೂಲತಃ ತುಮಕೂರು ಜಿಲ್ಲೆಯವರಾದ ಶಶಿ ಹುಲಿಕುಂಟೆ ಮಠ್ ತುಮಕೂರು ಮಾತ್ರವಲ್ಲದೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಸೇರಿದಂತೆ ಐದು ಜಿಲ್ಲೆಗಳಲ್ಲಿ ಪ್ರಚಾರ ಆರಂಭಿಸಿದ್ದಾರೆ. ಬಿಜೆಪಿ, ಜೆಡಿಎಸ್ ಟಿಕೆಟ್ ಆಕಾಂಕ್ಷಿತರಿಗೆ ಪ್ರಚಾರ ಮಾಡುವುದೇ ಸಾವಲಾಗುವ ಸಾಧ್ಯತೆ ಇದೆ. ಕೊನೆ ಕ್ಷಣದಲ್ಲಿ ಟಿಕೆಟ್ ನೀಡಿದರೆ ಮೈತ್ರಿ ಅಭ್ಯರ್ಥಿಗೆ ಪ್ರಚಾರ ಮಾಡುವುದಿರಲಿ ಐದು ಜಿಲ್ಲೆಯ ಮತದಾರರನ್ನು ಭೇಟಿಯಾಗುವುದೂ ಕಷ್ಟವಾಗಲಿದೆ ಎನ್ನುವ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ: ತುಮಕೂರು | ಸಾರ್ವತ್ರಿಕ ಮುಷ್ಕರ : ಬಿಎಸ್ಎನ್ಎಲ್ ಕಚೇರಿ ಮುತ್ತಿಗೆಗೆ ಯತ್ನ

ಒಟ್ಟಾರೆ ನೋಡಿದರೆ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಈ ಬಾರಿ ಹಿಂದಿನಂತಿಲ್ಲ. ಮತದಾರರ ಸ್ವರೂಪ ಬದಲಾಗುತ್ತಿದೆ, ನಿರುದ್ಯೋಗಿ ಹಾಗೂ ವಿವಿಧ ವೃತ್ತಿಪರ ಪದವೀಧರರ ಭಾಗವಹಿಸುವಿಕೆ ಹೆಚ್ಚಾಗಿದೆ. ಇದರಿಂದ ಲೆಕ್ಕಾಚಾರಗಳು ಸುಲಭವಾಗಿಲ್ಲ. ಕಾಂಗ್ರೆಸ್ ಪಕ್ಷ ಮುಂಚಿತ ತಯಾರಿಯೊಂದಿಗೆ ಪ್ರಚಾರದಲ್ಲಿ ಮುನ್ನಡೆ ಸಾಧಿಸಿರುವಾಗ, ಬಿಜೆಪಿ–ಜೆಡಿಎಸ್ ಮೈತ್ರಿಯಲ್ಲಿ ಟಿಕೆಟ್ ಗೊಂದಲವೇ ಪ್ರಮುಖ ದೌರ್ಬಲ್ಯವಾಗಿ ಕಾಣುತ್ತಿದೆ. ಟಿಕೆಟ್ ವಿಳಂಬವಾದಷ್ಟೂ ಮೈತ್ರಿ ಅಭ್ಯರ್ಥಿಗೆ ಕಾಲದ ಕೊರತೆ ಎದುರಾಗಲಿದೆ. ಪ್ರಚಾರದ ಒತ್ತಡ ಮತ್ತು ಸಂಘಟನೆಯ ಸವಾಲುಗಳು ಹೆಚ್ಚಾಗಲಿವೆ. ಬಿಜೆಪಿ–ಜೆಡಿಎಸ್ ಟಿಕೆಟ್ ಯಾರ ಕೈ ಸೇರುತ್ತದೆ, ಜಾತಿ–ಪ್ರಾದೇಶಿಕ ಸಮೀಕರಣಗಳು ಹೇಗೆ ಹೊಂದಿಕೊಳ್ಳುತ್ತವೆ ಮತ್ತು ಕಾಂಗ್ರೆಸ್ ತನ್ನ ಮುನ್ನಡೆಯನ್ನು ಮತಗಳಾಗಿ ಪರಿವರ್ತಿಸಿಕೊಳ್ಳುತ್ತದೆಯೇ ಎಂಬುದರ ಮೇಲೆ ಈ ಕ್ಷೇತ್ರದ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

WhatsApp Image 2024 08 09 at 10.52.48 1578a566
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...